ಸಿದ್ದರಾಮಯ್ಯಗೆ ಸಮನ್ವಯ ಸಮಿತಿ ಅಧ್ಯಕ್ಷ ಸ್ಥಾನ

First Published May 20, 2018, 7:46 AM IST
Highlights

ಮೈತ್ರಿ ಸರ್ಕಾರದ ಸಮನ್ವಯ ಸಮಿತಿ ಗೆ ಸಿದ್ದರಾಮಯ್ಯ ಅಧ್ಯಕ್ಷರಾಗುವ ಸಾಧ್ಯತೆಯಿದೆ. ಶನಿವಾರ ತಡರಾತ್ರಿ ಕಾಂಗ್ರೆಸ್ ನಾಯಕರ ಜತೆ ನಡೆದ ಪ್ರಾಥಮಿಕ ಚರ್ಚೆ ವೇಳೆ ಈ ಪ್ರಸ್ತಾಪ ಬಂದಿದ್ದು, ಇದರ ಬಗ್ಗೆ  ತಮ್ಮ ತಂದೆಯನ್ನು ಕೇಳಿ ಹೇಳು ವುದಾಗಿ ಕುಮಾರಸ್ವಾಮಿ ತಿಳಿಸಿದ್ದಾರೆಂದು ತಿಳಿದು ಬಂದಿದೆ. 

ಬೆಂಗಳೂರು (ಮೇ 20) : ಮೈತ್ರಿ ಸರ್ಕಾರದ ಸಮನ್ವಯ ಸಮಿತಿ ಗೆ ಸಿದ್ದರಾಮಯ್ಯ ಅಧ್ಯಕ್ಷರಾಗುವ ಸಾಧ್ಯತೆಯಿದೆ. ಶನಿವಾರ ತಡರಾತ್ರಿ ಕಾಂಗ್ರೆಸ್ ನಾಯಕರ ಜತೆ ನಡೆದ ಪ್ರಾಥಮಿಕ ಚರ್ಚೆ ವೇಳೆ ಈ ಪ್ರಸ್ತಾಪ ಬಂದಿದ್ದು, ಇದರ ಬಗ್ಗೆ ತಮ್ಮ ತಂದೆಯನ್ನು ಕೇಳಿ ಹೇಳು ವುದಾಗಿ ಕುಮಾರಸ್ವಾಮಿ ತಿಳಿಸಿದ್ದಾರೆಂದು ತಿಳಿದು ಬಂದಿದೆ.  ಕಾಂಗ್ರೆಸ್-ಜೆಡಿಎಸ್ ಸಮ್ಮಿಶ್ರ ಸರ್ಕಾರದ ಸುಲಲಿತ ಕಾರ್ಯನಿರ್ವಹಣೆಗೆ ಸಹಕರಿಸಲು ಅಸ್ತಿತ್ವಕ್ಕೆ ಬರಲಿರುವ ಸಮನ್ವಯ ಸಮಿತಿಗೆ ಬಹುತೇಕ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅಧ್ಯಕ್ಷರಾಗುವ  ಸಾಧ್ಯತೆಯಿದೆ.

ಶನಿವಾರ ತಡರಾತ್ರಿ ಜೆಡಿಎಸ್ ನಾಯಕ ಹಾಗೂ ನಿಯೋಜಿತ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಹಾಗೂ ಕಾಂಗ್ರೆಸ್ ನಾಯಕರ ಜತೆ ನಡೆದ ಸಭೆಯಲ್ಲಿ ಈ ಬಗ್ಗೆ ಪ್ರಾಥಮಿಕ  ಚರ್ಚೆ ನಡೆದಿದೆ ಎಂದು ತಿಳಿದುಬಂದಿದೆ.

ಹಾಲಿ ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕರಾಗಿರುವ ಸಿದ್ದರಾಮಯ್ಯ ಅವರನ್ನೇ ಸಮನ್ವಯ ಸಮಿತಿ ಅಧ್ಯಕ್ಷರನ್ನಾಗಿಸುವ ಕುರಿತು ಕಾಂಗ್ರೆಸ್ ನಾಯಕರು ನೀಡಿದ ಸಲಹೆಗೆ ಕುಮಾರಸ್ವಾಮಿ ಬಹುತೇಕ ಒಪ್ಪಿದ್ದು, ವರಿಷ್ಠ ಎಚ್.ಡಿ. ದೇವೇಗೌಡ ಅವರೊಂದಿಗೆ ಚರ್ಚಿಸಿ ಅನಂತರ ನಿರ್ಧಾರ ತಿಳಿಸುವುದಾಗಿ ಹೇಳಿದ್ದಾರೆ ಎನ್ನಲಾಗಿದೆ. 

ಉಳಿದಂತೆ ಸಭೆಯಲ್ಲಿ ಸಚಿವ ಸ್ಥಾನ ಹಂಚಿಕೆ ಕುರಿತು ಯಾವುದೇ ಚರ್ಚೆ ನಡೆದಿಲ್ಲ. ಈ ಬಗ್ಗೆ ಭಾನುವಾರ ಮತ್ತೊಮ್ಮೆ ನಾಯಕರು ಸಭೆ ಸೇರುವ ಸಾಧ್ಯತೆಯಿದೆ ಎಂದು ಮೂಲಗಳು ತಿಳಿಸಿವೆ.

click me!