
ಚಿಕ್ಕಬಳ್ಳಾಪುರ: ಗೌರಿಬಿದನೂರಿನ ಕಾಂಗ್ರೆಸ್ ಶಾಸಕ ಎನ್.ಎಚ್. ಶಿವಶಂಕರೆಡ್ಡಿ ಅವರೂ ಬಿಜೆಪಿಗೆ ಸೇರ್ಪಡೆಯಾಗಲಿದ್ದಾರೆ ಎಂಬ ದಟ್ಟ ವದಂತಿ ಹರಡಿದೆ. ಸತತ ಐದು ಬಾರಿ ಶಾಸಕರಾಗಿ ಆಯ್ಕೆಯಾಗಿರುವ ರೆಡ್ಡಿ ಅವರಿಗೆ ಸಿದ್ದರಾಮಯ್ಯಸರ್ಕಾರದಲ್ಲಿ ಸಚಿವ ಸ್ಥಾನ ಸಿಕ್ಕಿರಲಿಲ್ಲ.
ಹಿಂದೆ ಕಾಂಗ್ರೆಸ್ ಅಧಿಕಾರದಲ್ಲಿದ್ದಾಗಲೂ ವಿಧಾನಸಭಾ ಉಪಾಧ್ಯಕ್ಷ ಸ್ಥಾನಕ್ಕೆ ಅವರು ತೃಪ್ತಿಪಟ್ಟುಕೊಳ್ಳಬೇಕಾಯಿತು. ಈ ಬಗ್ಗೆ ಶಿವಶಂಕರೆಡ್ಡಿ ಮತ್ತು ಅವರ ಬೆಂಬಲಿಗರಿಗೆ ಅಸಮಾಧಾನಗೊಂಡಿದ್ದು, ಈ ಹಿನ್ನೆಲೆಯಲ್ಲಿ ಬಿಜೆಪಿ ಸರ್ಕಾರವನ್ನು ಬೆಂಬಲಿಸಲು ಮುಂದಾಗಿದ್ದಾರೆ ಎಂಬ ವದಂತಿಗಳು ಹರಡಿವೆ.
ಆದರೆ, ಇದಕ್ಕೆಲ್ಲ ಶನಿವಾರ ವಿಧಾನಸಭೆಯಲ್ಲಿ ನಡೆಯುವ ವಿಶ್ವಾಮತಯಾಚನೆಯಲ್ಲಿ ಸೂಕ್ತ ಉತ್ತರ ದೊರೆಯಲಿದೆ.