ಎರಡೂ ಕಡೆ ಸಿದ್ದರಾಮಯ್ಯ ಗೆಲುವು ಖಚಿತ : ಜಯಮಾಲ

Published : May 02, 2018, 12:53 PM IST
ಎರಡೂ ಕಡೆ ಸಿದ್ದರಾಮಯ್ಯ ಗೆಲುವು ಖಚಿತ : ಜಯಮಾಲ

ಸಾರಾಂಶ

 ನಟಿ ಜಯಮಾಲ ಮುಖ್ಯಮಂತ್ರಿ ಸಿದ್ದರಾಮಯ್ಯ ಈ ಬಾರಿ ಅಧಿಕಾರಕ್ಕೆ ಬರುವುದು ಖಚಿತ ಎಂದು ನಟಿ ಜಯಮಾಲ ವಿಶ್ವಾಸ ವ್ಯಕ್ತಪಡಿಸಿದ್ದಾರೆ.   ಸಂಪೂರ್ಣ ಐದು ವರ್ಷ ಪೂರೈಸಿದ ಸಿದ್ದರಾಮಯ್ಯ ಮೇಲೆ ಒಂದೇ ಒಂದು ಭ್ರಷ್ಟಾಚಾರ ದ ಆರೋಪಗಳಿಲ್ಲ. ಮತ್ತೆ ಸಿದ್ದರಾಮಯ್ಯ ಹೆಚ್ಚು ಮತಗಳ ಅಂತರದಿಂದ ಗೆದ್ದು ಬರುತ್ತಾರೆ ಎಂದು ಹೇಳಿದ್ದಾರೆ.

ಬೆಂಗಳೂರು :  ನಟಿ ಜಯಮಾಲ ಮುಖ್ಯಮಂತ್ರಿ ಸಿದ್ದರಾಮಯ್ಯ ಈ ಬಾರಿ ಅಧಿಕಾರಕ್ಕೆ ಬರುವುದು ಖಚಿತ ಎಂದು ನಟಿ ಜಯಮಾಲ ವಿಶ್ವಾಸ ವ್ಯಕ್ತಪಡಿಸಿದ್ದಾರೆ. 
 ಸಂಪೂರ್ಣ ಐದು ವರ್ಷ ಪೂರೈಸಿದ ಸಿದ್ದರಾಮಯ್ಯ ಮೇಲೆ ಒಂದೇ ಒಂದು ಭ್ರಷ್ಟಾಚಾರ ದ ಆರೋಪಗಳಿಲ್ಲ. ಮತ್ತೆ ಸಿದ್ದರಾಮಯ್ಯ ಹೆಚ್ಚು ಮತಗಳ ಅಂತರದಿಂದ ಗೆದ್ದು ಬರುತ್ತಾರೆ ಎಂದು ಹೇಳಿದ್ದಾರೆ.

ಸಿದ್ದರಾಮಯ್ಯ ಅವರಿಗೆ ಗೆಲ್ಲಲು ಕಷ್ಟ ಇದೆ ಎಂದು ಹೇಳುತ್ತಿದ್ದಾರೆ. ಆದರೆ ನನಗೆ ಹಾಗೆ ಎನಿಸುತ್ತಿಲ್ಲ. ತಮ್ಮ ಮಗನನ್ನು ಕಳೆದುಕೊಂಡರೂ ನೋವು ತೋರಿಸಿಕೊಳ್ಳದೇ  ಅಭಿವೃದ್ಧಿ ಕಾರ್ಯದಲ್ಲಿ ತೊಡಗಿಕೊಂಡಿದ್ದರು.  ಇಂದಿರಾ ಕ್ಯಾಂಟೀನ್ ಮಾಡಿ ಬಡವರ ಹಸಿವು ನೀಗಿಸಿದರು.  ಎಲ್ಲಾ ರಂಗದಲ್ಲಿಯೂ ಅಭಿವೃದ್ಧಿ ಕಾರ್ಯ ಮಾಡಿದ್ದಾರೆ ಎಂದು ಜಯಮಾಲ ಹೇಳಿದರು.

ಸಿದ್ದರಾಮಯ್ಯ ಬಾದಾಮಿಯಲ್ಲಿ ಸ್ಪರ್ಧೆ ಮಾಡಿದ್ದರಲ್ಲಿ ತಪ್ಪೇನು ಇಲ್ಲ. ಸಿದ್ದರಾಮಯ್ಯ ಅವರಿಗೆ ಎದೆಗಾರಿಗೆ ಇದೆ. ತೊಡೆ ತಟ್ಟಿ ಗಣಿಗಾರಿಕೆ ಬಗ್ಗೆ ಹೋರಾಟ ಮಾಡಿದ ಸಿಂಹ ಸಿದ್ದರಾಮಯ್ಯ.  ಹೆದರಿಕೊಂಡು ಸಿದ್ದರಾಮಯ್ಯ ಬಾದಾಮಿಗೆ ಹೋಗಿದ್ದಲ್ಲ. ಎರಡೂ ಕಡೆ ಸಿದ್ದರಾಮಯ್ಯ ಗೆಲ್ಲುತ್ತಾರೆ ಎನ್ನುವ ವಿಶ್ವಾಸ ನಮ್ಮಲ್ಲಿದೆ ಎಂದು ಜಯಮಾಲ ಹೇಳಿದರು.

PREV
click me!

Recommended Stories

ಕರ್ನಾಟಕ ಬಂದ್ : ಖಾಸಗಿ ಮ್ಯಾಕ್ಸಿಕ್ಯಾಬ್, ಪೆಟ್ರೋಲ್ ಯಥಾಸ್ಥಿತಿ
ಚುನಾವಣಾ ಪ್ರಚಾರದಿಂದ ದೂರ ಉಳಿದ ಎಸ್ ಎಂ ಕೃಷ್ಣ