28 ಲೋಕಸಭೆ ಗೆಲ್ಲಿಸಿ ಮೋದಿಗೆ ಕೊಡುಗೆ

Published : May 18, 2018, 09:15 AM IST
28 ಲೋಕಸಭೆ ಗೆಲ್ಲಿಸಿ ಮೋದಿಗೆ ಕೊಡುಗೆ

ಸಾರಾಂಶ

ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಗೆಲುವಿಗೆ ಶ್ರಮ ವಹಿಸಿದ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪ್ರತಿ ಫಲವಾಗಿ ಮುಂದಿನ ಲೋಕಸಭಾ ಚುನಾವಣೆಯಲ್ಲಿ ರಾಜ್ಯದ 28 ಕ್ಕೆ 28 ಲೋಕಸಭಾ ಕ್ಷೇತ್ರಗಳಲ್ಲೂ ಪಕ್ಷವನ್ನು ಗೆಲ್ಲಿಸಿ ಕೊಡುಗೆಯಾಗಿ ನೀಡಬೇಕು ಎಂದು ನೂತನ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಕರೆ ನೀಡಿದ್ದಾರೆ.

ಬೆಂಗಳೂರು  (ಮೇ 18) : ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಗೆಲುವಿಗೆ ಶ್ರಮ ವಹಿಸಿದ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪ್ರತಿ ಫಲವಾಗಿ ಮುಂದಿನ ಲೋಕಸಭಾ ಚುನಾವಣೆಯಲ್ಲಿ ರಾಜ್ಯದ 28 ಕ್ಕೆ 28 ಲೋಕಸಭಾ ಕ್ಷೇತ್ರಗಳಲ್ಲೂ ಪಕ್ಷವನ್ನು ಗೆಲ್ಲಿಸಿ ಕೊಡುಗೆಯಾಗಿ ನೀಡಬೇಕು ಎಂದು ನೂತನ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಕರೆ ನೀಡಿದ್ದಾರೆ.

ಮಲ್ಲೇಶ್ವರದಲ್ಲಿನ ಬಿಜೆಪಿ ಕಚೇರಿಯಲ್ಲಿ ಪಕ್ಷದ ನಾಯಕರು ಗುರುವಾರ ಸಂಜೆ ಆಯೋಜಿಸಿದ್ದ ಅಭಿನಂದನಾ ಕಾರ್ಯ ಕ್ರಮದಲ್ಲಿ ಅಭಿನಂದನೆ ಸ್ವೀಕರಿಸಿದ ನಂತರ  ಅವರು ಅತ್ಯುತ್ಸಾಹದಿಂದ ಮಾತನಾಡಿದರು. ಮುಂದಿನ ದಿನದಲ್ಲಿ ನಡೆಯುವ ಯಾವುದೇ ಚುನಾವಣೆಯಲ್ಲಿಯೂ ಪಕ್ಷಕ್ಕೆ ಹಿನ್ನಡೆಯಾಗಬಾರದು. ಪ್ರಧಾನಿ ನರೇಂದ್ರ ಮೋದಿ ಅವರು ವಿಧಾನಸಭೆ ಚುನಾವಣೆಯಲ್ಲಿ ನಮ್ಮೆಲ್ಲರನ್ನು ಗೆಲ್ಲಿಸಲು ಸಾಕಷ್ಟು ಶ್ರಮ ವಹಿಸಿದ್ದಾರೆ. 

ಅವರನ್ನು ಮತ್ತೊಮ್ಮೆ ಪ್ರಧಾನಿ ಯನ್ನಾಗಿ ಮಾಡಲು ರಾಜ್ಯದ 28 ಲೋಕಸಭಾ ಕ್ಷೇತ್ರಗಳನ್ನೂ ಬಿಜೆಪಿ ಗೆದ್ದು ಕೊಡುಗೆಯಾಗಿ ನೀಡಬೇಕು ಎಂದು ಹೇಳಿದರು. ವಿಧಾನಪರಿಷತ್‌ನ ಶಿಕ್ಷಕರ, ಪದವೀಧರ ಕ್ಷೇತ್ರದ ಚುನಾವಣೆ, ಉಪಚುನಾವಣೆಗಳು ಬರಲಿವೆ. ಮುಂದಿನ ಚುನಾವಣೆಯಲ್ಲಿ ಅಭ್ಯರ್ಥಿಗಳು ಯಾರೇ ನಿಂತರೂ ಬಿಜೆಪಿ ಗೆಲ್ಲಬೇಕು. ಎಲ್ಲಾ ರೀತಿಯ ಸವಾಲು ಎದುರಿಸಬೇಕು. ಇದಕ್ಕೆ ಎಲ್ಲಾ ರೀತಿ ಸಹಕಾರ ನೀಡಲಾಗುವುದು ಎಂದರು. 

ಪ್ರಧಾನಿ ನರೇಂದ್ರ ಮೋದಿ ವಿಶ್ವವೇ ಮೆಚ್ಚಿದ ನಾಯಕರಾಗಿದ್ದಾರೆ. ಕಾಂಗ್ರೆಸ್ ಮುಕ್ತ ಭಾರತ ಮಾಡುವ ಅವರ ಕನಸನ್ನು ರಾಜ್ಯದಲ್ಲಿ ನನಸು ಮಾಡಲಾಗಿದೆ. ಕಾಂಗ್ರೆಸ್ ಮುಕ್ತ ಕರ್ನಾಟಕ ಮಾಡಲಾಗಿದ್ದು, ಬಹು ಮತ ಸಾಬೀತುಪಡಿಸಬೇಕಾಗಿದೆ.

ಪಕ್ಷದ ನಾಯಕರ ಮೇಲೆ ಪ್ರಧಾನಿ ನರೇಂದ್ರ ಮೋದಿ, ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ವಿಶ್ವಾಸ ಇಟ್ಟಿದ್ದು, ಆ ವಿಶ್ವಾಸಕ್ಕೆ ಧಕ್ಕೆ ಬಾರದಂತೆ ನಡೆದು ಕೊಳ್ಳ ಬೇಕಿದೆ. ಬಿಜೆಪಿಯ ಗೆಲುವಿನ ಅಲೆಯನ್ನು ಕಲ್ಪನೆ ಮಾಡಲು ಸಾಧ್ಯವಾಗುವುದಿಲ್ಲ. ವಾಪಸ್ ಕ್ಷೇತ್ರಕ್ಕೆ ಹಿಂತಿರುಗಿದಾಗ ಅದರ ಅನುಭವವಾಗಲಿದೆ ಎಂದು ತಿಳಿಸಿದರು.

PREV
click me!

Recommended Stories

ಕರ್ನಾಟಕ ಬಂದ್ : ಖಾಸಗಿ ಮ್ಯಾಕ್ಸಿಕ್ಯಾಬ್, ಪೆಟ್ರೋಲ್ ಯಥಾಸ್ಥಿತಿ
ಚುನಾವಣಾ ಪ್ರಚಾರದಿಂದ ದೂರ ಉಳಿದ ಎಸ್ ಎಂ ಕೃಷ್ಣ