ದಲಿತರನ್ನು ಸಿಎಂ ಮಾಡಿದರೆ ಸಂತೋಷ : ಎಸ್.ಆರ್ ಪಾಟೀಲ್

First Published May 15, 2018, 7:27 AM IST
Highlights

ಸೋಲಿನ ಅಥವಾ ಅತಂತ್ರ ಸ್ಥಿತಿಯ ಭೀತಿಯಿಂದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ದಲಿತ ಮುಖ್ಯಮಂತ್ರಿ ಪ್ರಸ್ತಾಪಿಸಿಲ್ಲ ಎಂದು ಅಭಿಪ್ರಾಯಪಟ್ಟಿರುವ ಕೆಪಿಸಿಸಿ ಕಾರ್ಯಾಧ್ಯಕ್ಷ ಎಸ್.ಆರ್. ಪಾಟೀಲ್, ದಲಿತ ಮುಖ್ಯಮಂತ್ರಿ ವಿಚಾರ ಹೈಕಮಾಂಡ್‌ಗೆ ಬಿಟ್ಟಿದ್ದು ಎಂದು ತಿಳಿಸಿದ್ದಾರೆ. 

ಬೆಂಗಳೂರು (ಮೇ 15) : ಸೋಲಿನ ಅಥವಾ ಅತಂತ್ರ ಸ್ಥಿತಿಯ ಭೀತಿಯಿಂದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ದಲಿತ ಮುಖ್ಯಮಂತ್ರಿ ಪ್ರಸ್ತಾಪಿಸಿಲ್ಲ ಎಂದು ಅಭಿಪ್ರಾಯಪಟ್ಟಿರುವ ಕೆಪಿಸಿಸಿ ಕಾರ್ಯಾಧ್ಯಕ್ಷ ಎಸ್.ಆರ್. ಪಾಟೀಲ್, ದಲಿತ ಮುಖ್ಯಮಂತ್ರಿ ವಿಚಾರ ಹೈಕಮಾಂಡ್‌ಗೆ ಬಿಟ್ಟಿದ್ದು ಎಂದು ತಿಳಿಸಿದ್ದಾರೆ. 

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಯಾರು ಶಾಸಕಾಂಗ ಪಕ್ಷದ ನಾಯಕರಾಗುತ್ತಾರೋ ಅವರು ಸಿಎಂ ಆಗುತ್ತಾರೆ.  ಕಾಂಗ್ರೆಸ್‌ನಲ್ಲಿ ಮುಖ್ಯಮಂತ್ರಿ ಯಾರಾಗಬೇಕು ಎನ್ನುವುದನ್ನು ಹೈಕಮಾಂಡ್ ನಿರ್ಧರಿಸಲಿದ್ದು, ದಲಿತರನ್ನು ಮುಖ್ಯ ಮಂತ್ರಿಯನ್ನಾಗಿ ಮಾಡಿದರೆ ಸಂತೋಷ ಎಂದರು. 

ಇದೇ ವೇಳೆ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಮಲ್ಲಿಕಾರ್ಜುನ ಖರ್ಗೆ ನಡುವೆ ಯಾವುದೇ ಭಿನ್ನಾಭಿಪ್ರಾಯವಿಲ್ಲ. ಇವೆಲ್ಲ ಕಪೋಲ ಕಲ್ಪಿತವಾಗಿದ್ದು ಉಭಯ ನಾಯಕರ  ಮಧ್ಯೆ ಉತ್ತಮ ಬಾಂಧವ್ಯವಿದೆ ಎಂದರು.

ಹೊಟ್ಟೆಯಲ್ಲಿ ಕೂಸಿಟ್ಟು ಜಟ್ಟೆಪ್ಪ ಹೆಸರು!: ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಮುಖ್ಯಮಂತ್ರಿಯಾಗಿ ಮೇ 17 ರಂದು ಪ್ರಮಾಣವಚನ ಸ್ವೀಕರಿಸುತ್ತೇನೆ ಎಂದು ಹೇಳಿರುವುದು, ಹೊಟ್ಟೆಯಲ್ಲಿ ಕೂಸಿಟ್ಟುಕೊಂಡು ಜಟ್ಟೆಪ್ಪ ಎಂದು ಹೆಸರಿಟ್ಟಂತೆ ಎಂದು ಲೇವಡಿ ಮಾಡಿದರು.

ರಾಜ್ಯದಲ್ಲಿ ಕಾಂಗ್ರೆಸ್ 120ಕ್ಕೆ ಹೆಚ್ಚು ಸ್ಥಾನಗಳಲ್ಲಿ ಗೆಲುವು ಸಾಧಿಸುವ ಮೂಲಕ ಆಡಳಿತಕ್ಕೆ ಬರಲಿದೆ. ಬಾದಾಮಿಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಗೌರವಯುತ ಮತಗಳ ಅಂತರದಿಂದ ಗೆಲುವು ಸಾಧಿಸಲಿದ್ದಾರೆ ಎಂದು ವಿಶ್ವಾಸ
ವ್ಯಕ್ತಪಡಿಸಿದರು.

click me!