ಸಿಎಂ ಪ್ರಮಾಣ ವಚನದ ಬಗ್ಗೆ ಇದೇ ಮೊದಲು ಗೊಂದಲ

First Published May 17, 2018, 8:54 AM IST
Highlights

 ಹಲವು ರಾಜಕೀಯ ತಿರುವುಗಳನ್ನು ಪಡೆದುಕೊಂಡ ಕರ್ನಾಟಕ ರಾಜಕೀಯಕ್ಕೆ ಇಂದು ಒಂದು ಹಂತದ ಕ್ಲೈಮಾಕ್ಸ್ ಸಿಗುತ್ತಿದೆ. ಇದೇ ಮೊದಲ ಬಾರಿಗೆ ಹೊಸ ಮುಖ್ಯಮಂತ್ರಿ ಪ್ರಮಾಣ ಸ್ವೀಕಾರ ಸಮಾರಂಭದ ಬಗ್ಗೆಯೇ ಗೊಂದಲಗಳು ಸೃಷ್ಟಿಯಾಗಿದ್ದು, ಕಡೆಗೂ ರಾಜ್ಯದ 24ನೇ ಮುಖ್ಯಮಂತ್ರಿಯಾಗಿ ಬಿ.ಎಸ್.ಯಡಿಯೂರಪ್ಪ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ.

ಬೆಂಗಳೂರು: ಹಲವು ರಾಜಕೀಯ ತಿರುವುಗಳನ್ನು ಪಡೆದುಕೊಂಡ ಕರ್ನಾಟಕ ರಾಜಕೀಯಕ್ಕೆ ಇಂದು ಒಂದು ಹಂತದ ಕ್ಲೈಮಾಕ್ಸ್ ಸಿಗುತ್ತಿದೆ. ಇದೇ ಮೊದಲ ಬಾರಿಗೆ ಹೊಸ ಮುಖ್ಯಮಂತ್ರಿ ಪ್ರಮಾಣ ಸ್ವೀಕಾರ ಸಮಾರಂಭದ ಬಗ್ಗೆಯೇ ಗೊಂದಲಗಳು ಸೃಷ್ಟಿಯಾಗಿದ್ದು, ಕಡೆಗೂ ರಾಜ್ಯದ 24ನೇ ಮುಖ್ಯಮಂತ್ರಿಯಾಗಿ ಬಿ.ಎಸ್.ಯಡಿಯೂರಪ್ಪ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ.

ರಾಜ್ಯಪಾಲ ವಾಜುಬಾಯಿ ವಾಲಾ ಅವರು ಸದನದಲ್ಲಿ ಬಹುಮತ ಸಾಬೀತುಪಡಿಸಲು ಬಿಜೆಪಿಗೆ 15 ದಿನಗಳ ಕಾಲಾವಕಾಶ ನೀಡಿದ್ದು, ಅಷ್ಟರಲ್ಲಿ 104 ಸಂಖ್ಯೆಗೆ ಸೀಮಿತವಾಗಿರುವ ಬಿಜೆಪಿ ಶಾಸಕರ ಸಂಖ್ಯೆಯನ್ನು 112ಕ್ಕೆ ಏರಿಸುವ ಸವಾಲು ಪಕ್ಷದ ಮುಂದಿದೆ.

ಶಿಕಾರಿಪುರ ಶಾಸಕ ಯಡಿಯೂರಪ್ಪ: 

ಸತತವಾಗಿ ಶಿವಮೊಗ್ಗ ಜಿಲ್ಲೆಯ ಶಿಕಾರಿಪುರದಿಂದ ಸ್ಪರ್ಧಿಸುತ್ತಿರುವ  2008ರಲ್ಲಿ ಮಾಜಿ ಮುಖ್ಯಮಂತ್ರಿ ಎಸ್.ಬಂಗಾರಪ್ಪ ಅವರನ್ನು ಸೋಲಿಸಿದ್ದರು. ಆಗಲೇ ರಾಜ್ಯದ ಮುಖ್ಯಮಂತ್ರಿ ಪದವಿಗೇರುವ ಮೂಲಕ ದಕ್ಷಿಣ ಭಾರತದಲ್ಲಿ ಮೊದಲ ಬಾರಿಗೆ ಬಿಜೆಪಿ ಸರಕಾರ ರಚಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಅಕ್ರಮ ಗಣಿಗಾರಿಕೆಗೆ ಸಂಬಂಧಿಸಿದಂತೆ ಕರ್ನಾಟಕ ಲೋಕಾಯುಕ್ತ ನೀಡದ ತನಿಖಾ ವರದಿಯಲ್ಲಿ ಯಡಿಯೂರಪ್ಪ ಅವರ ಹೆಸರಿತ್ತು. ಈ ಕಾರಣದಿಂದ 2011ರಲ್ಲಿ ತಮ್ಮ ಸ್ಥಾನಕ್ಕೆ ರಾಜೀನಾಮ ನೀಡಿದ ಯಡಿಯೂರಪ್ಪ, ಸೆರೆವಾಸವನ್ನೂ ಅನುಭವಿಸಿದ್ದರು.

