'ಜನತಾ ಪ್ರಣಾಳಿಕೆ, ಜನರದ್ದೇ ಆಳ್ವಿಕೆ' ಹೆಸರಿನಲ್ಲಿ ಜೆಡಿಎಸ್ ಪ್ರಣಾಳಿಕೆ ಬಿಡುಗಡೆ

First Published May 7, 2018, 10:19 AM IST
Highlights

ಜನತಾ ಪ್ರಣಾಳಿಕೆ, ಜನರದ್ದೇ ಆಳ್ವಿಕೆ ಹೆಸರಿನಲ್ಲಿ  ಜೆಡಿಎಸ್ ಪ್ರಣಾಳಿಕೆ ಬಿಡುಗಡೆಯಾಗಿದೆ. ಪ್ರಣಾಳಿಕೆಯಲ್ಲಿರುವ ಪ್ರಮುಖ ಅಂಶಗಳು 

ಬೆಂಗಳೂರು (ಮೇ. 07): ಜನತಾ ಪ್ರಣಾಳಿಕೆ, ಜನರದ್ದೇ ಆಳ್ವಿಕೆ ಹೆಸರಿನಲ್ಲಿ  ಜೆಡಿಎಸ್ ಪ್ರಣಾಳಿಕೆ ಬಿಡುಗಡೆಯಾಗಿದೆ. ಪ್ರಣಾಳಿಕೆಯಲ್ಲಿ ಏನೆಲ್ಲ ಅಂಶಗಳಿವೆ ಇಲ್ಲಿವೆ ನೋಡಿ 

ಜೆಡಿಎಸ್ ಅಧಿಕಾರಕ್ಕೆ ಬಂದರೆ ರೈತರ ಸಂಪೂರ್ಣ ಸಾಲ ಮನ್ನಾ 

ಸ್ತ್ರೀಶಕ್ತಿ ಸಂಘಗಳ ಸಂಪೂರ್ಣ ಸಾಲ ಮನ್ನಾ

ಗರ್ಭಿಣಿ, ಬಾಣಂತಿಯರಿಗೆ 6 ತಿಂಗಳ ಕಾಲ 6 ಸಾವಿರ ಆರೋಗ್ಯ ಭತ್ಯೆ

ವಿದ್ಯಾರ್ಥಿನಿಯರಿಗೆ ಉಚಿತ ಸ್ಯಾನಿಟರಿ ಪ್ಯಾಡ್ ವಿತರಣೆ

ಸಾಲ ಪಡೆಯುವ ಮಹಿಳಾ ಉದ್ಯಮಿಗಳಿಗೆ ಬಡ್ಡಿಯ ಮೇಲೆ 5% ಸಬ್ಸಿಡಿ

ಮಹಿಳೆಯರ ಹೆಸರಿನಲ್ಲಿ ಆಸ್ತಿ ನೋಂದಣಿಯಾದ್ರೆ 50%ರಷ್ಟು ರಿಯಾಯಿತಿ

5 ಸಾವಿರಕ್ಕಿಂತ ಕಡಿಮೆ ಮಾಸಿಕ ಆದಾಯ ಇರುವ 24 ವರ್ಷ ಮೇಲ್ಪಟ್ಟ ಮಹಿಳೆಯರಿಗೆ 2000 ನಿರ್ವಹಣಾ ಭತ್ಯೆ

ಸ್ನಾತಕೋತ್ತರ ಪದವಿವರೆಗೆ ಹೆಣ್ಣು ಮಕ್ಕಳಿಗೆ ಉಚಿತ ಶಿಕ್ಷಣ

ಶೋಷಿತ ಮಹಿಳೆಯರಿಗಾಗಿ ವಸತಿ ನಿಲಯ ನಿರ್ಮಾಣ 

ಜನತಾ ಗೃಹಗಳು,ಸರ್ಕಾರದಿಂದ ಹಂಚಿಕೆಯಾಗುವ ನಿವೇಶನಗಳು ಮಹಿಳೆಯರ ಹೆಸರಿನಲ್ಲಿ ನೋಂದಣಿ

ಮಹಿಳೆಯರ ಮೇಲಿನ ದೌರ್ಜನ್ಯ ತಡೆಗೆ ಹೊಸ ಕಾಯ್ದೆ

ಬಿಸಿಯೂಟ, ಅಂಗನವಾಡಿ ಕಾರ್ಯಕರ್ತೆಯರ ವೇತನ ಹೆಚ್ಚಳ

ಪಶುಸಂಗೋಪನೆಗೆ ಮಹಿಳೆಯರಿಗೆ 10,000 ಪ್ರೋತ್ಸಾಹ ಧನ 

5 ವರ್ಷಗಳಲ್ಲಿ 1 ಕೋಟಿ ಉದ್ಯೋಗ ಸೃಷ್ಟಿ 

65 ಕ್ಕೂ ಮೇಲ್ಪಟ್ಟ ಹಿರಿಯರಿಗೆ 6 ಸಾವಿರ ಮಾಸಾಶನ 

click me!