ಹೆಚ್ ಡಿಕೆ ಅಧಿಕಾರಕ್ಕೆ ಬಂದ 24 ಗಂಟೆಯಲ್ಲೇ ರೈತರ ಸಾಲ ಮನ್ನಾ

First Published May 3, 2018, 8:27 AM IST
Highlights

ಜೆಡಿಎಸ್ ಅಧಿಕಾರಕ್ಕೆ ಬಂದ 24 ಗಂಟೆಯಲ್ಲೇ ರಾಷ್ಟ್ರೀಕೃತ ಮತ್ತು ಸಹಕಾರ ಬ್ಯಾಂಕ್‌ನಲ್ಲಿ ರೈತರು ಮಾಡಿರುವ 51 ಸಾವಿರ ಕೋಟಿ ಸಂಪೂರ್ಣ ಸಾಲ ಮನ್ನಾ ಮಾಡುತ್ತೇನೆ ಎಂದು ಮಾಜಿ ಮುಖ್ಯಮಂತ್ರಿ ಎಚ್ .ಡಿ.ಕುಮಾರಸ್ವಾಮಿ ತಿಳಿಸಿದರು. 

ಬೀದರ್: ಜೆಡಿಎಸ್ ಅಧಿಕಾರಕ್ಕೆ ಬಂದ 24 ಗಂಟೆಯಲ್ಲೇ ರಾಷ್ಟ್ರೀಕೃತ ಮತ್ತು ಸಹಕಾರ ಬ್ಯಾಂಕ್‌ನಲ್ಲಿ ರೈತರು ಮಾಡಿರುವ 51 ಸಾವಿರ ಕೋಟಿ ಸಂಪೂರ್ಣ ಸಾಲ ಮನ್ನಾ ಮಾಡುತ್ತೇನೆ ಎಂದು ಮಾಜಿ ಮುಖ್ಯಮಂತ್ರಿ ಎಚ್ .ಡಿ.ಕುಮಾರಸ್ವಾಮಿ ತಿಳಿಸಿದರು. 
ಭಾಲ್ಕಿ ಪಟ್ಟಣದಲ್ಲಿ ಬುಧವಾರ ಮಾತನಾಡಿ, ಸಮ್ಮಿಶ್ರ ಸರ್ಕಾರದ ಅವಧಿಯಲ್ಲಿ ಮುಖ್ಯಮಂತ್ರಿಯಾಗಿದ್ದಾಗ ರೈತರ 2500 ಕೋಟಿ ಸಾಲ ಮನ್ನಾ ಮಾಡಿ, ಕೇವಲ 20 ದಿನಗಳಲ್ಲಿ ಅದರ ಲಾಭ ಕೃಷಿಕರಿಗೆ ಸಿಗುವಂತೆ ಮಾಡಿದ್ದೆ. 
ಆದರೆ, ಕಾಂಗ್ರೆಸ್ ಸರ್ಕಾರ ಸಾಲ ಮನ್ನಾ ಘೋಷಿಸಿ ಒಂದು ವರ್ಷ ಪೂರ್ಣಗೊಳ್ಳುತ್ತ ಬಂದರೂ ಅದರ ಲಾಭ ರೈತರಿಗೆ ಸಿಕ್ಕಿಲ್ಲ. ಇನ್ನು ರೈತರ ಸಾಲ ಮನ್ನಾ ವಿಷಯ ಬಂದಾಗ ಊಹುಂ ಅನ್ನುವ ಕೇಂದ್ರದ ಮೋದಿ ಸರ್ಕಾರ, ಕೈಗಾರಿಕೋದ್ಯಮಿಗಳ ಸಾವಿರಾರು ಕೋಟಿ ಸಾಲ ಮನ್ನಾ ಮಾಡಿದೆ.

ಇನ್ನಾದರೂ ಕಾಂಗ್ರೆಸ್ ಹಾಗೂ ಬಿಜೆಪಿ ಸಾಲ ಮನ್ನಾ ಬಗ್ಗೆ ಸ್ಪಷ್ಟ ನಿಲುವು ತಳೆಯಲಿ ಎಂದು ವ್ಯಂಗ್ಯವಾಡಿದರು. ಇದೇ ವೇಳೆ, ಜೆಡಿಎಸ್ ಅಧಿಕಾರಕ್ಕೆ ಬಂದರೆ ರೈತರು ಮತ್ತೆಂದೂ ಸಾಲ ಮಾಡದಂತೆ ಕೃಷಿ ನೀತಿಯಲ್ಲಿ ಬದಲಾವಣೆ ತರಲು ತೀರ್ಮಾನಿಸಿದ್ದೇನೆ ಎಂದು ಕುಮಾರಸ್ವಾಮಿ ಹೇಳಿದರು.

click me!