ಪ್ರಚಾರ ಅಖಾಡಕ್ಕೆ ಧುಮುಕಿದ ಯಡಿಯೂರಪ್ಪ ಪುತ್ರ ವಿಜಯೇಂದ್ರ

First Published Apr 28, 2018, 12:08 PM IST
Highlights

ವರುಣಾ ಕ್ಷೇತ್ರದ ಬಿಜೆಪಿ ಟಿಕೆಟ್ ಕೈ ತಪ್ಪಿದ ಮೇಲೆ ಮೊದಲ ಬಾರಿಗೆ ಯಡಿಯೂರಪ್ಪ ಪುತ್ರ ವಿಜಯೇಂದ್ರ ಅಭ್ಯರ್ಥಿಗಳ ಪರ ಪ್ರಚಾರಕ್ಕೆ ಧುಮುಕಿದ್ದಾರೆ.  ನಾಲ್ಕು ದಿನಗಳ ಕಾಲ ಕಾರ್ಯಕರ್ತರ ಜೊತೆ ಕಾಣಿಸಿಕೊಳ್ಳದ ವಿಜಯೇಂದ್ರ ಇದೀಗ ಇಂದು ಮೊದಲ ಬಾರಿಗೆ ಚಾಮರಾಜನಗರ ಜಿಲ್ಲೆಯ ಮೂರು ಕ್ಷೇತ್ರಗಳಲ್ಲಿ ಭರ್ಜರಿ ಪ್ರಚಾರ ಕಾರ್ಯದಲ್ಲಿ ತೊಡಗಿದ್ದಾರೆ. 

ಚಾಮರಾಜನಗರ :  ವರುಣಾ ಕ್ಷೇತ್ರದ ಬಿಜೆಪಿ ಟಿಕೆಟ್ ಕೈ ತಪ್ಪಿದ ಮೇಲೆ ಮೊದಲ ಬಾರಿಗೆ ಯಡಿಯೂರಪ್ಪ ಪುತ್ರ ವಿಜಯೇಂದ್ರ ಅಭ್ಯರ್ಥಿಗಳ ಪರ ಪ್ರಚಾರಕ್ಕೆ ಧುಮುಕಿದ್ದಾರೆ.  ನಾಲ್ಕು ದಿನಗಳ ಕಾಲ ಕಾರ್ಯಕರ್ತರ ಜೊತೆ ಕಾಣಿಸಿಕೊಳ್ಳದ ವಿಜಯೇಂದ್ರ ಇದೀಗ ಇಂದು ಮೊದಲ ಬಾರಿಗೆ ಚಾಮರಾಜನಗರ ಜಿಲ್ಲೆಯ ಮೂರು ಕ್ಷೇತ್ರಗಳಲ್ಲಿ ಭರ್ಜರಿ ಪ್ರಚಾರ ಕಾರ್ಯದಲ್ಲಿ ತೊಡಗಿದ್ದಾರೆ. 

ಬಿಜೆಪಿ ಅಭ್ಯರ್ಥಿಗಳ ಪರ ಪ್ರಚಾರದ ಅಖಾಡಕ್ಕೆ ಧುಮುಕಿದ್ದು, ವೀರಶೈವ ಲಿಂಗಾಯಿತ ಮತದಾರರು ಹೆಚ್ಚಿನ ಸಂಖ್ಯೆಯಲ್ಲಿ ಇರುವ ಗ್ರಾಮಗಳಲ್ಲಿ ವಿಜಯೇಂದ್ರ ಮತಬೇಟೆ ಮಾಡುತ್ತಿದ್ದಾರೆ. ಚಾಮರಾಜನಗರ, ಕೊಳ್ಳೇಗಾಲ ಮತ್ತು ಹನೂರು ಕ್ಷೇತ್ರಗಳ ಬಿಜೆಪಿ ಅಭ್ಯರ್ಥಿಗಳ ಪರ ಅವರು ಕೊಳ್ಳೇಗಾಲ ಕ್ಷೇತ್ರದ ಆಲ್ದೂರು ಗ್ರಾಮದಿಂದ ಪ್ರಚಾರ ಆರಂಭ ಮಾಡಿದ್ದಾರೆ. ಆಲ್ದೂರು, ನವಿಲೂರು, ಹುಂಡಿಕೆರೆ, ಜನ್ನೂರು, ಉಮ್ಮತ್ತೂರು, ಕುದೇರು ಮತ್ತು ಸಂತೇಮರಹಳ್ಳಿ ಸೇರಿದಂತೆ ವಿವಿಧ ಗ್ರಾಮಗಳಲ್ಲಿ ಪ್ರಚಾರ ಮಾಡುತ್ತಿದ್ದಾರೆ. 

