ಬಾದಾಮಿಯಲ್ಲಿ ಸಿಎಂ, ಶ್ರೀರಾಮುಲು, ವರುಣಾದಲ್ಲಿ ಬಸವರಾಜಪ್ಪ,ಮಂಡ್ಯದಲ್ಲಿ ಅಂಬಿ ಬದಲು ಗಾಣಿಗ ರವಿ ನಾಮಪತ್ರ

First Published Apr 24, 2018, 4:47 PM IST
Highlights

ಮಂಡ್ಯ ಕ್ಷೇತ್ರದಲ್ಲಿ ಅಂಬರೀಶ್ ಸ್ಪರ್ಧಿಸಲು ನಿರಾಕರಿಸಿದ ಕಾರಣ ಗಾಣಿಗ ರವಿ ಎಂಬುವವರು ಕಣಕ್ಕಿಳಿದಿದ್ದಾರೆ.ಬೆಂಗಳೂರಿನ ಯಶವಂತಪುರ ಕ್ಷೇತ್ರದಿಂದ ಸ್ಪರ್ಧಿಸಿದ್ದಾರೆ.

ಬೆಂಗಳೂರು(ಏ.24): ಕರ್ನಾಟಕ ವಿಧಾನಸಭಾ ಚುನಾವಣೆಗೆ ನಾಮಪತ್ರ ಸಲ್ಲಿಸಲು ಕೊನೆಯ ದಿನವಾದ ಇಂದು ಘಟಾನುಘಟಿಗಳು ನಾಮಪತ್ರ ಸಲ್ಲಿಸಿದರು.

ಬಾದಾಮಿಯನ್ನು 2ನೇ ಕ್ಷೇತ್ರವಾಗಿ ಆಯ್ಕೆ ಮಾಡಿಕೊಂಡಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನಾಮಪತ್ರ ಸಲ್ಲಿಸಿದರೆ ಬಿಜೆಪಿಯಿಂದ ಸಂಸದ ಶ್ರೀರಾಮುಲು ತಮ್ಮ ಉಮೇದುವಾರಿಕೆ ಸಲ್ಲಿಸಿದರು. ಮೊಳಕಾಲ್ಮೂರು ಕ್ಷೇತ್ರದಲ್ಲೂ ಕೂಡ ಶ್ರೀರಾಮುಲು ಸ್ಪರ್ಧಿಸಿದ್ದಾರೆ.

ಮೈಸೂರಿನ ವರುಣಾದಲ್ಲಿ ಬಿಎಸ್'ವೈ ಪುತ್ರನಿಗೆ ಟಿಕೆಟ್ ನಿರಾಕರಿಸುವುದರಿಂದ ಬಸವರಾಜಪ್ಪ ಅವರನ್ನು ಕಣಕ್ಕಿಳಿಸಲಾಗಿದೆ. ಅವರೂ ಕೂಡ ಇಂದು ನಾಮಪತ್ರ ಸಲ್ಲಿಸಿದರು. ಮಂಡ್ಯ ಕ್ಷೇತ್ರದಲ್ಲಿ ಅಂಬರೀಶ್ ಸ್ಪರ್ಧಿಸಲು ನಿರಾಕರಿಸಿದ ಕಾರಣ ಗಾಣಿಗ ರವಿ ಎಂಬುವವರು ಕಣಕ್ಕಿಳಿದಿದ್ದಾರೆ.ಬೆಂಗಳೂರಿನ ಯಶವಂತಪುರ ಕ್ಷೇತ್ರದಿಂದ ಸ್ಪರ್ಧಿಸಿದ್ದಾರೆ.

click me!