ಲಿಂಗಾಯತ , ಹಿಂದುಳಿದ ಶಾಸಕರಿಗ ಬಿಜೆಪಿ ಗಾಳ

First Published May 18, 2018, 7:59 AM IST
Highlights

ಬಹುಮತದ ಕೊರತೆಯ ನಡುವೆಯೂ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಮುಖ್ಯ ಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದ ಬಳಿಕ ಇದೀಗ ಆಪರೇಷನ್ ಕಮಲಕ್ಕೆ ಕೇಸರಿ ಪಡೆ ಸಜ್ಜಾಗಿದ್ದು, ಕಾಂಗ್ರೆಸ್-ಜೆಡಿಎಸ್‌ನಲ್ಲಿನ ಲಿಂಗಾಯತ ಹಾಗೂ ಹಿಂದುಳಿದ ವರ್ಗಗಳ ಶಾಸಕರಿಗೆ ಗಾಳ ಹಾಕಲು ಪಕ್ಷದ ಲಿಂಗಾಯತ ಮುಖಂಡರಿಗೆ ಜವಾಬ್ದಾರಿ ನೀಡಿದೆ ಎನ್ನಲಾಗಿದೆ.

ಬೆಂಗಳೂರು (ಮೇ 18) : ಬಹುಮತದ ಕೊರತೆಯ ನಡುವೆಯೂ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಮುಖ್ಯ ಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದ ಬಳಿಕ ಇದೀಗ ಆಪರೇಷನ್ ಕಮಲಕ್ಕೆ ಕೇಸರಿ ಪಡೆ ಸಜ್ಜಾಗಿದ್ದು, ಕಾಂಗ್ರೆಸ್-ಜೆಡಿಎಸ್‌ನಲ್ಲಿನ ಲಿಂಗಾಯತ ಹಾಗೂ ಹಿಂದುಳಿದ ವರ್ಗಗಳ ಶಾಸಕರಿಗೆ ಗಾಳ ಹಾಕಲು ಪಕ್ಷದ ಲಿಂಗಾಯತ ಮುಖಂಡರಿಗೆ ಜವಾಬ್ದಾರಿ ನೀಡಿದೆ ಎನ್ನಲಾಗಿದೆ.

ಲಿಂಗಾಯತ ಶಾಸಕರನ್ನು ಸೆಳೆಯಲು ಪಕ್ಷದ ಲಿಂಗಾಯತ ಸಮುದಾಯಕ್ಕೆ ಸೇರಿದ ಕೆಲವು ಶಾಸಕರಿಗೆ ಜವಾಬ್ದಾರಿ ನೀಡಲಾಗಿದ್ದರೆ, ಹಿಂದುಳಿದ ವರ್ಗಗಳ ಶಾಸಕರನ್ನು ಕರೆತರುವ ಹೊಣೆಯನ್ನು ಶ್ರೀರಾಮುಲು ಮತ್ತವರ ತಂಡಕ್ಕೆ ವಹಿಸಲಾಗಿದೆ. 

ಜೆಡಿಎಸ್‌ಗಿಂತ ಕಾಂಗ್ರೆಸ್ ಶಾಸಕರನ್ನೇ ಗುರಿಯಾಗಿ ಸಿಕೊಳ್ಳಲು ನಿರ್ಧರಿಸಲಾಗಿದೆ ಎಂದು ಮೂಲಗಳು ತಿಳಿಸಿವೆ. ಈ ಆಪರೇಷನ್ ಕಮಲಕ್ಕೆ ಬಿಜೆಪಿ ವರಿಷ್ಠರು 2 ದಿನಗಳ ಕಾಲ ಗಡುವು ನೀಡಿದ್ದಾರೆ ಎನ್ನಲಾಗಿದ್ದು, ಪಕ್ಷದ ರಾಷ್ಟ್ರೀಯ ನಾಯಕರ ಉಸ್ತುವಾರಿಯಲ್ಲಿ ಈ ಪ್ರಯತ್ನ ನಡೆಯಲಿದೆ ಎಂದು ತಿಳಿದು ಬಂದಿದೆ. 

ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರದಲ್ಲಿ ಪ್ರತ್ಯೇಕ ಲಿಂಗಾಯತ ಧರ್ಮದ ಬಗ್ಗೆ ಕೇಂದ್ರಕ್ಕೆ ಶಿಫಾರಸು ಮಾಡಿರು ವುದನ್ನು ಬಿಜೆಪಿ ಈಗ ತನ್ನ ಅಸ್ತ್ರವನ್ನಾಗಿ ಬಳಸಿ ಕೊಳ್ಳಲು ಮುಂದಾಗಿದೆ. 

click me!