ಶಿರಸಿ ಕಾಂಗ್ರೆಸ್ ಅಭ್ಯರ್ಥಿ ಮನೆ ಮೇಲೆ ಐಟಿ ದಾಳಿ

Published : May 02, 2018, 08:43 AM IST
ಶಿರಸಿ ಕಾಂಗ್ರೆಸ್ ಅಭ್ಯರ್ಥಿ ಮನೆ ಮೇಲೆ ಐಟಿ ದಾಳಿ

ಸಾರಾಂಶ

ಚುನಾವಣೆ ಹೊಸ್ತಿಲ್ಲೇ ಕಾಂಗ್ರೆಸ್ ಅಭ್ಯರ್ಥಿಗೆ ಐಟಿ ಶಾಕ್ ನೀಡಿದೆ. ಶಿರಸಿ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಭೀಮಣ್ಣ ನಾಯ್ಕ್ ಅವರ ನಿವಾಸದ ಮೇಲೆ ಮಂಗಳವಾರ ರಾತ್ರಿ 9 ಗಂಟೆ ವೇಳೆಗೆ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಪಟ್ಟಣದಲ್ಲಿರುವ ಅಯ್ಯಪ್ಪನಗರದಲ್ಲಿರುವ ಭೀಮಣ್ಣ ಅವರ ನಿವಾಸದ ಮೇಲೆ ಈ ದಾಳಿ ನಡೆದಿದೆ.

ಕಾರವಾರ:  ಚುನಾವಣೆ ಹೊಸ್ತಿಲ್ಲೇ ಕಾಂಗ್ರೆಸ್ ಅಭ್ಯರ್ಥಿಗೆ ಐಟಿ ಶಾಕ್ ನೀಡಿದೆ. ಶಿರಸಿ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಭೀಮಣ್ಣ ನಾಯ್ಕ್ ಅವರ ನಿವಾಸದ ಮೇಲೆ ಮಂಗಳವಾರ ರಾತ್ರಿ 9 ಗಂಟೆ ವೇಳೆಗೆ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಪಟ್ಟಣದಲ್ಲಿರುವ ಅಯ್ಯಪ್ಪನಗರದಲ್ಲಿರುವ ಭೀಮಣ್ಣ ಅವರ ನಿವಾಸದ ಮೇಲೆ ಈ ದಾಳಿ ನಡೆದಿದೆ.

ಸುಮಾರು ಐದು ಮಂದಿ ಅಧಿಕಾರಿಗಳ ತಂಡ ಈ ದಾಳಿ ನಡೆಸಿದ್ದು, ದಾಖಲೆಗಳ ಪರಿಶೀಲನೆ ನಡೆಸುತ್ತಿದೆ. ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರೂ ಆಗಿರುವ ಭೀಮಣ್ಣ ಅವರು ಮಾಜಿ ಮುಖ್ಯಮಂತ್ರಿ ದಿ. ಬಂಗಾರಪ್ಪ ಕುಟುಂಬದ ಸಂಬಂಧಿಕರು. 

2008ರಲ್ಲಿ ಶಿರಸಿಯಿಂದ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸಿ ಸೋತಿದ್ದರು. ಭೀಮಣ್ಣ ಅವರು ಶಿರಸಿಯಲ್ಲಿ ಕೆಲ ಬಾರ್‌ಗಳನ್ನು ಹೊಂದಿದ್ದಾರೆ. ಇವರಿಗೆ 20 ಎಕರೆ ಅಡಕೆ ತೋಟವೂ ಇದೆ. ಐಟಿ ದಾಳಿ ವೇಳೆ ಭೀಮಣ್ಣ ನಾಯ್ಕ್ ಅವರು ಸಿದ್ದಾಪುರದಲ್ಲಿ ಪ್ರಚಾರ ಕಾರ್ಯದಲ್ಲಿ ನಿರತರಾಗಿದ್ದರು.

PREV
click me!

Recommended Stories

ಕರ್ನಾಟಕ ಬಂದ್ : ಖಾಸಗಿ ಮ್ಯಾಕ್ಸಿಕ್ಯಾಬ್, ಪೆಟ್ರೋಲ್ ಯಥಾಸ್ಥಿತಿ
ಚುನಾವಣಾ ಪ್ರಚಾರದಿಂದ ದೂರ ಉಳಿದ ಎಸ್ ಎಂ ಕೃಷ್ಣ