ರಾಜ್ಯ ರಾಜಕೀಯ ರಂಗಕ್ಕೆ ಪ್ರವೇಶಿಸಲಿರುವ ಅಮಿತ್ ಶಾ

Published : May 16, 2018, 11:09 AM IST
ರಾಜ್ಯ ರಾಜಕೀಯ ರಂಗಕ್ಕೆ ಪ್ರವೇಶಿಸಲಿರುವ ಅಮಿತ್ ಶಾ

ಸಾರಾಂಶ

ಬಿಜೆಪಿ ಅತಿದೊಡ್ಡ ಪಕ್ಷವಾಗಿ ಹೊರಹೊಮ್ಮಿ ದರೂ ಸರ್ಕಾರ ರಚಿಸಲು ಸಾಧ್ಯವಾಗದೇ ಇರುವ ಪರಿಸ್ಥಿತಿ ನಿರ್ಮಾಣವಾದ ಬೆನ್ನಲ್ಲೇ ಆ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಅವರು ರಂಗ ಪ್ರವೇಶ ಮಾಡಲಿದ್ದಾರೆ. ಈ ಸಂಬಂಧ ಅಮಿತ್ ಶಾ ಅವರು ಇನ್ನೆರಡು ದಿನಗಳಲ್ಲಿ ನಗರಕ್ಕೆ ಆಗಮಿಸುವ ಸಾಧ್ಯತೆಯಿದೆ. 

ಬೆಂಗಳೂರು: ಬಿಜೆಪಿ ಅತಿದೊಡ್ಡ ಪಕ್ಷವಾಗಿ ಹೊರಹೊಮ್ಮಿ ದರೂ ಸರ್ಕಾರ ರಚಿಸಲು ಸಾಧ್ಯವಾಗದೇ ಇರುವ ಪರಿಸ್ಥಿತಿ ನಿರ್ಮಾಣವಾದ ಬೆನ್ನಲ್ಲೇ ಆ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಅವರು ರಂಗ ಪ್ರವೇಶ ಮಾಡಲಿದ್ದಾರೆ. ಈ 
ಸಂಬಂಧ ಅಮಿತ್ ಶಾ ಅವರು ಇನ್ನೆರಡು ದಿನಗಳಲ್ಲಿ ನಗರಕ್ಕೆ ಆಗಮಿಸುವ ಸಾಧ್ಯತೆಯಿದೆ. 

ಮಂಗಳವಾರ ಫಲಿತಾಂಶ ಪ್ರಕಟಗೊಂಡ ಬೆನ್ನಲ್ಲೇ ಸಂಜೆ ವೇಳೆ ಕೇಂದ್ರ ಸಚಿವರಾದ ಪ್ರಕಾಶ್ ಜಾವ ಡೇಕರ್, ಜೆ.ಪಿ.ನಡ್ಡಾ, ಧರ್ಮೇಂದ್ರ ಪ್ರಧಾನ್ ಮೊದಲಾದವರು ನಗರಕ್ಕೆ ಆಗಮಿಸಿ ರಾಜ್ಯ ನಾಯಕರೊಂದಿಗೆ ಚರ್ಚೆ ನಡೆಸಿದರು. ಪಕ್ಷದ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಅವರನ್ನು ಶಾಸಕಾಂಗ ಪಕ್ಷದ ನೂತನ ನಾಯಕನನ್ನಾಗಿ ಆಯ್ಕೆ ಮಾಡಲಾಗುತ್ತದೆ. 

ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡಿದ ಯಡಿಯೂರಪ್ಪ, ಚುನಾವಣೆಯಲ್ಲಿ ಅತಿ ಹೆಚ್ಚು ಕ್ಷೇತ್ರಗಳಲ್ಲಿ ಗೆಲವು ಸಾಧಿಸಿದ ಪಕ್ಷವು ಸರ್ಕಾರ ರಚಿಸಬಹುದು ಎಂಬುದನ್ನು ಸುಪ್ರೀಂಕೋರ್ಟ್ ತಿಳಿಸಿದೆ. ಅದರಂತೆ ಪಕ್ಷವು ಮುಂದುವರಿಯಲಿದೆ. ರಾಜ್ಯಪಾಲರು ಬಿಜೆಪಿಗೆ ಸರ್ಕಾರ ರಚಿಸಲು ಆಹ್ವಾನ ನೀಡಲಿದ್ದಾರೆ ಎಂಬ ವಿಶ್ವಾಸವಿದೆ ಎಂದು ಹೇಳಿದರು.

PREV
click me!

Recommended Stories

ಕರ್ನಾಟಕ ಬಂದ್ : ಖಾಸಗಿ ಮ್ಯಾಕ್ಸಿಕ್ಯಾಬ್, ಪೆಟ್ರೋಲ್ ಯಥಾಸ್ಥಿತಿ
ಚುನಾವಣಾ ಪ್ರಚಾರದಿಂದ ದೂರ ಉಳಿದ ಎಸ್ ಎಂ ಕೃಷ್ಣ