ಸ್ಪೀಕರ್'ಆಗಿ ರಮೇಶ್ ಕುಮಾರ್, ಪರಂ ಡಿಸಿಎಂ

First Published May 22, 2018, 7:57 PM IST
Highlights

ನಾಳೆ ಕುಮಾರಸ್ವಾಮಿ ಅವರ ಜೊತೆ ಉಪ ಮುಖ್ಯಮಂತ್ರಿಯಾಗಿ ಕಾಂಗ್ರೆಸ್'ನಿಂದ ಕೆಪಿಸಿಸಿ ಅಧ್ಯಕ್ಷ ಜಿ.ಪರಮೇಶ್ವರ್ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ.

ಬೆಂಗಳೂರು(ಮೇ.22): ಕರ್ನಾಟಕ ವಿದಾನಸಭಾ ಸ್ಪೀಕರ್ ಆಗಿ ಶ್ರೀನಿವಾಸಪುರದ ಕಾಂಗ್ರೆಸ್ ಶಾಸಕ ರಮೇಶ್ ಕುಮಾರ್ ಅವರನ್ನು ನೇಮಕ ಮಾಡಲಾಗಿದೆ. ಡೆಪ್ಯುಟಿ ಸ್ಪೀಕರ್ ಸ್ಥಾನವನ್ನು ಜೆಡಿಎಸ್'ಗೆ ನೀಡಲಾಗಿದೆ ಎಂದು  ಕಾಂಗ್ರೆಸ್ ಉಸ್ತುವಾರಿ ಕೆ.ಸಿ.ವೇಣುಗೋಪಾಲ್ ತಿಳಿಸಿದರು.
ಸಮನ್ವಯ ಸಮಿತಿಯಲ್ಲಿ ಮಾತನಾಡಿದ ಅವರು, ನಾಳೆ ಕುಮಾರಸ್ವಾಮಿ ಅವರ ಜೊತೆ ಉಪ ಮುಖ್ಯಮಂತ್ರಿಯಾಗಿ ಕಾಂಗ್ರೆಸ್'ನಿಂದ ಕೆಪಿಸಿಸಿ ಅಧ್ಯಕ್ಷ ಜಿ.ಪರಮೇಶ್ವರ್ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಮೈತ್ರಿ ಸೂತ್ರದ ಪ್ರಕಾರ ಕಾಂಗ್ರೆಸ್'ಗೆ 20 ಹಾಗೂ ಜೆಡಿಎಸ್'ಗೆ 12 ಸ್ಥಾನ ನೀಡಲಾಗಿದೆ. ಬಹುಮತ ಸಬೀತು ಪಡಿಸಿದ ನಂತರ ಎಲ್ಲ ಸಚಿವರು ಪ್ರಮಾಣ ವಚನ ಸ್ವೀಕರಿಸಲಿದ್ದಾರೆ.


ಮೇ.22 ರಂದು ಸಂಜೆ 4.30 ಗಂಟೆಗೆ ಕುಮಾರಸ್ವಾಮಿ ಅವರು ಕರ್ನಾಟಕ ರಾಜ್ಯದ 25ನೇ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ.     

click me!