ನಂತರ ನಡೆದ ರಾಜಕೀಯ ಬೆಳವಣಿಗೆಗಳಿಂದ ಬೇಸತ್ತು ಯಡಿಯೂರಪ್ಪ ಕರ್ನಾಟಕ ಜನತಾ ಪಾರ್ಟಿ ಎಂಬ ಪಕ್ಷವನ್ನು ಸ್ಥಾಪಿಸಿ, 2013ರ ಚುನಾವಣೆಯಲ್ಲಿ ಅದೇ ಪಕ್ಷದಿಂದ ಆಯ್ಕೆಯಾಗಿದ್ದರು. ಆದರೆ, ಕೆಲವೇ ತಿಂಗಳಲ್ಲಿ ಬಿಜೆಪಿಗೆ ಮರಳಿದ್ದರು.

ಮೂರನೇ ಬಾರಿಗೆ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸುತ್ತಿದ್ದಾರೆ.

2018ರ ಚುನಾವಣೆಯಲ್ಲಿ ಯಡಿಯೂರಪ್ಪ ಅವರನ್ನು ಮುಖ್ಯಮಂತ್ರಿ ಅಭ್ಯರ್ಥಿಯನ್ನಾಗಿ ಘೋಷಿಸಿದ ಬಿಜೆಪಿ, ಅವರ ನೇತೃತ್ವದಲ್ಲಿಯೇ ಚುನಾವಣಾ ಪ್ರಚಾರ ನಡೆಸಿತ್ತು. ಮೋದಿ ಅಲೆ ಹಾಗೂ ಆಡಳಿತ ವಿರೋಧಿ ಅಲೆಯಿಂದ ಬಿಜೆಪಿ ಏಕೈಕ ಅತಿ ದೊಡ್ಡ ಪಕ್ಷವಾಗಿ ಹೊರಹೊಮ್ಮಿದರೂ, ಸರಕಾರ ರಚನೆಗೆ ಅಗತ್ಯವಾದ ಸ್ಪಷ್ಟ ಬಹುಮತ ಪಡೆಯುವಲ್ಲಿ ವಿಫಲವಾಗಿದೆ. 

ಒಂದೆಡೆ ಕಾಂಗ್ರೆಸ್ ಹಾಗೂ ಜೆಡಿಎಸ್ ಒಂದಾಗಿದ್ದು, ಸರಕಾರ ರಚಿಸಲು ಅವಕಾಶ ನೀಡುವಂತೆ ರಾಜ್ಯಪಾಲರಿಗೆ ಮನವಿ ಸಲ್ಲಿಸಿದೆ. ಆದರೆ, ರಾಜ್ಯಪಾಲರು ಬಿಜೆಪಿಗೆ ಸರಕಾರ ರಚಿಸಲು ಆಹ್ವಾನಿಸಿದ್ದರು. ಇದನ್ನು ವಿರೋಧಿಸಿ, ಕಾಂಗ್ರೆಸ್ ಸುಪ್ರೀಂ ಕೋರ್ಟ್ ಮೊರೆ ಹೋಗಿದ್ದರು. ರಾತ್ರೋ ರಾತ್ರಿ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್ ಪ್ರಮಾಣ ವಚನ ಸ್ವೀಕಾರ ಸಮಾರಂಭ ನಡೆಸಲು ಗ್ರೀನ್ ಸಿಗ್ನಲ್ ನೀಡಿದೆ.

ಹೊಸ ಸರಕಾರ ಕಾರ್ಯಪ್ರವೃತ್ತವಾಗದಂತೆ ತಡೆಯಲು ಸುಪ್ರೀಂಗೆ ಅಧಿಕಾರವಿದೆಯೇ ಹೊರತು, ಪ್ರಮಾಣ ವಚನ ಸ್ವೀಕಾರ ನಡೆಸದಂತೆ ತಡೆ ನೀಡಲು ಸಾಧ್ಯವಿಲ್ಲ, ಎಂದು ಕೋರ್ಟ್ ಅಭಿಪ್ರಾಯಪಟ್ಟಿದೆ.

click me!