ಬೆಳಗಾವಿಯ ಜೆಡಿಎಸ್ ಅಭ್ಯರ್ಥಿ ಮನೆ ಮೇಲೆ ಐಟಿ ದಾಳಿ

Published : Apr 28, 2018, 01:00 PM IST
ಬೆಳಗಾವಿಯ ಜೆಡಿಎಸ್ ಅಭ್ಯರ್ಥಿ ಮನೆ ಮೇಲೆ ಐಟಿ ದಾಳಿ

ಸಾರಾಂಶ

ಕರ್ನಾಟಕ ಚುನಾವಣೆ ಕಣ ರಂಗೇರುತ್ತಿರುವ ಈ ಸಂದರ್ಭದಲ್ಲಿಯೇ ಐಟಿ ಅಧಿಕಾರಿಗಳು ರಾಜಕಾರಣಿಗಳು, ವಿವಿಧ ಇಲಾಖೆ ಅಧಿಕಾರಿಗಳ ಮನೆ ಮೇಲೆ ನಿರಂತರ ದಾಳಿ ಮಾಡುತ್ತಿದ್ದಾರೆ. ಈ ವೇಳೆ ಅತ್ಯಧಿಕ ಪ್ರಮಾಣದಲ್ಲಿ ದಾಖಲೆ ಪತ್ರಗಳು, ಹಣವನ್ನು ವಶಕ್ಕೆ ಪಡೆಯುತ್ತಿದ್ದಾರೆ. 

ಬೆಳಗಾವಿ:  ಕರ್ನಾಟಕ ಚುನಾವಣೆ ಕಣ ರಂಗೇರುತ್ತಿರುವ ಈ ಸಂದರ್ಭದಲ್ಲಿಯೇ ಐಟಿ ಅಧಿಕಾರಿಗಳು ರಾಜಕಾರಣಿಗಳು, ಅಧಿಕಾರಿಗಳ ಮನೆ ಮೇಲೆ ನಿರಂತರದಾಳಿ ಮಾಡುತ್ತಿದ್ದಾರೆ. ಈ ವೇಳೆ ಅತ್ಯಧಿಕ ಪ್ರಮಾಣದಲ್ಲಿ ದಾಖಲೆ ಪತ್ರಗಳು, ಹಣವನ್ನು ವಶಕ್ಕೆ ಪಡೆಯುತ್ತಿದ್ದಾರೆ. 

ಇಂತಹ ದಾಳಿ ಚುನಾವಣಾ ಸಂದರ್ಭದಲ್ಲಿ ರಾಜಕೀಯ ಮುಖಂಡರಿಗೆ ನುಂಗಲಾರದ ಬಿಸಿ ತುಪ್ಪವಾಗಿ ಪರಿಣಮಿಸುತ್ತಿದೆ. ಸದ್ಯ ಬೆಳಗಾವಿಯ ಖಾನಾಪುರದ ಜೆಡಿಎಸ್ ಅಭ್ಯರ್ಥಿ ಮನೆ ಮೇಲೆ ಐಟಿ ದಾಳಿ ನಡೆದಿದೆ. 

ಖಾನಾಪುರ ವಿಧಾನಸಭಾ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿ ನಾಸೀರ್ ಪಪುಲ ಸಾಬ್ ಬಾಗವಾನ್ ಅವರ ಮನೆ ಮೇಲೆ ಶನಿವಾರ ಬೆಳ್ಳಂಬೆಳಗ್ಗೆ ಐಟಿ ಅಧಿಕಾರಿಗಳು ದಾಳಿ ನಡೆಸುವ ಮೂಲಕ ಶಾಕ್ ನೀಡಿದ್ದಾರೆ.

ಖಾನಾಪುರ ತಾಲ್ಲೂಕಿನ ಗಂದಿಗವಾಡ ಗ್ರಾಮದಲ್ಲಿರುವ ನಿವಾಸದ ಮೇಲೆ 13 ಐಟಿ ಅಧಿಕಾರಿಗಳ ತಂಡ ದಾಳಿ ಮಾಡಿ, ದಾಖಲೆಗಳನ್ನು ಪರಿಶೀಲನೆ ನಡೆಸಿದೆ. 

ನಾಮಪತ್ರದೊಂದಿಗೆ ಅವರು ಸಲ್ಲಿಸಿದ್ದ ಆಸ್ತಿ ವಿವರದಲ್ಲಿ,‌ ತಮ್ಮ ಬಳಿ 191 ಕೋಟಿ ರು. ಮೌಲ್ಯದ ಆಸ್ತಿ ಇದೆ ಎಂದು ಘೋಷಿಸಿಕೊಂಡಿದ್ದರು. ಇದಾದ ಕೆಲವೇ ದಿನಗಳಲ್ಲಿ ಐಟಿ ಶಾಕ್ ನೀಡಿದೆ.

PREV
click me!

Recommended Stories

ಕರ್ನಾಟಕ ಬಂದ್ : ಖಾಸಗಿ ಮ್ಯಾಕ್ಸಿಕ್ಯಾಬ್, ಪೆಟ್ರೋಲ್ ಯಥಾಸ್ಥಿತಿ
ಚುನಾವಣಾ ಪ್ರಚಾರದಿಂದ ದೂರ ಉಳಿದ ಎಸ್ ಎಂ ಕೃಷ್ಣ