ರಾಹುಲ್ ಪ್ರಯಾಣಿಸಿದ ವಿಮಾನದಲ್ಲಿ ತಾಂತ್ರಿಕ ದೋಷ ಸುಳ್ಳು ?

First Published Apr 28, 2018, 7:23 PM IST
Highlights

ಏ.26 ರಂದು ದೆಹಲಿಯಿಂದ ಹುಬ್ಬಳ್ಳಿಗೆ ಬಂದಿಳಿದಿದ್ದ ರಾಹುಲ್ ವಿಮಾನ ಲ್ಯಾಂಡಿಂಗ್ ವೇಳೆ ತಾಂತ್ರಿಕ ಸಮಸ್ಯೆಯಾಗಿದೆ ಎಂದು ದೂರು ನೀಡಿದ್ದರು. ಪೈಲೆಟ್ ವಿಮಾನವನ್ನು ಲ್ಯಾಂಡಿಂಗ್ ಮಾಡುವ ವೇಳೆ ಮೂರು ಬಾರಿ ತಿರುಗಿಸಿ ಲ್ಯಾಂಡಿಂಗ್ ಮಾಡಿದ್ದ.  ಈ ಬಗ್ಗೆ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಶಾಕೀರ್ ಸನದಿ ಹುಬ್ಬಳ್ಳಿಯ ಗೋಕುಲ ರಸ್ತೆ ಪೊಲೀಸ್ ಠಾಣೆಗೆ ದೂರು ನೀಡಿದ್ದರು. 

ಹುಬ್ಬಳ್ಳಿ(ಏ.28): ರಾಹುಲ್ ಗಾಂಧಿ ಪ್ರಯಾಣಿಸಿದ ವಿಮಾನದಲ್ಲಿ ತಾಂತ್ರಿಕ ದೋಷ ಉಂಟಾದ ಪ್ರಕರಣಕ್ಕೆ ಡಿಜಿಸಿಎ ತಂಡ‌ ಯಾವುದೇ ತಾಂತ್ರಿಕ ದೋಷವಿಲ್ಲ ಎಂಬ ನಿರ್ಣಯಕ್ಕೆ ಬಂದಿದೆ.
ಏ.26 ರಂದು ದೆಹಲಿಯಿಂದ ಹುಬ್ಬಳ್ಳಿಗೆ ಬಂದಿಳಿದಿದ್ದ ರಾಹುಲ್ ವಿಮಾನ ಲ್ಯಾಂಡಿಂಗ್ ವೇಳೆ ತಾಂತ್ರಿಕ ಸಮಸ್ಯೆಯಾಗಿದೆ ಎಂದು ದೂರು ನೀಡಿದ್ದರು. ಪೈಲೆಟ್ ವಿಮಾನವನ್ನು ಲ್ಯಾಂಡಿಂಗ್ ಮಾಡುವ ವೇಳೆ ಮೂರು ಬಾರಿ ತಿರುಗಿಸಿ ಲ್ಯಾಂಡಿಂಗ್ ಮಾಡಿದ್ದ.  ಈ ಬಗ್ಗೆ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಶಾಕೀರ್ ಸನದಿ ಹುಬ್ಬಳ್ಳಿಯ ಗೋಕುಲ ರಸ್ತೆ ಪೊಲೀಸ್ ಠಾಣೆಗೆ ದೂರು ನೀಡಿದ್ದರು.

ದೂರಿನ ಹಿನ್ನೆಲೆಯಲ್ಲಿ ತನಿಖೆಗೆ ಆಗಮಿಸಿದ ನಾಗರಿಕ ವಿಮಾನಯಾನ ಸೇವೆಗಳ ನಿರ್ದೇಶನಾಲಯ (ಡಿಜಿಸಿಎ) ತಂಡದ ಅಧಿಕಾರಿಗಳು ವಿಮಾನವನ್ನ ಮತ್ತೊಮ್ಮೆ ಹಾರಾಡಿಸಿ ಪರಿಶೀಲನೆ ನಡೆಸಿ ಯಾವುದೇ ತಾಂತ್ರಿಕ ದೋಷವಿಲ್ಲ ಎಂಬ ನಿರ್ಣಯಕ್ಕೆ ಬಂದಿದ್ದಾರೆ ಎನ್ನಲಾಗಿದೆ.

click me!