ಸೋಲಿನ ಹತಾಶೆಯಿಂದ ಬೋಪಯ್ಯಗೆ ಆಕ್ಷೇಪ : ಶೋಭಾ

Published : May 19, 2018, 08:06 AM ISTUpdated : May 19, 2018, 08:08 AM IST
ಸೋಲಿನ ಹತಾಶೆಯಿಂದ ಬೋಪಯ್ಯಗೆ ಆಕ್ಷೇಪ : ಶೋಭಾ

ಸಾರಾಂಶ

ವಿಧಾನಸಭೆ ಚುನಾವಣೆಯ ಸೋಲಿನಿಂದ ಹತಾಶೆಗೊಂಡಿರುವ ಕಾಂಗ್ರೆಸ್ ಪಕ್ಷ ಕೀಳರಿಮೆಯಿಂದ ಹಂಗಾಮಿ ಸ್ಪೀಕರ್ ಕೆ.ಜೆ.ಬೋಪಯ್ಯ ಅವರ ನೇಮಕಕ್ಕೆ ಆಕ್ಷೇಪ ವ್ಯಕ್ತಪಡಿಸುತ್ತಿದೆ ಎಂದು ರಾಜ್ಯ ಬಿಜೆಪಿ ಪ್ರಧಾನ ಕಾರ್ಯದರ್ಶಿಯೂ ಆಗಿರುವ ಸಂಸದೆ ಶೋಭಾ ಕರಂದ್ಲಾಜೆ ದೂರಿದ್ದಾರೆ.   

ಬೆಂಗಳೂರು :  ವಿಧಾನಸಭೆ ಚುನಾವಣೆಯ ಸೋಲಿನಿಂದ ಹತಾಶೆಗೊಂಡಿರುವ ಕಾಂಗ್ರೆಸ್ ಪಕ್ಷ ಕೀಳರಿಮೆಯಿಂದ ಹಂಗಾಮಿ ಸ್ಪೀಕರ್ ಕೆ.ಜೆ.ಬೋಪಯ್ಯ ಅವರ ನೇಮಕಕ್ಕೆ ಆಕ್ಷೇಪ ವ್ಯಕ್ತಪಡಿಸುತ್ತಿದೆ ಎಂದು ರಾಜ್ಯ ಬಿಜೆಪಿ ಪ್ರಧಾನ ಕಾರ್ಯದರ್ಶಿಯೂ ಆಗಿರುವ ಸಂಸದೆ ಶೋಭಾ ಕರಂದ್ಲಾಜೆ ದೂರಿದ್ದಾರೆ. 

ಶುಕ್ರವಾರ ಪಕ್ಷದ ಕಚೇರಿಯಲ್ಲಿ ಮಾತನಾಡಿದ ಅವರು, ಈ ಹಿಂದೆ ಕೂಡ ಅಂದಿನ ರಾಜ್ಯಪಾಲರಾಗಿದ್ದ ರಾಮೇಶ್ವರ ಠಾಕೂರ್ ಅವರು ಬೋಪಯ್ಯ ಅವರನ್ನು ಸ್ಪೀಕರ್ ಆಗಿ ನೇಮಕ ಮಾಡಿದ್ದರು. ಆಗ ಕೇಂದ್ರದಲ್ಲಿ ಯುಪಿಎ ಸರ್ಕಾರ ಅಧಿಕಾರದಲ್ಲಿತ್ತು. ಬಳಿಕ ಬೋಪಯ್ಯ ಉಪ ಸಭಾಧ್ಯಕ್ಷರಾಗಿ, ಸಭಾಧ್ಯಕ್ಷರಾಗಿ ಕಾರ್ಯ ನಿರ್ವಹಿಸಿದ್ದಾರೆ. ಸದ್ಯ 4 ನೇ ಬಾರಿಗೆ ಶಾಸಕರಾಗಿ ಆಯ್ಕೆಯಾಗಿರುವ ಬೋಪಯ್ಯ ವಕೀಲರಾಗಿದ್ದು, ಕಾನೂನಿನ ಬಗ್ಗೆ ಚೆನ್ನಾಗಿ ಅರಿತಿದ್ದಾರೆ.

