ಬಿಎಸ್ ವೈ , ಶೆಟ್ಟರ್ , ಅಶೋಕ್ ಗೆ ಎದುರಾಗಿದೆ ಕಂಟಕ

First Published May 5, 2018, 8:11 AM IST
Highlights

ಬೆಂಗಳೂರಿನ ಆರ್.ಎಂ.ವಿ ಬಡಾವಣೆ ಎರಡನೇ ಹಂತದ ಲೊಟ್ಟೆಗೊಲ್ಲಹಳ್ಳಿಯಲ್ಲಿ ಬಿಡಿಎ ವಶಪಡಿಸಿಕೊಂಡಿದ್ದ 14 ಗುಂಟೆ ಜಮೀನನ್ನು ಅಕ್ರಮವಾಗಿ ಡಿನೋಟಿಫೈ ಮಾಡಿದ್ದಾರೆ ಎಂಬ ಆರೋಪಕ್ಕೆ ಸಂಬಂಧಿಸಿದಂತೆ ಮಾಜಿ ಮುಖ್ಯಮಂತ್ರಿಗಳಾದ ಬಿ.ಎಸ್.ಯಡಿಯೂರಪ್ಪ, ಜಗದೀಶ್ ಶೆಟ್ಟರ್ ಮತ್ತು ಶಾಸಕ ಆರ್.ಅಶೋಕಗೆ  ಹೈಕೋರ್ಟ್ ತುರ್ತು ನೋಟಿಸ್ ಜಾರಿ ಮಾಡಿದೆ. 

ಬೆಂಗಳೂರು: ಮುಖ್ಯಮಂತ್ರಿ ಆಗಿದ್ದ ಅವಧಿಯಲ್ಲಿ ಬೆಂಗಳೂರಿನ ಆರ್.ಎಂ.ವಿ ಬಡಾವಣೆ ಎರಡನೇ ಹಂತದ ಲೊಟ್ಟೆಗೊಲ್ಲಹಳ್ಳಿಯಲ್ಲಿ ಬಿಡಿಎ ವಶಪಡಿಸಿಕೊಂಡಿದ್ದ 14 ಗುಂಟೆ ಜಮೀನನ್ನು ಅಕ್ರಮವಾಗಿ ಡಿನೋಟಿಫೈ ಮಾಡಿದ್ದಾರೆ ಎಂಬ ಆರೋಪಕ್ಕೆ ಸಂಬಂಧಿಸಿದಂತೆ ಮಾಜಿ ಮುಖ್ಯಮಂತ್ರಿಗಳಾದ ಬಿ.ಎಸ್.ಯಡಿಯೂರಪ್ಪ, ಜಗದೀಶ್ ಶೆಟ್ಟರ್ ಮತ್ತು ಶಾಸಕ ಆರ್.ಅಶೋಕಗೆ  ಹೈಕೋರ್ಟ್ ಶುಕ್ರವಾರ ತುರ್ತು ನೋಟಿಸ್ ಜಾರಿ ಮಾಡಿದೆ.

ಪ್ರಕರಣದ ಮರು ತನಿಖೆ ನಡೆಸಲು ಎಸಿಬಿಗೆ ನಿರ್ದೇಶಿಸುವಂತೆ ಕೋರಿ ನಿವೃತ್ತ ವಿಂಗ್ ಕಮಾಂಡರ್ ಜಿ.ಬಿ.ಅತ್ರಿ ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಬಿ.ವೀರಪ್ಪ ಮತ್ತು ನ್ಯಾಯ ಮೂರ್ತಿ ಸುನೀಲ್ ದತ್ ಯಾದವ್ ಅವರಿದ್ದ ವಿಭಾಗೀಯ ಪೀಠ, ಆದೇಶ ಮಾಡಿತು.

click me!