ಆರ್‌ಆರ್‌ ನಗರ ಚುನಾವಣೆ ಭವಿಷ್ಯ ಇಂದು ನಿರ್ಧಾರ

First Published May 10, 2018, 7:25 AM IST
Highlights

ರಾಜಧಾನಿಯಲ್ಲಿ ಮಂಗಳವಾರ ಸ್ಫೋಟಗೊಂಡ 9700 ಕ್ಕೂ ಹೆಚ್ಚು ಮತದಾರರ ಗುರುತಿನ ಚೀಟಿ ಪತ್ತೆ ಪ್ರಕರಣದ ಗಂಭೀರ ಸ್ವರೂಪದ್ದಾಗಿರುವ ಹಿನ್ನೆಲೆಯಲ್ಲಿ ಕೇಂದ್ರ ಚುನಾವಣಾ ಆಯೋಗದ ಹಿರಿಯ ಅಧಿಕಾರಿಗಳು ಬುಧವಾರ ಬೆಂಗಳೂರಿಗೆ ಆಗಮಿಸಿದ್ದು, ಗುರುವಾರ ಈ ಬಗ್ಗೆ ಸೂಕ್ತ ತೀರ್ಮಾನ ತೆಗೆದುಕೊಳ್ಳಲಿದ್ದಾರೆ. 

ಬೆಂಗಳೂರು: ರಾಜಧಾನಿಯಲ್ಲಿ ಮಂಗಳವಾರ ಸ್ಫೋಟಗೊಂಡ 9700 ಕ್ಕೂ ಹೆಚ್ಚು ಮತದಾರರ ಗುರುತಿನ ಚೀಟಿ ಪತ್ತೆ ಪ್ರಕರಣದ ಗಂಭೀರ ಸ್ವರೂಪದ್ದಾಗಿರುವ ಹಿನ್ನೆಲೆಯಲ್ಲಿ ಕೇಂದ್ರ ಚುನಾವಣಾ ಆಯೋಗದ ಹಿರಿಯ ಅಧಿಕಾರಿಗಳು ಬುಧವಾರ ಬೆಂಗಳೂರಿಗೆ ಆಗಮಿಸಿದ್ದು, ಗುರುವಾರ ಈ ಬಗ್ಗೆ ಸೂಕ್ತ ತೀರ್ಮಾನ ತೆಗೆದುಕೊಳ್ಳಲಿದ್ದಾರೆ. 

ರಾಜರಾಜೇಶ್ವರಿ ನಗರದ ಕ್ಷೇತ್ರ ವ್ಯಾಪ್ತಿಯ ಜಾಲಹಳ್ಳಿ ಬಳಿ ಎಸ್‌ಎಲ್‌ವಿ ಅಪಾರ್ಟ್‌ಮೆಂಟ್ ಮೇಲೆ ಮಂಗಳವಾರ ದಾಳಿ ನಡೆಸಿದ ವಿಚಕ್ಷಣಾ ದಳವು, ಅಲ್ಲಿ ಸಂಗ್ರಹಿಸಿಡಲಾಗಿದ್ದ9746  ಮತದಾರರ ಗುರುತಿನ ಚೀಟಿಗಳನ್ನು ಜಪ್ತಿ ಮಾಡಿತ್ತು.

ಈ ಕೃತ್ಯ ಬೆಳಕಿಗೆ ಬಂದಕೂಡಲೇ ಕಾಂಗ್ರೆಸ್ ಮತ್ತು ಬಿಜೆಪಿ ನಾಯಕರು ತಡರಾತ್ರಿವರೆಗೂ ಆರೋಪ- ಪ್ರತ್ಯಾರೋಪ ಮಾಡಿದರು. ಇನ್ನೊಂದೆಡೆ ಪ್ರಕರಣವನ್ನು  ಗಂಭೀರವಾಗಿ ಪರಿಗಣಿಸಿದ ಚುನಾವಣಾ ಆಯೋಗವು, ತನ್ನ ಉಸ್ತುವಾರಿಯಲ್ಲಿ ತನಿಖೆ ನಡೆಸುವಂತೆ ಪೊಲೀಸರಿಗೆ ಸೂಚಿಸಿದೆ. 

click me!