ಆರ್ ಆರ್ ನಗರ ಚುನಾವಣೆ ಭವಿಷ್ಯ ಇಂದು ನಿರ್ಧಾರ

First Published May 11, 2018, 8:39 AM IST
Highlights

ರಾಜರಾಜೇಶ್ವರಿ ನಗರ ವಿಧಾನಸಭಾ ಕ್ಷೇತ್ರದಲ್ಲಿ ಚುನಾವಣೆ ನಡೆಸಬೇಕೇ ಅಥವಾ ಮುಂದೂಡಬೇಕೇ ಎಂಬುದರ ಕುರಿತು ಇಂದು  ನಿರ್ಧಾರ ಹೊರಬೀಳಲಿದೆ. ಆಯೋಗದ ಹಿರಿಯ ಅಧಿಕಾರಿಗಳು ಚರ್ಚಿಸಿ ಮುಂದಿನ ತೀರ್ಮಾನ ಪ್ರಕಟಿಸಲಿದ್ದಾರೆ ಎಂದು ಹೇಳಲಾಗಿದೆ.

ಬೆಂಗಳೂರು : ಸಾವಿರಾರು ಜನರ ಮತದಾರರ ಗುರುತಿನ ಚೀಟಿ  ಪತ್ತೆಯಾಗಿರುವ ರಾಜರಾಜೇಶ್ವರಿ ನಗರ ವಿಧಾನಸಭಾ ಕ್ಷೇತ್ರದ ಚುನಾವಣೆಯ ಭವಿಷ್ಯ ಶುಕ್ರವಾರ ನಿರ್ಧಾರವಾಗಲಿದೆ. ಅಪಾರ್ಟ್‌ಮೆಂಟ್‌ವೊಂದರಲ್ಲಿ ಒಂಬತ್ತು ಸಾವಿರಕ್ಕೂ ಹೆಚ್ಚು ಸಂಖ್ಯೆಯಲ್ಲಿ ಮತದಾರರ ಗುರುತಿನ ಚೀಟಿ ಪತ್ತೆಯಾದ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ ಕೇಂದ್ರ ಚುನಾವಣಾ ಆಯೋಗವು ಉಪ ಮುಖ್ಯ ಚುನಾವಣಾಧಿಕಾರಿ ಚಂದ್ರಭೂಷಣ ಕುಮಾರ್ ಅವರನ್ನು ನಗರಕ್ಕೆ ಕಳುಹಿಸಿ ಹೆಚ್ಚಿನ ಮಾಹಿತಿಯನ್ನು ಪಡೆದು ಕೊಂಡಿದೆ. 

ಬುಧವಾರ ತಡರಾತ್ರಿಯಿಂದಲೇ ಕಾರ್ಯಾಚರಣೆ ಕೈಗೊಂಡಿದ್ದ ಉಪ ಮುಖ್ಯ ಚುನಾವಣಾಧಿಕಾರಿಗಳು ಗುರುವಾರ ಸ್ಥಳಕ್ಕೆ ಭೇಟಿ ನೀಡಿ ಖುದ್ದು ಪರಿಶೀಲನೆ ನಡೆಸಿದರು. ಘಟನೆ ಕುರಿತು ಎಲ್ಲಾ ವಿವರಗಳನ್ನು ಪಡೆದುಕೊಂಡಿರುವ ಆಯೋಗದ ಅಧಿಕಾರಿಗಳು ದೆಹಲಿಗೆ ತೆರಳಿದ್ದು, ಶುಕ್ರವಾರ ಅಂತಿಮ  ತೀರ್ಮಾನ ಪ್ರಕಟಿಸಲಿದ್ದಾರೆ. ರಾಜರಾಜೇಶ್ವರಿ ನಗರ ವಿಧಾನಸಭಾ ಕ್ಷೇತ್ರದಲ್ಲಿ ಚುನಾವಣೆ ನಡೆಸಬೇಕೇ ಅಥವಾ ಮುಂದೂಡಬೇಕೇ ಎಂಬುದರ ಕುರಿತು ಶುಕ್ರವಾರ ನಿರ್ಧಾರ ಹೊರಬೀಳಲಿದೆ. ಆಯೋಗದ ಹಿರಿಯ ಅಧಿಕಾರಿಗಳು ಚರ್ಚಿಸಿ ಮುಂದಿನ ತೀರ್ಮಾನ ಪ್ರಕಟಿಸಲಿದ್ದಾರೆ ಎಂದು ಹೇಳಲಾಗಿದೆ.

ಮತದಾರರ ಗುರುತಿನ ಚೀಟಿ ಪ್ರಕರಣ ಕುರಿತು ಗುರುವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ರಾಜ್ಯ ಮುಖ್ಯ ಚುನಾವಣಾಧಿಕಾ ರಿ ಸಂಜೀವ್ ಕುಮಾರ್, ರಾಜರಾಜೇಶ್ವರಿನಗರ ವಿಧಾನಸಭಾ ಕ್ಷೇತ್ರದಲ್ಲಿ ಮತದಾರರ ಗುರುತಿನ ಚೀಟಿಗಳು ಪತ್ತೆಯಾದ ಸ್ಥಳಕ್ಕೆ ಕೇಂದ್ರ ಚುನಾವಣಾ ಆಯೋಗದ ಉಪ ಮುಖ್ಯ ಚುನಾವಣಾಧಿ ಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ರಾಜ್ಯ ಮುಖ್ಯ ಚುನಾವಣಾಧಿಕಾರಿಗಳ  ಕಚೇರಿಯ ವರದಿಯ ಜತೆಗೆ ಕೆಲವು ಮಾಹಿತಿ ಗಳನ್ನು ಖುದ್ದಾಗಿ ಪಡೆದುಕೊಂಡಿದ್ದಾರೆ. ಘಟನೆ ಯು ಆಯೋಗದ ಮುಂದಿದ್ದು, ಮುಂದಿನ ತೀರ್ಮಾನ ಕೈಗೊಳ್ಳಲಿದೆ ಎಂದು ಹೇಳಿದರು. ಪ್ರಕರಣದ ಸಂಬಂಧ ಎರಡನೇ ಎಫ್‌ಐಆರ್
ದಾಖಲಾಗಿದ್ದು, ಇದರಲ್ಲಿ ರಾಜರಾಜೇಶ್ವರಿ ನಗರದ ಸ್ಥಳೀಯ ಶಾಸಕರ ಹೆಸರು ಸಹ ಇದೆ. 

ಸಂಬಂಧಪಟ್ಟ ಪೊಲೀಸರು ತನಿಖೆಯನ್ನು ಮುಂದುವರಿಸಿದ್ದಾರೆ ಎಂದು ಹೇಳಿದರು.  ದಾಖಲೆ ತೋರಿಸಿ ಮತ ಹಾಕಿ: ರಾಜರಾಜೇಶ್ವರಿ ನಗರ ಕ್ಷೇತ್ರದಲ್ಲಿ ಪತ್ತೆಯಾದ ಗುರುತಿನ ಚೀಟಿಗಳನ್ನು ವಶಕ್ಕೆ ಪಡೆದುಕೊಂಡಿರು ವುದರಿಂದ ಕ್ಷೇತ್ರದ ಮತದಾರರು ಆಯೋಗವು ತಿಳಿಸಿರುವ 12 ದಾಖಲೆಗಳ ಪೈಕಿ ಒಂದನ್ನು ತೋರಿಸಿ ತಮ್ಮ ಮತವನ್ನು ಚಲಾಯಿಸಬಹುದು ಎಂದರು.

click me!