ಬಿಜೆಪಿ ಬಿಟ್ಟು ಬೇರೆ ಪಕ್ಷಕ್ಕೆ ಹೋಗುವುದಿಲ್ಲ : ದಿನಕರ್ ಶೆಟ್ಟಿ

Published : May 19, 2018, 09:58 AM IST
ಬಿಜೆಪಿ ಬಿಟ್ಟು ಬೇರೆ ಪಕ್ಷಕ್ಕೆ ಹೋಗುವುದಿಲ್ಲ : ದಿನಕರ್ ಶೆಟ್ಟಿ

ಸಾರಾಂಶ

ಯಾವುದೇ ಕಾರಣಕ್ಕೂ ಬೇರೆ ಪಕ್ಷದತ್ತ ಮುಖ ಮಾಡುವುದಿಲ್ಲ ಎಂದು ಕುಮಟಾ ಬಿಜೆಪಿ ಶಾಸಕ ದಿನಕರ ಶೆಟ್ಟಿ ಸ್ಪಷ್ಟಪಡಿಸಿದ್ದಾರೆ. 

ಬೆಂಗಳೂರು : ಯಾವುದೇ ಕಾರಣಕ್ಕೂ ಬೇರೆ ಪಕ್ಷದತ್ತ ಮುಖ ಮಾಡುವುದಿಲ್ಲ ಎಂದು ಕುಮಟಾ ಬಿಜೆಪಿ ಶಾಸಕ ದಿನಕರ ಶೆಟ್ಟಿ ಸ್ಪಷ್ಟಪಡಿಸಿದ್ದಾರೆ. ‘ದಿನಕರ್ ಶೆಟ್ಟಿ ಅವರಿಗೆ ಜೆಡಿಎಸ್ ಗಾಳ ಹಾಕಿದೆ. 

ಹಿಂದೆ ಜೆಡಿಎಸ್‌ನಲ್ಲಿದ್ದ ದಿನಕರ್ ಶೆಟ್ಟಿ ಅವರೊಂದಿಗೆ ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಅವರು ಮಾತುಕತೆ ನಡೆಸಿದ್ದಾರೆ’ ಎಂದು ಖಾಸಗಿ ಸುದ್ದಿ ವಾಹಿನಿಯೊಂದು ವರದಿ ಮಾಡಿರುವ ಬಗ್ಗೆ ‘ಕನ್ನಡಪ್ರಭ’ದೊಂದಿಗೆ ಮಾತನಾಡಿ ಬೇಸರ ವ್ಯಕ್ತಪಡಿಸಿರುವ ಅವರು, ಈ ಸುದ್ದಿಯಿಂದ ನನಗೆ ತೀವ್ರ ನೋವಾಗಿದೆ. ನಾನು ಬೆಂಗಳೂರಿನಲ್ಲಿ ಪಕ್ಷದ ಸಭೆಗಳನ್ನು ಮುಗಿಸಿಕೊಂಡು ಅರವಿಂದ ಲಿಂಬಾವಳಿ ಅವರ ಸೂಚನೆ ಮೇರೆಗೆ ಕುಮಟಾಕ್ಕೆ ಬಂದೆ.

ಆಯಾಸಗೊಂಡಿದ್ದರಿಂದ ಮಲಗಿ ಏಳುವಷ್ಟರಲ್ಲಿ ಈ ಸುದ್ದಿಯ ಬಗ್ಗೆ ದೂರವಾಣಿ ಕರೆಗಳು ಬರಲಾರಂಭಿಸಿತು. ಯಾಕೆ ಹೀಗಾಗುತ್ತಿದೆ  ಎಂದು ಅರ್ಥವಾಗಲಿಲ್ಲ ಎಂದು ತಿಳಿಸಿದ್ದಾರೆ. ಬಿಜೆಪಿಯಿಂದ ಇಷ್ಟೊಂದು ಮತಗಳ ಅಂತರದಿಂದ ಗೆದ್ದಿರುವ ನಾನು ಪಕ್ಷದ ಮುಖಂಡರು, ಕ್ಷೇತ್ರದ ಮತದಾರರಿಗೆ ಮೋಸ ಮಾಡುವುದಿಲ್ಲ. 

ಈ ಕುರಿತು ಪಕ್ಷದ ಮುಖಂಡರಾದ ಶೋಭಾ ಕರಂದ್ಲಾಜೆ ಅವರಿಗೂ ಕರೆ ಮಾಡಿ ಸ್ಪಷ್ಟನೆ ನೀಡಿದ್ದೇನೆ ಎಂದರು. ದಿನಕರ ಶೆಟ್ಟಿ ಅವರು ಕುಮಟಾ ಕ್ಷೇತ್ರದಿಂದ 2008 ರಲ್ಲಿ ಜೆಡಿಎಸ್‌ನಿಂದ ಆಯ್ಕೆಯಾಗಿದ್ದರು.

PREV
click me!

Recommended Stories

ಕರ್ನಾಟಕ ಬಂದ್ : ಖಾಸಗಿ ಮ್ಯಾಕ್ಸಿಕ್ಯಾಬ್, ಪೆಟ್ರೋಲ್ ಯಥಾಸ್ಥಿತಿ
ಚುನಾವಣಾ ಪ್ರಚಾರದಿಂದ ದೂರ ಉಳಿದ ಎಸ್ ಎಂ ಕೃಷ್ಣ