ವಿಶ್ವಾಸ ಮತ ಯಾಚನೆ: ವಿಧಾನ ಸೌಧದ ಸುತ್ತಮುತ್ತ ನಿಷೇಧಾಜ್ಞೆ ಜಾರಿ

First Published May 25, 2018, 9:55 AM IST
Highlights

ವಿಧಾನಸೌಧದಲ್ಲಿಂದು ಮೈತ್ರಿ ಸರ್ಕಾರದ ವಿಶ್ವಾಸ ಮತಯಾಚನೆ ಹಿನ್ನಲೆಯಲ್ಲಿ  ವಿಧಾನಸೌಧದ ಸುತ್ತಮುತ್ತ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ.  ಯಾವುದೇ ಅಹಿತಕರ ಘಟನೆ ನಡೆಯದಂತೆ ಮುನ್ನೆಚ್ಚರಿಕೆ ಕ್ರಮವಾಗಿ ವಿಧಾನಸೌಧ ಸುತ್ತಮುತ್ತ ಬಿಗಿ ಪೊಲೀಸ್ ಭದ್ರತೆ ಒದಗಿಸಲಾಗಿದೆ. 
 

ಬೆಂಗಳೂರು (ಮೇ. 25):  ವಿಧಾನಸೌಧದಲ್ಲಿಂದು ಮೈತ್ರಿ ಸರ್ಕಾರದ ವಿಶ್ವಾಸ ಮತಯಾಚನೆ ಹಿನ್ನಲೆಯಲ್ಲಿ  ವಿಧಾನಸೌಧದ ಸುತ್ತಮುತ್ತ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ.  ಯಾವುದೇ ಅಹಿತಕರ ಘಟನೆ ನಡೆಯದಂತೆ ಮುನ್ನೆಚ್ಚರಿಕೆ ಕ್ರಮವಾಗಿ ವಿಧಾನಸೌಧ ಸುತ್ತಮುತ್ತ ಬಿಗಿ ಪೊಲೀಸ್ ಭದ್ರತೆ ಒದಗಿಸಲಾಗಿದೆ. 

ಇಂದು ಬೆಳಗ್ಗೆ 6 ರಿಂದ ಮಧ್ಯರಾತ್ರಿ 12ರ ವರೆಗೆ ವಿಧಾನಸೌಧದ ಸುತ್ತಮುತ್ತಲಿನ ಎರಡು ಕಿ.ಮೀ ವ್ಯಾಪ್ತಿಯಲ್ಲಿ ನಿಷೇದಾಜ್ಞೆ ಜಾರಿಯಾಗಿದೆ.  ಪ್ರತಿಭಟನೆ, ಧರಣಿ, ಅಧಿವೇಶನದ ಕಾರ್ಯಕಲಾಪಗಳಿಗೆ ಅಡಚಣೆ ಉಂಟುಮಾಡುವ ಸಾಧ್ಯತೆ ಇರುವುದರಿಂದ ಮುನ್ನಚ್ಚರಿಕೆ ಕ್ರಮ ತೆಗೆದುಕೊಳ್ಳಲಾಗಿದೆ. 

ಐದಕ್ಕಿಂತ ಹೆಚ್ಚು ಜನ ಸೇರುವುದು, ಮೆರವಣಿಗೆ, ಸಭೆ ನಡೆಸುವುದು, ಮಾರಕಾಸ್ತ್ರ ಹಿಡಿದು ಓಡಾಡುವುದು, ಸ್ಪೋಟಕ ವಸ್ತು ಸಿಡಿಸುವುದು, ಪ್ರತಿಕೃತಿಗಳನ್ನ ಸಿಡಿಸುವುದು, ಪ್ರಚೋದಿಸುವ ಬಹಿರಂಗ ಘೋಷಣೆ ಕೂಗುವುದನ್ನ ನಿಷೇಧಿಸಲಾಗಿದೆ.   

click me!