ಸಂಸದೀಯ ನಡಾವಳಿ ಹಾಗೂ ಸದನ ಕಲಾಪಗಳ ಬಗ್ಗೆ ಅಪಾರ ಅನುಭವ ಹೊಂದಿದ್ದಾರೆ. ಸದನದ ಕಾರ್ಯಕಲಾಪಗಳನ್ನು ಯಶಸ್ವಿಯಾಗಿ ನಡೆಸಿದ್ದಾರೆ. ಆದರೂ, 2008 ರಲ್ಲಿ ಬೋಪಯ್ಯ ಅವರ ನೇಮಕ ಪ್ರಶ್ನಿಸದ ಕಾಂಗ್ರೆಸ್ ಈಗ ಆಕ್ಷೇಪ ವ್ಯಕ್ತಪಡಿಸುತ್ತಿದೆ ಎಂದು ಟೀಕಿಸಿದರು.

ಪ್ರಧಾನಿ ನರೇಂದ್ರ ಮೋದಿ ಹಾಗೂ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಸರ್ವಾಧಿಕಾರಗಳಂತೆ ವರ್ತಿಸುತ್ತಿದ್ದಾರೆ ಎಂಬ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಹೇಳಿಕೆಗೆ ಕಿಡಿಕಾರಿದ ಶೋಭಾ, ಹಿಟ್ಲರ್, ಗಡಾಫಿ ಅವರಂತೆ ಸರ್ವಾಧಿಕಾರಿಗಳಾಗಿ, ದುರಹಂಕಾರದಿಂದ ಮೆರೆದ ಕಾಂಗ್ರೆಸ್ ನಾಯಕರಿಗೆ ಜನರು ಸರಿಯಾದ ದಾರಿ ತೋರಿಸಿದ್ದಾರೆ. 

ಮೋದಿ ಮತ್ತು ಅಮಿತ್ ಶಾ ಅವರು ಅನೇಕ ರಾಜ್ಯಗಳಲ್ಲಿ ಚುನಾವಣೆಗಳನ್ನು ಯಶಸ್ವಿಯಾಗಿ ಎದುರಿಸಿ ಬಿಜೆಪಿಯನ್ನು ಅಧಿಕಾರಕ್ಕೆ ತಂದಿದ್ದಾರೆ. ಪ್ರಧಾನಿಯಾಗಿ ಮೋದಿ ಅವರು ವಿಶ್ವ ನಾಯಕರಾಗಿ ಭಾರತಕ್ಕೆ ಗೌರವ ತಂದುಕೊಟ್ಟಿದ್ದಾರೆ. ಆದರೆ, ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ, ರಾಹುಲ್ ಗಾಂಧಿ ನೇತೃತ್ವದಲ್ಲಿ ಕಾಂಗ್ರೆಸ್ ಒಂದೊಂದೇ ರಾಜ್ಯದಲ್ಲಿ ಸೋಲುತ್ತಾ ಬಂದಿದೆ. 

ರಾಷ್ಟ್ರೀಯ ಪಕ್ಷವೊಂದನ್ನು ಶೋಚನೀಯ ಸ್ಥಿತಿಗೆ ತಲುಪಿಸಿದ್ದಾರೆ ಎಂದು ಟೀಕಿಸಿದರು. ಶನಿವಾರ ನಡೆಯಲಿರುವ ವಿಶ್ವಾಸಮತ ಯಾಚನೆಯಲ್ಲಿ ಬಿಜೆಪಿಗೆ 120 ಕ್ಕೂ ಹೆಚ್ಚು ಶಾಸಕರ ಬೆಂಬಲ ದೊರೆಯಲಿದೆ ಎಂದು ಇದೇ ವೇಳೆ ಅವರು ವಿಶ್ವಾಸ ವ್ಯಕ್ತಪಡಿಸಿದರು.

PREV
click me!

Recommended Stories

ಕರ್ನಾಟಕ ಬಂದ್ : ಖಾಸಗಿ ಮ್ಯಾಕ್ಸಿಕ್ಯಾಬ್, ಪೆಟ್ರೋಲ್ ಯಥಾಸ್ಥಿತಿ
ಚುನಾವಣಾ ಪ್ರಚಾರದಿಂದ ದೂರ ಉಳಿದ ಎಸ್ ಎಂ ಕೃಷ್ಣ