
ಬೆಂಗಳೂರು(ಮೇ.18): ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡರ 86ನೇ ವರ್ಷದ ಹುಟ್ಟು ಹಬ್ಬಕ್ಕೆ ಪ್ರಧಾನಿ ನರೇಂದ್ರ ಮೋದಿ, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಶುಭಾಶಯ ಕೋರಿದ್ದಾರೆ.
ಪ್ರಧಾನಿ ನರೇಂದ್ರ ಮೋದಿ ಅವರು ದೇವೇಗೌಡ ಅವರಿಗೆ ಕರೆ ಮಾಡಿ ಶುಭಾಶಯ ತಿಳಿಸಿದ್ದು, ದೇವರು ಅವರಿಗೆ ಆರೋಗ್ಯ ದೀರ್ಘಾಯುಶ್ಯ ನೀಡಲಿ ಎಂದು ಟ್ವಿಟರ್'ನಲ್ಲಿ ಹೇಳಿಕೊಂಡಿದ್ದಾರೆ.
ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಕೂಡ ಟ್ವೀಟ್ ಮಾಡಿ ' ಜೆಡಿ(ಎಸ್) ರಾಷ್ಟ್ರೀಯ ಅಧ್ಯಕ್ಷರಾದ ಎಚ್.ಡಿ.ದೇವೇಗೌಡರಿಗೆ ಹುಟ್ಟುಹಬ್ಬದ ಹಾರ್ದಿಕ ಶುಭಾಶಯಗಳು. ವಿರೋಧಪಕ್ಷದ ನಾಯಕರಾಗಿ, ಮುಖ್ಯಮಂತ್ರಿ, ಪ್ರಧಾನಮಂತ್ರಿಯಾಗಿ ಸೇವೆ ಸಲ್ಲಿಸಿರುವ ಕೀರ್ತಿ ನಿಮ್ಮದು. ನಾಡಿನ ನೆಲ,ಜಲ,ಭಾಷೆ ಬಗೆಗಿನ ನಿಮ್ಮ ಬದ್ಧತೆ ನಮಗೆಲ್ಲರಿಗೂ ಸ್ಪೂರ್ತಿದಾಯಕ. ನೂರು ಕಾಲ ಆಯುಷ್ಯ- ಆರೋಗ್ಯ ನಿಮ್ಮದಾಗಲಿ' ತಿಳಿಸಿದ್ದಾರೆ. ಎಐಸಿಸಿ ಅಧ್ಯಕ್ಷ ಕೂಡ ಮಾಜಿ ಪ್ರಧಾನಿಗಳಿಗೆ ಟ್ವಿಟರ್'ನಲ್ಲಿ ಶುಭ ಕೋರಿದ್ದಾರೆ.
(ಸಾಂದರ್ಭಿಕ ಚಿತ್ರ)
I would like to wish Shri HD Deve Gowda ji a very happy birthday and pray for his good health and happiness.