ರಾಮನಗರ ಉಪಚುನಾವಣೆಗೆ ಜೆಡಿಎಸ್ ವಿರುದ್ಧ ಯೋಗಿ ?

First Published May 22, 2018, 4:13 PM IST
Highlights

ದಶಕಗಳಿಂದಲೂ ಬಿಜೆಪಿಗೆ ರೇಷ್ಮೆ ನಗರದಲ್ಲಿ ನೆಲೆಯಿಲ್ಲ. ಇಲ್ಲೇನಿದ್ದರೂ ಬಿಜೆಪಿ ಹಾಗೂ ಕಾಂಗ್ರೆಸ್ ಭದ್ರಕೋಟೆ. ಪಕ್ಕದ ಕ್ಷೇತ್ರದಲ್ಲಿ ವ್ಯಕ್ತಿ ನೆಲೆಯಲ್ಲಿ ಪ್ರಬಲ ನಾಯಕರಾಗಿರುವ ಸಿ.ಪಿ.ಯೋಗೀಶ್ವರ್ ಅವರನ್ನು ಕಣಕ್ಕಿಳಿಸಲು ಬಿಜೆಪಿ ಚಿಂತನೆ ನಡೆಸುತ್ತಿದೆ. 

ರಾಮನಗರ(ಮೇ.22): ರಾಮನಗರ ಉಪಚುನಾವಣೆಗೆ ಮತ್ತೆ ಜಿದ್ದಾಜಿದ್ದಿಯ ಪೈಪೋಟಿ ಎದುರಾಗುವ ಸಾಧ್ಯತೆಯಿದೆ. 
ಚನ್ನಪಟ್ಟಣದಲ್ಲಿ ಹೆಚ್.ಡಿ.ಕುಮಾರಸ್ವಾಮಿ ವಿರುದ್ಧ ಸ್ಪರ್ಧಿಸಿ ಪರಾಭವಗೊಂಡಿದ್ದ ಮಾಜಿ ಶಾಸಕ ಸಿ.ಪಿ.ಯೋಗೀಶ್ವರ್ ರಾಮನಗರದಿಂದ ಬಿಜೆಪಿ ಅಭ್ಯರ್ಥಿಯಾಗಿ ಕಣಕ್ಕಿಳಿಯುವ ಸಂಭವ ಹೆಚ್ಚಿದೆ. ಈಗಾಗಲೆ ರಾಮನಗರ, ಚನ್ನಪಟ್ಟಣ ಎರಡೂ ಕ್ಷೇತ್ರಗಳಲ್ಲಿ ಸ್ಪರ್ಧಿಸಿ ಗೆಲುವು ಸಾಧಿಸಿರುವ ಹೆಚ್.ಡಿ.ಕುಮಾರಸ್ವಾಮಿ ಚನ್ನಪಟ್ಟಣವನ್ನು ಉಳಿಸಿಕೊಂಡು ರಾಮನಗರ ಕ್ಷೇತ್ರಕ್ಕೆ ರಾಜೀನಾಮೆ ನೀಡಿದ್ದಾರೆ.
ಹೆಚ್'ಡಿಕೆ ರಾಮನಗರಕ್ಕೆ ರಾಜೀನಾಮೆ ನೀಡಿರುವ ಕಾರಣ ಕೆಲವು ದಿನಗಳಲ್ಲಿ ಚುನಾವಣಾ ಆಯೋಗ ಉಪಚುನಾವಣೆ ದಿನಾಂಕ ಘೋಷಿಸಲಿದ್ದು ಕಾಂಗ್ರೆಸ್-ಜೆಡಿಎಸ್  ಮೈತ್ರಿ ಪಕ್ಷ ಹಾಗೂ  ವಿರೋಧ ಪಕ್ಷ ಬಿಜೆಪಿ  ಕ್ಷೇತ್ರವನ್ನು ತಮ್ಮ ತೆಕ್ಕೆಯಲ್ಲಿ ಉಳಿಸಿಕೊಳ್ಳಲು ಶತಾಯಗತಾಯ ಪೂರ್ವ ತಯಾರಿ ನಡೆಸುತ್ತಿವೆ. 
ಹೆಚ್ ಡಿಕೆ, ಡಿಕೆಶಿಗೆ ತಿರುಗೇಟು ನೀಡಲು ಬಿಜೆಪಿ ಯೋಜನೆ
ದಶಕಗಳಿಂದಲೂ ಬಿಜೆಪಿಗೆ ರೇಷ್ಮೆ ನಗರದಲ್ಲಿ ನೆಲೆಯಿಲ್ಲ. ಇಲ್ಲೇನಿದ್ದರೂ ಜೆಡಿಎಸ್ ಹಾಗೂ ಕಾಂಗ್ರೆಸ್'ನದ್ದೆ ಹವಾ. ಆ ಕಾರಣಕ್ಕಾಗಿ ಪಕ್ಕದ ಕ್ಷೇತ್ರದಲ್ಲಿ ವ್ಯಕ್ತಿ ನೆಲೆಯಲ್ಲಿ ಪ್ರಬಲ ನಾಯಕರಾಗಿರುವ ಸಿ.ಪಿ.ಯೋಗೀಶ್ವರ್ ಅವರನ್ನು ಕಣಕ್ಕಿಳಿಸಿ ಬಿಜೆಪಿ ಚಿಂತನೆ ನಡೆಸುತ್ತಿದೆ. ಈಗಾಗಲೇ ರಾಜ್ಯದಲ್ಲಿ ಅಧಿಕಾರ ಕಳೆದುಕೊಂಡಿರುವ ಕಮಲ ಪಕ್ಷ ಯೋಗೀಶ್ವರ್ ಮೂಲಕ ಮೈತ್ರಿ ಪಕ್ಷಗಳಿಗೆ ಪಾಠ ಕಲಿಸಲು ಮುಂದಾಗಿದೆ ಎನ್ನಲಾಗುತ್ತಿದೆ. ಬಿಜೆಪಿ ಕಚೇರಿಯಲ್ಲಿ ಸಿ.ಪಿ‌.ಯೋಗೇಶ್ವರ್ ಅವರನ್ನು ರಾಜ್ಯ ಉಸ್ತುವಾರಿ ಮುರಳೀಧರ್ ರಾವ್ ಮನವೊಲಿಸುತ್ತಿದ್ದು ಅವರು ಒಪ್ಪಿದರೆ ರಾಮನಗರದಿಂದ ಬಿಜೆಪಿ ಅಭ್ಯರ್ಥಿಯಾಗಿ ಕಣಕ್ಕಿಳಿಸಲಿದ್ದಾರೆ.‌‌ ಹಾಗಾನಾದರೂ ಆದಲ್ಲಿ ಮತ್ತಷ್ಟು ಪೈಪೋಟಿ ಏರ್ಪಡುವುದರಲ್ಲಿ ಯಾವುದೇ ಅನುಮಾನವಿಲ್ಲ. 

click me!