ಕುಮಾರಸ್ವಾಮಿ 5 ವರ್ಷ ಸಿಎಂ ಆಗಿರುವ ಬಗ್ಗೆ ಇನ್ನೂ ನಿರ್ಧರಿಸಿಲ್ಲ

First Published May 22, 2018, 9:22 AM IST
Highlights

ಮುಂದಿನ 5 ವರ್ಷಗಳ ಕಾಲ ಕುಮಾರಸ್ವಾಮಿಯವರೇ ಮುಖ್ಯಮಂತ್ರಿಯಾಗಿರಲಿದ್ದಾರೆಯೇ ಎಂಬ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು ‘ಇಲ್ಲ, ಈ ಬಗ್ಗೆ ಇನ್ನಷ್ಟೆ ಚರ್ಚೆಯಾಗಬೇಕಿದೆ’ ಎಂದು ರಾಜ್ಯ ಕಾಂಗ್ರೆಸ್ ಉಸ್ತುವಾರಿ ವೇಣು ಗೋಪಾಲ್ ಹೇಳಿದರು. 

ಬೆಂಗಳೂರು : ಮುಂದಿನ 5 ವರ್ಷಗಳ ಕಾಲ ಕುಮಾರಸ್ವಾಮಿಯವರೇ ಮುಖ್ಯಮಂತ್ರಿಯಾಗಿರಲಿದ್ದಾರೆಯೇ ಎಂಬ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು ‘ಇಲ್ಲ, ಈ ಬಗ್ಗೆ ಇನ್ನಷ್ಟೆ ಚರ್ಚೆಯಾಗಬೇಕಿದೆ’ ಎಂದು ರಾಜ್ಯ ಕಾಂಗ್ರೆಸ್ ಉಸ್ತುವಾರಿ ವೇಣು ಗೋಪಾಲ್ ಹೇಳಿದರು. 

ಜೆಡಿಎಸ್ ಜತೆಗಿನ ಮೈತ್ರಿಯನ್ನು ದೀರ್ಘ ಕಾಲೀನವಾಗಿಸುವ ಇರಾದೆ ಇದೆ. ಈ ಬಗ್ಗೆ ರಾಹುಲ್ ಗಾಂಧಿ ಹಾಗೂ ಸೋನಿಯಾ ಗಾಂಧಿ ಚರ್ಚೆ ನಡೆಸಿ ದ್ದಾರೆ. ಚುನಾವಣೆಯ ಸಂದರ್ಭದಲ್ಲಿ ನಡೆಸಿದ್ದ ಪರಸ್ಪರ ಕಟುಟೀಕೆ ಗಳನ್ನು ಮರೆತು ಹೊಸ ಹೆಜ್ಜೆ ಇಡುವ ಬಗ್ಗೆ ರಾಹುಲ್ ಮತ್ತು ಕುಮಾರಸ್ವಾಮಿ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. 

ಸಚಿವ ಸಂಪುಟ ರಚನೆ ಮತ್ತು ಖಾತೆ ಹಂಚಿಕೆಯ ಬಗ್ಗೆ ಬೆಂಗಳೂರಿನಲ್ಲಿಯೇ ಚರ್ಚೆ ನಡೆಸುವ ತೀರ್ಮಾನಕ್ಕೆ ಬರಲಾಗಿದೆ. ಆದ್ದರಿಂದ ದೆಹಲಿಯಲ್ಲಿ ಈ ಬಗ್ಗೆ ಚರ್ಚೆ ನಡೆಸಿಲ್ಲ. ಉಪ ಮುಖ್ಯಮಂತ್ರಿ ಹುದ್ದೆ ಮುಂತಾದವೆಲ್ಲವನ್ನು ಕಾಂಗ್ರೆಸ್ ಅಧ್ಯಕ್ಷರೇ ತೀರ್ಮಾನಿಸುತ್ತಾರೆ ಎಂದರು. ಆದರೆ ಸಮ ನ್ವಯ ಸಮಿತಿಯನ್ನು ರಚಿಸಲು ಒಪ್ಪಿಕೊಳ್ಳಲಾ ಗಿದ್ದು, ಇದರಲ್ಲಿ ಜೆಡಿಎಸ್ ಮತ್ತು ಕಾಂಗ್ರೆಸ್ ನಾಯಕರು ಇರಲಿದ್ದಾರೆ ಎಂದು ವೇಣು ಗೋಪಾಲ್ ಮಾಹಿತಿ ನೀಡಿದರು.

click me!