ಆಂಬುಲೆನ್ಸ್ ನಲ್ಲಿ ಬಂದು ಮತ ಚಲಾಯಿಸಿದ ಅಭ್ಯರ್ಥಿ

Published : May 12, 2018, 10:20 AM IST
ಆಂಬುಲೆನ್ಸ್ ನಲ್ಲಿ ಬಂದು ಮತ ಚಲಾಯಿಸಿದ ಅಭ್ಯರ್ಥಿ

ಸಾರಾಂಶ

ಅಭ್ಯರ್ಥಿಗಳ ಭವಿಷ್ಯವನ್ನು ಬರೆಯಲು ಎಲ್ಲರೂ ಮತಗಟ್ಟೆಗಳಿಗೆ ತೆರಳಿ ಮತದಾನ ಮಾಡುತ್ತಿದ್ದಾರೆ.  ಅಭ್ಯರ್ಥಿಗಳು ಕೂಡ ಈಗಾಗಲೇ ಮತದಾನ ಪ್ರಕ್ರಿಯೆಯಲ್ಲಿ ಪಾಲ್ಗೊಂಡಿದ್ದಾರೆ.  ಮೈಸೂರಿನ ಪಕ್ಷೇತರ ಅಭ್ಯರ್ಥಿಯೋರ್ವರು ಆಂಬುಲೆನ್ಸ್ ನಲ್ಲಿ ಬಂದು ಮತದಾನ ಮಾಡಿದ್ದಾರೆ.   

ಮೈಸೂರು : ರಾಜ್ಯದಲ್ಲಿ ಮತದಾನ ಪ್ರಕ್ರಿಯೆ ಚುರುಕಿನಿಂದ ಸಾಗುತ್ತಿದೆ.  ಎಲ್ಲೆಡೆ ಮತದಾರರು ಸರತಿ ಸಾಲಿನಲ್ಲಿ ನಿಂತು ತಮ್ಮ ಹಕ್ಕನ್ನು ಚಲಾಯಿಸುತ್ತಿದ್ದಾರೆ. 

ಅಭ್ಯರ್ಥಿಗಳ ಭವಿಷ್ಯವನ್ನು ಬರೆಯಲು ಎಲ್ಲರೂ ಮತಗಟ್ಟೆಗಳಿಗೆ ತೆರಳಿ ಮತದಾನ ಮಾಡುತ್ತಿದ್ದಾರೆ.  ಅಭ್ಯರ್ಥಿಗಳು ಕೂಡ ಈಗಾಗಲೇ ಮತದಾನ ಪ್ರಕ್ರಿಯೆಯಲ್ಲಿ ಪಾಲ್ಗೊಂಡಿದ್ದಾರೆ. 

ಮೈಸೂರಿನ ಪಕ್ಷೇತರ ಅಭ್ಯರ್ಥಿಯೋರ್ವರು ಆಂಬುಲೆನ್ಸ್ ನಲ್ಲಿ ಬಂದು ಮತದಾನ ಮಾಡಿದ್ದಾರೆ. 

ಮೈಸೂರು ಜಿಲ್ಲೆಯ ‌ಕೆ.ಆರ್. ನಗರದ ಪಕ್ಷೇತರ ಅಭ್ಯರ್ಥಿ ಹೊಸಹಳ್ಳಿ ವೆಂಕಟೇಶ್ ಮೇಲೆ ಗುರುವಾರ ರಾತ್ರಿ ಪ್ರಚಾರ ಮುಗಿಸಿ ವಾಪಸಾಗುವಾಗ ದುಷ್ಕರ್ಮಿಗಳು ಹಲ್ಲೆ ನಡೆಸಿದ್ದರು. ಈ ವೇಳೆ ಗಂಭೀರವಾಗಿ ಗಾಯಗೊಂಡಿದ್ದ ವೆಂಕಟೇಶ್ ಅವರನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು.  

ಮೈಸೂರಿನ‌ ಜೆ.ಎಸ್.ಎಸ್. ಆಸ್ಪತ್ರೆಗೆ ದಾಖಲಾಗಿದ್ದ ವೆಂಕಟೇಶ್ ಅವರು ಅಂಬುಲೆನ್ಸ್ ನಲ್ಲಿ ಹೊಸಹಳ್ಳಿಗೆ ಆಗಮಿಸಿ ಮತದಾನದಲ್ಲಿ ಭಾಗಿಯಾಗಿದ್ದಾರೆ. 

PREV
click me!

Recommended Stories

ಕರ್ನಾಟಕ ಬಂದ್ : ಖಾಸಗಿ ಮ್ಯಾಕ್ಸಿಕ್ಯಾಬ್, ಪೆಟ್ರೋಲ್ ಯಥಾಸ್ಥಿತಿ
ಚುನಾವಣಾ ಪ್ರಚಾರದಿಂದ ದೂರ ಉಳಿದ ಎಸ್ ಎಂ ಕೃಷ್ಣ