ಒಂದು ಶಾಸಕ ಸ್ಥಾನಕ್ಕೆ ಕುಮಾರಸ್ವಾಮಿ ರಾಜೀನಾಮೆ

First Published May 19, 2018, 2:15 PM IST
Highlights

ಕರ್ನಾಟಕ ವಿಧಾನಸಭೆಗೆ ಹೊಸದಾಗಿ ಆಯ್ಕೆಯಾಗಿರುವ ಶಾಸಕರು ವಿಧಾನಸೌಧದಲ್ಲಿ ಪ್ರಮಾಣ ವಚನ ಸ್ವೀಕರಿಸಿದ್ದು, ಈಗಾಗಲೇ ಸಂಸದರಾಗಿರುವ ಹಾಗೂ ಎರಡು ವಿಧಾನಸಭಾ ಕ್ಷೇತ್ರಗಳಲ್ಲಿ ಸ್ಪರ್ಧಿಸಿ ಗೆದ್ದಿರುವ ಎಚ್.ಡಿ.ಕುಮಾರಸ್ವಾಮಿ ಒಂದು ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ. ರಾಜೀನಾಮೆಯನ್ನು ಸ್ಪೀಕರ್ ಅಂಗೀಕರಿಸಿದ್ದಾರೆ.

ಬೆಂಗಳೂರು: ಕರ್ನಾಟಕ ವಿಧಾನಸಭೆಗೆ ಹೊಸದಾಗಿ ಆಯ್ಕೆಯಾಗಿರುವ ಶಾಸಕರು ವಿಧಾನಸೌಧದಲ್ಲಿ ಪ್ರಮಾಣ ವಚನ ಸ್ವೀಕರಿಸಿದ್ದು, ಈಗಾಗಲೇ ಸಂಸದರಾಗಿರುವ ಹಾಗೂ ಎರಡು ವಿಧಾನಸಭಾ ಕ್ಷೇತ್ರಗಳಲ್ಲಿ ಸ್ಪರ್ಧಿಸಿ ಗೆದ್ದಿರುವ ಎಚ್.ಡಿ.ಕುಮಾರಸ್ವಾಮಿ ಒಂದು ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ. ರಾಜೀನಾಮೆಯನ್ನು ಸ್ಪೀಕರ್ ಅಂಗೀಕರಿಸಿದ್ದಾರೆ.

ಜೆಡಿಎಸ್‌ನಿಂದ ಕುಮಾರಸ್ವಾಮಿಯವರು ರಾಮನಗರ ಹಾಗೂ ಚೆನ್ನಪಟ್ಟಣ ವಿಧಾನಸಭಾ ಕ್ಷೇತ್ರಗಳಲ್ಲಿ ಸ್ಪರ್ಧಿಸಿದ್ದರು. ಬಿಜೆಪಿಯ ಸಿ.ಪಿ.ಯೋಗೇಶ್ವರ್ ವಿರುದ್ಧ ಚನ್ನಪಟ್ಟಣದಲ್ಲಿ ಕುಮಾರಸ್ವಾಮಿ ಗೆದ್ದರೆ, ರಾಮನಗರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಇಕ್ಬಾಲ್ ಹುಸೇನ್ ವಿರುದ್ಧ ಗೆಲವು ಸಾಧಿಸಿದ್ದಾರೆ. ಇದೀಗ ಚನ್ನಪಟ್ಟಣ ಕ್ಷೇತ್ರವನ್ನು ಉಳಿಸಿಕೊಂಡು, ರಾಮನಗರ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ. ಇಲ್ಲಿ ತಮ್ಮ ಪತ್ನಿ ಅನಿತಾ ಅಥವಾ ಮಗ ನಿಖಿಲ್ ಕುಮಾರಸ್ವಾಮಿ ಅವರನ್ನು ಕಣಕ್ಕಿಳಿಸುವ ಸಾಧ್ಯತೆ ಇದೆ ಎನ್ನಲಾಗುತ್ತಿದೆ.

ವಿಶ್ವಾಸಮತ ಹೇಗೆ ನಡೆಯುತ್ತೆ?

ಬಿ.ಶ್ರೀರಾಮುಲು, ಸಿದ್ದರಾಮಯ್ಯ ಹಾಗೂ ಕುಮಾರಸ್ವಾಮಿಯವರು ಎರಡೆರಡು ವಿಧಾನಸಭಾ ಕ್ಷೇತ್ರಗಳಲ್ಲಿ ಸ್ಪರ್ಧಿಸಿದ್ದರು. ಕುಮಾರಸ್ವಾಮಿಯವರನ್ನು ಹೊರತಪಡಿಸಿ, ಉಳಿದವರಿಬ್ಬರು ಒಂದೊಂದು ಕ್ಷೇತ್ರದಲ್ಲಿ ಮಾತ್ರ ಗೆಲ್ಲುವಲ್ಲಿ ಯಶಸ್ವಿಯಾಗಿದ್ದಾರೆ.

ಬಿಜೆಪಿ ಪಾಳೆಯದಲ್ಲಿ ಢವಢವ
 

click me!