ಗಾಂಧಿ ಪ್ರತಿಮೆ ಬಳಿ ಸಿದ್ದರಾಮಯ್ಯ ನೇತೃತ್ವದಲ್ಲಿ ಪ್ರತಿಭಟನೆ

First Published May 17, 2018, 10:23 AM IST
Highlights

ಕರ್ನಾಟಕ ಮುಖ್ಯಮಂತ್ರಿಯಾಗಿ ಬಿ.ಎಸ್ ಯಡಿಯೂರಪ್ಪ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕಾರ ಮಾಡಿದ್ದು, ಇದಕ್ಕೆ ಕಾಂಗ್ರೆಸ್ ಹಾಗೂ ಜೆಡಿಎಸ್ ಮುಖಂಡರಿಂದ ತೀವ್ರ ವಿರೋಧ ವ್ಯಕ್ತವಾಗಿದೆ. 104 ಸ್ಥಾನವನ್ನು ಪಡೆದುಕೊಂಡಿರುವ ಬಿಜೆಪಿ ಬಹುಮತವಿಲ್ಲದೇ ಅಧಿಕಾರ ಸ್ವೀಕಾರ ಮಾಡಿರುವ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿ, ವಿಧಾನಸೌಧದ ಗಾಂಧಿ ಪ್ರತಿಮೆ ಬಳಿ ಪ್ರತಿಭಟನೆ ನಡೆಸುತ್ತಿದ್ದಾರೆ. 

ಬೆಂಗಳೂರು (ಮೇ 17) : ಕರ್ನಾಟಕ ಮುಖ್ಯಮಂತ್ರಿಯಾಗಿ ಬಿ.ಎಸ್ ಯಡಿಯೂರಪ್ಪ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕಾರ ಮಾಡಿದ್ದು, ಇದಕ್ಕೆ ಕಾಂಗ್ರೆಸ್ ಹಾಗೂ ಜೆಡಿಎಸ್ ಮುಖಂಡರಿಂದ ತೀವ್ರ ವಿರೋಧ ವ್ಯಕ್ತವಾಗಿದೆ. 

104 ಸ್ಥಾನವನ್ನು ಪಡೆದುಕೊಂಡಿರುವ ಬಿಜೆಪಿ ಬಹುಮತವಿಲ್ಲದೇ ಅಧಿಕಾರ ಸ್ವೀಕಾರ ಮಾಡಿರುವ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿ, ವಿಧಾನಸೌಧದ ಗಾಂಧಿ ಪ್ರತಿಮೆ ಬಳಿ ಪ್ರತಿಭಟನೆ ನಡೆಸುತ್ತಿದ್ದಾರೆ. 

ಮಾಜಿ ಸಿಎಂ ಸಿದ್ದರಾಮಯ್ಯ, ಜಮೀರ್ ಅಹ್ಮದ್,  ಗುಲಾಂ ನಬಿ ಆಜಾದ್, ಪರಮೇಶ್ವರ್ ಸೇರಿದಂತೆ ವಿವಿಧ ಮುಖಂಡರರು ಪ್ರತಿಭಟನೆ ನಡೆಸುತ್ತಿದ್ದಾರೆ. 

ಕರ್ನಾಟಕದಲ್ಲಿ ಸರ್ಕಾರ ರಚನೆಗೆ ರಾಜ್ಯಪಾಲರು ಅವಕಾಶ ನೀಡಿರುವ ಸಂಬಂಧ ಪ್ರತಿಕ್ರಿಯಿಸಿದ ಕಾಂಗ್ರೆಸ್ ಮುಖಂಡರು ರಾಜ್ಯಪಾಲ ವಜುಭಾಯಿ ವಾಲ ಬಿಜೆಪಿ ಋಣ ತೀರಿಸುತ್ತಿದ್ದಾರೆ. ಬಿಜೆಪಿ ಸಂವಿಧಾನ ವಿರೋಧಿಯಾಗಿ ನಡೆದುಕೊಳ್ಳುತ್ತಿದೆ. ಬಹುಮತ ಇಲ್ಲದೆ ಯಡಿಯೂರಪ್ಪ ಅವರಿಗೆ ಪ್ರಮಾಣ ವಚನ ಸ್ವೀಕಾರಕ್ಕೆ ಹೇಗೆ ಅವಕಾಶ ಕೊಟ್ಟರು ಎಂದು ಪ್ರಶ್ನೆ ಮಾಡಿದ್ದಾರೆ. 

ಅಲ್ಲದೇ ಇದು ರಾಜ್ಯಪಾಲ ಬಿಜೆಪಿ ಪರ ಇದ್ದಾರೆ ಎಂಬುದನ್ನು ತೋರಿಸುತ್ತದೆ.  ಪ್ರಧಾನಿ ಮೋದಿ ಕುದುರೆ ವ್ಯಾಪಾರ ಮಾಡುತ್ತಿದ್ದಾರೆ. ಇದು ಸಂವಿಧಾನಕ್ಕೆ ವಿರುದ್ಧವಾಗಿ ನಡೆದುಕೊಳ್ಳುವ ಪರಿಯಾಗಿದೆ ಎಂದು ಯೂತ್ ಕಾಂಗ್ರೆಸ್ ಮುಖಂಡ ಮನೋಹರ್ ಹೇಳಿದ್ದಾರೆ. 

click me!