
ಬೆಂಗಳೂರು: ರಾಜರಾಜೇಶ್ವರಿ ನಗರ ಕಾಂಗ್ರೆಸ್ ಅಭ್ಯರ್ಥಿ ಮುನಿರತ್ನ ವಿರುದ್ಧ ಕಾಮಾಕ್ಷಿಪಾಳ್ಯ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ.
ಮುನಿರತ್ನ ಅವರು ಮತದಾರರಿಗೆ ಹಂಚಲು ನಾಗರಭಾವಿಯ ಗೋಡೌನ್ ಒಂದರಲ್ಲಿ ಸೀರೆಗಳನ್ನು ಸಂಗ್ರಹಿಸಿಟ್ಟಿದ್ದರು. ಈ ಹಿನ್ನೆಲೆಯಲ್ಲಿ ಚುನಾವಣಾಧಿಕಾರಿಗಳು ನೀಡಿದ ದೂರಿನ ಆಧಾರದ ಮೇಲೆ ಎಫ್‌ಐಆರ್ ದಾಖಲಿಸಲಾಗಿದೆ.
ಖಚಿತ ಮಾಹಿತಿ ಆಧಾರದ ಮೇಲೆ ದಾಳಿ ನಡೆಸಿದ್ದ ಚುನಾವಣಾ ವಿಚಕ್ಷಣ ದಳ 7 ಸಾವಿರಕ್ಕೂ ಹೆಚ್ಚು ಸೀರೆ ಹಾಗೂ ದವಸ ಧಾನ್ಯದ ಮೂಟೆಗಳನ್ನು ವಶಪಡಿಸಿಕೊಂಡಿದ್ದಾರೆ. ಮುನಿರತ್ನ ಸೇರಿ ನಾಲ್ವರ ವಿರುದ್ಧ ಇದೀಗ ಪ್ರಕರಣ ದಾಖಲಾಗಿದೆ.
ಆರ್‌ಆರ್ ನಗರ ವಿಧಾನಸಭಾ ವ್ಯಾಪ್ತಿಯ ಜಾಲಹಳ್ಳಿಯ ಅಪಾರ್ಟ್‌ಮೆಂಟ್‌ವೊಂದರಲ್ಲಿ ಸುಮಾರು 10 ಸಾವಿರ ಅಕ್ರಮ ಮತ ಚೀಟಿಗಳು ಪತ್ತೆಯಾದಹಿನ್ನೆಲೆಯಲ್ಲಿ, ಈ ಕ್ಷೇತ್ರದ ಚುನಾವಣೆಯನ್ನು ಮೇ 28ಕ್ಕೆ ಮುಂದೂಡಲಾಗಿದೆ.