
ಬೆಂಗಳೂರು : ಇಂದು ರಾಜ್ಯದಲ್ಲಿ ಬಿರುಸಿನ ಮತದಾನ ಪ್ರಕ್ರಿಯೆ ಆರಂಭವಾಗಿದೆ. ರಾಜ್ಯದೆಲ್ಲೆಡೆ ಮತದಾರರು ಮತಗಟ್ಟೆಗಳಲ್ಲಿ ಸರತಿ ಸಾಲಿನಲ್ಲಿ ನಿಂತು ಮತ ಚಲಾಯಿಸುತ್ತಿದ್ದಾರೆ. ಅಭ್ಯರ್ಥಿಗಳ ಭವಿಷ್ಯ ಬರೆಯಲು ವಿವಿಧೆಡೆ ಮತ ಚಲಾವಣೆ ಮಾಡಲಾಗುತ್ತಿದೆ.
ಇದೇ ವೇಳೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಜನರಿಗೆ ಮತ ಚಲಾಯಿಸುವಂತೆ ಕರೆ ನೀಡಿದ್ದಾರೆ. ಪ್ರತಿಯೊಬ್ಬರೂ ಕೂಡ ಮತ ಚಲಾಯಿಸಿ, ಪ್ರಜಾಪ್ರಭುತ್ವ ಎತ್ತಿ ಹಿಡಿಯಿರಿ ಎಂದು ಸಿಎಂ ರಾಜ್ಯದ ಮತದಾರರಿಗೆ ಕರೆ ನೀಡಿದ್ದಾರೆ.
ವಿಶೇಷವಾಗಿ ಯುವಜನತೆ ವೋಟ್ ಮಾಡಬೇಕು ಎಂದು ಸಿಎಂ ಟ್ವೀಟ್ ಮಾಡುವ ಮೂಲಕ ಮನವಿ ಮಾಡಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಟ್ವಿಟರ್ ಮೂಲಕ ಮತದಾನಕ್ಕೆ ಪ್ರೇರಣೆ ನೀಡಿದ್ದು, ತಪ್ಪದೇ ಮತದಾನ ಮಾಡುವಂತೆ ಕರೆ ನೀಡಿದ್ದಾರೆ.