ಕಾಂಗ್ರೆಸ್ ನಲ್ಲಿ ಮಂತ್ರಿಗಿರಿ ಕಸರತ್ತು

First Published May 24, 2018, 9:19 AM IST
Highlights

ಮುಖ್ಯಮಂತ್ರಿಯಾಗಿ ಎಚ್‌.ಡಿ. ಕುಮಾರಸ್ವಾಮಿ ವಿಶ್ವಾಸಮತ ಸಾಬೀತುಪಡಿಸಿದ ಬಳಿಕ ಹೊಸ ಸಚಿವ ಸಂಪುಟಕ್ಕೆ ತಮ್ಮಿಂದ ಯಾರಾರ‍ಯರು ಸೇರಬೇಕು ಎಂಬುದನ್ನು ನಿರ್ಧರಿಸಲು ಮತ್ತು ಮುಂದಿನ ಕೆಪಿಸಿಸಿ ಅಧ್ಯಕ್ಷ ಗಾದಿ ಯಾರ ಪಾಲಾಗಬೇಕು ಎಂಬ ಬಗ್ಗೆ ಚರ್ಚೆ ನಡೆಸಲು ಕಾಂಗ್ರೆಸ್‌ ನಾಯಕರ ದಂಡು ದೆಹಲಿಗೆ ತೆರಳಲಿದೆ.

ಬೆಂಗಳೂರು :  ಮುಖ್ಯಮಂತ್ರಿಯಾಗಿ ಎಚ್‌.ಡಿ. ಕುಮಾರಸ್ವಾಮಿ ವಿಶ್ವಾಸಮತ ಸಾಬೀತುಪಡಿಸಿದ ಬಳಿಕ ಹೊಸ ಸಚಿವ ಸಂಪುಟಕ್ಕೆ ತಮ್ಮಿಂದ ಯಾರಾರ‍ಯರು ಸೇರಬೇಕು ಎಂಬುದನ್ನು ನಿರ್ಧರಿಸಲು ಮತ್ತು ಮುಂದಿನ ಕೆಪಿಸಿಸಿ ಅಧ್ಯಕ್ಷ ಗಾದಿ ಯಾರ ಪಾಲಾಗಬೇಕು ಎಂಬ ಬಗ್ಗೆ ಚರ್ಚೆ ನಡೆಸಲು ಕಾಂಗ್ರೆಸ್‌ ನಾಯಕರ ದಂಡು ದೆಹಲಿಗೆ ತೆರಳಲಿದೆ.

ಕಾಂಗ್ರೆಸ್‌ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್‌, ರಾಜ್ಯ ಉಸ್ತುವಾರಿ ಕೆ.ಸಿ. ವೇಣುಗೋಪಾಲ್‌, ನಾಯಕರಾದ ಮಲ್ಲಿಕಾರ್ಜುನ ಖರ್ಗೆ, ಡಿ.ಕೆ. ಶಿವಕುಮಾರ್‌, ಎಸ್‌.ಆರ್‌. ಪಾಟೀಲ್‌ ಹಾಗೂ ದಿನೇಶ್‌ ಗುಂಡೂರಾವ್‌ ಅವರು ದೆಹಲಿಗೆ ತೆರಳಲಿದ್ದು, ಕಾಂಗ್ರೆಸ್‌ ಅಧ್ಯಕ್ಷ ರಾಹುಲ್‌ ಗಾಂಧಿ ಅವರೊಂದಿಗೆ ಮಾತುಕತೆ ನಡೆಸಲಿದ್ದಾರೆ.

ಮೂಲಗಳ ಪ್ರಕಾರ ಕಾಂಗ್ರೆಸ್‌ ನಾಯಕರೊಂದಿಗೆ ರಾಹುಲ್‌ ಗಾಂಧಿ ಅವರ ಸಭೆ ಮೇ 26ರಂದು ನಡೆಯುವ ಸಾಧ್ಯತೆಯಿದೆ. ಈ ಸಭೆಯಲ್ಲಿ ಕುಮಾರಸ್ವಾಮಿ ಸಂಪುಟದಲ್ಲಿ ಯಾರು ಸಚಿವರಾಗಿರಬೇಕು ಎಂಬುದು ನಿರ್ಧಾರವಾಗಲಿದೆ. ರಾಹುಲ್‌ ಮುಂದೆ ಪಟ್ಟಿಸಿದ್ಧಗೊಳ್ಳಲಿದ್ದು, ಆ ಪಟ್ಟಿಯನ್ನು ಕಾಂಗ್ರೆಸ್‌ ಪಕ್ಷ ಕುಮಾರಸ್ವಾಮಿ ಅವರಿಗೆ ನೀಡಲಿದೆ. ಅನಂತರ ಸಚಿವರ ಪ್ರಮಾಣ ವಚನ ಕಾರ್ಯಕ್ರಮ ನಡೆಯಲಿದೆ ಎಂದು ಮೂಲಗಳು ತಿಳಿಸಿವೆ.

ದೆಹಲಿ ಭೇಟಿ ವೇಳೆ ಮುಂದಿನ ಕೆಪಿಸಿಸಿ ಅಧ್ಯಕ್ಷರು ಯಾರಾಗಬೇಕು ಎಂಬುದು ನಿರ್ಧಾರವಾಗುವ ಸಾಧ್ಯತೆಯಿದೆ. ಕೆಪಿಸಿಸಿ ಅಧ್ಯಕ್ಷ ಜಿ.ಪರಮೇಶ್ವರ್‌ ಅವರು ಉಪ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕಾರ ಮಾಡಿರುವ ಹಿನ್ನೆಲೆಯಲ್ಲಿ ಅವರು ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ಶೀಘ್ರವೇ ರಾಜೀನಾಮೆ ನೀಡಬೇಕಿದೆ. ಹೀಗಾಗಿ ಮುಂದಿನ ಕೆಪಿಸಿಸಿ ಅಧ್ಯಕ್ಷ ಸ್ಥಾನ ಯಾರಿಗೆ ನೀಡಬೇಕು ಎಂಬ ಬಗ್ಗೆಯೂ ಹೈಕಮಾಂಡ್‌ ಜತೆ ಚರ್ಚೆ ನಡೆಯಲಿದೆ ಎಂದು ಮೂಲಗಳು ಹೇಳಿವೆ.

click me!