ಕೊಳ್ಳೇಗಾಲದಿಂದ ಜಿ.ಎನ್.ನಂಜುಂಡಸ್ವಾಮಿ ಕಣಕ್ಕೆ ಇಳಿದಿದ್ದು, ನೋಟಾ ಮತ ಹಾಕದಂತೆ ಕಾರ್ಯಕರ್ತರಲ್ಲಿ ವಿಜಯೇಂದ್ರ ಮನವಿ ಮಾಡಿದ್ದಾರೆ. 

ಎಚ್.ಡಿಕೆಗೆ ತಿರುಗೇಟು : ಇನ್ನು ಇದೇ ವೇಳೆ ಕಾಂಗ್ರೆಸ್ ಜೊತೆ ಒಳ ಒಪ್ಪಂದ ಮಾಡಿಕೊಳ್ಳಲಾಗಿದೆ ಎನ್ನುವ ಎಚ್ ಡಿಕೆ ಆರೋಪಕ್ಕೆ ವಿಜಯೇಂದ್ರ ತಿರುಗೇಟು ನೀಡಿದ್ದಾರೆ. ನಮ್ಮದು ರಾಷ್ಟ್ರೀಯ ಪಕ್ಷ, ಮತ್ತೊಂದು ರಾಷ್ಟ್ರೀಯ ಪಕ್ಷದ ಜೊತೆ ಒಳ ಒಪ್ಪಂದ ಸಾಧ್ಯವೇ ಇಲ್ಲ ಎಂದಿದ್ದಾರೆ.

ಇನ್ನು ಟಿಕೆಟ್ ಕೈ ತಪ್ಪಿದ ಬಗ್ಗೆ ಪ್ರಸ್ತಾಪ ಮಾಡಿದ ಅವರು ಈ ಬಗ್ಗೆ ಬೇಸರವಿಲ್ಲ, ಪ್ರಚಾರದ ಕೊನೆ ದಿನದವರೆಗೂ  ಚಾಮರಾಜನಗರ, ಮೈಸೂರು, ಹಾಸನ ಜಿಲ್ಲೆಗಳಲ್ಲಿ ಅಭ್ಯರ್ಥಿಗಳ ಪರ ಪ್ರಚಾರ ಮಾಡುತ್ತೇನೆ ಎಂದು ಹೇಳಿದ್ದಾರೆ.

ವರುಣಾ ಕ್ಷೇತ್ರದಿಂದ ಬಿಜೆಪಿಯಿಂದ ಚುನಾವಣಾ ಅಖಾಡಕ್ಕೆ ಇಳಿದು ಸಿದ್ದರಾಮಯ್ಯ ಪುತ್ರಗೆ  ಬಿಗ್ ಫೈಟ್ ನೀಡುತ್ತಾರೆ ಎನ್ನುವ ವಿಚಾರಕ್ಕೆ ಕೊನೆಯ ಕ್ಷಣದಲ್ಲಿ ಟ್ವಿಸ್ಟ್ ಸಿಕ್ಕಿತ್ತು. ವರುಣಾದಿಂದ ತಮ್ಮ ಪುತ್ರ ಚುನಾವಣೆಯಲ್ಲಿ ಸ್ಪರ್ಧೆ ಮಾಡುವುದಿಲ್ಲ ಎಂದು ಯಡಿಯೂರಪ್ಪ ಅವರು ಘೋಷಣೆ ಮಾಡಿದ್ದರು. 

click me!