ಸೋಮವಾರ ಮುಖ್ಯಮಂತ್ರಿಯಾಗಿ ಎಚ್‌ಡಿಕೆ ಪ್ರಮಾಣ ವಚನ

First Published May 19, 2018, 8:52 PM IST
Highlights
  • ಸಮ್ಮಿಶ್ರ ಸರ್ಕಾರಕ್ಕೆ ಅವಕಾಶ ನೀಡಿದ ರಾಜ್ಯಪಾಲ ವಜುಭಾಯಿ ವಾಲ
  • 15 ದಿನಗಳೊಳಗೆ ಬಹುಮತ ಸಾಬೀತುಪಡಿಸಲು ಆದೇಶ

ಬೆಂಗಳೂರು [ಮೇ.19]: ಕಾಂಗ್ರೆಸ್-ಜೆಡಿಎಸ್ ಮೈತ್ರಿಕೂಟದ ಸರ್ಕಾರ ರಚನೆಗೆ ರಾಜ್ಯಪಾಲರು ಅವಕಾಶ ನೀಡಿದ್ದು, ನೂತನ ಮುಖ್ಯಮಂತ್ರಿಯಾಗಿ  ಹೆಚ್‌.ಡಿ.ಕುಮಾರಸ್ವಾಮಿ ಸೋಮವಾರ  ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. 

15 ದಿನಗಳೊಳಗೆ ಬಹುಮತ ಸಾಬೀತು ಪಡಿಸಬೇಕೆಂದು ರಾಜ್ಯಪಾಲ ವಜುಭಾಯಿ ವಾಲ ಕುಮಾರಸ್ವಾಮಿಗೆ ಸೂಚಿಸಿದ್ದಾರೆ.

ಸೋಮವಾರ ಕಂಠೀರವ ಸ್ಟೇಡಿಯಂನಲ್ಲಿ ಪ್ರಮಾಣ ವಚನ ಸಮಾರಂಭ ನಡೆಯಲಿದ್ದು, ವಿವಿಧ ರಾಜ್ಯಗಳ, ವಿವಿಧ ಪಕ್ಷಗಳ ಮುಖಂಡರು ಭಾಗವಹಿಸಲಿದ್ದಾರೆ ಎಂದು ತಿಳಿದುಬಂದಿದೆ.

ಪ್ರಮಾಣ ವಚನ ಕಾರ್ಯಕ್ರಮದಲ್ಲಿ  ಆಂಧ್ರ ಪ್ರದೇಶ ಸಿಎಂ ಚಂದ್ರಬಾಬು ನಾಯ್ಡು, ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ,  ಬಿಎಸ್‌ಪಿ ನಾಯಕಿ ಮಾಯಾವತಿ, ಸಮಾಜವಾದಿ ಪಕ್ಷದ ಅಖಿಲೇಶ್ ಯಾದವ್ ಹಾಗೂ ಇನ್ನಿತರ ನಾಯಕರು ಭಾಗವಹಿಸುವ ನಿರೀಕ್ಷೆ ಇದೆ.

ಕಳೆದ ಮೇ.15ರಂದು ಕರ್ನಾಟಕ ವಿಧಾನಸಭಾ ಚುನಾವಣೆಯ ಫಲಿತಾಂಶಗಳು ಪ್ರಕಟವಾದ ಬೆನ್ನಲ್ಲಿ, ರಾಜ್ಯಪಾಲ  ವಜುಭಾಯಿ ವಾಲ ಬಿಜೆಪಿಗೆ ಸರ್ಕಾರ ರಚಿಸಲು ಆಹ್ವಾನಿಸಿದ್ದರು. 

ಗುರುವಾರವಷ್ಟೇ ಮುಖ್ಯಂಮಂತ್ರಿಯಾಗಿ ಶಪಥ ಸ್ವೀಕರಿಸಿದ ಯಡಿಯೂರಪ್ಪ, ಶನಿವಾರ ವಿಧಾನಸಭೆಯಲ್ಲಿ ವಿಶ್ವಾಸಮತ ಯಾಚನೆಗೆ ಮುನ್ನವೇ ರಾಜೀನಾಮೆ ನೀಡಿರುವ ಹಿನ್ನೆಲೆಯಲ್ಲಿ ರಾಜ್ಯಪಾಲರು ಕುಮಾರಸ್ವಾಮಿಯವರನ್ನು ಸರ್ಕಾರ ರಚಿಸಲು ಆಹ್ವಾನಿಸಿದ್ದಾರೆ. 

 

click me!