ಬೆಳಗಾವಿ: ಗ್ರಾಮ ಲೆಕ್ಕಾಧಿಕಾರಿ ಕಾರಲ್ಲಿ ಅಕ್ರಮವಾಗಿ ಕೋಟಿ ಕೋಟಿ ಹಣ ಸಾಗಾಟ..!

Published : Jul 19, 2024, 08:59 PM ISTUpdated : Jul 20, 2024, 10:20 AM IST
ಬೆಳಗಾವಿ: ಗ್ರಾಮ ಲೆಕ್ಕಾಧಿಕಾರಿ ಕಾರಲ್ಲಿ ಅಕ್ರಮವಾಗಿ ಕೋಟಿ ಕೋಟಿ ಹಣ ಸಾಗಾಟ..!

ಸಾರಾಂಶ

ಗ್ರಾಮ ಲೆಕ್ಕಾಧಿಕಾರಿ ಕಾರಲ್ಲಿ ದಾಖಲೆ ರಹಿತವಾಗಿ 1 ಕೋಟಿ 10 ಲಕ್ಷ ಹಣ ಸಾಗಿಸಲಾಗುತ್ತಿತ್ತು. ಈ ವೇಳೆ ದಾಳಿ ಮಾಡಿದ ಪೊಲೀಸರು ಬೆಳಗಾವಿ ಜಿಲ್ಲೆಯ ರಾಮದುರ್ಗ ತಾಲೂಕಿನ ಹಲಗತ್ತಿ ಗ್ರಾಮದ ಚೆಕ್‌ಪೋಸ್ಟ್‌ನಲ್ಲಿ ವಶಕ್ಕೆ1 ಕೋಟಿ 10 ಲಕ್ಷ ಹಣವನ್ನ ವಶಕ್ಕೆ ಪಡೆದಿದ್ದಾರೆ. 

ಬೆಳಗಾವಿ(ಜು.19):  ಗ್ರಾಮ ಲೆಕ್ಕಾಧಿಕಾರಿ ಕಾರಲ್ಲಿ ಅಕ್ರಮವಾಗಿ ಕೋಟಿ ಕೋಟಿ ಹಣ ಸಾಗಾಟ ಮಾಡುತ್ತಿದ್ದ ಘಟನೆ ಬೆಳಗಾವಿ ಜಿಲ್ಲೆಯ ರಾಮದುರ್ಗ ತಾಲೂಕಿನ ಹಲಗತ್ತಿ ಗ್ರಾಮದ ಬಳಿ ಇಂದು(ಶುಕ್ರವಾರ) ನಡೆದಿದೆ. 

ಗ್ರಾಮ ಲೆಕ್ಕಾಧಿಕಾರಿ ಕಾರಲ್ಲಿ ದಾಖಲೆ ರಹಿತವಾಗಿ 1 ಕೋಟಿ 10 ಲಕ್ಷ ಹಣ ಸಾಗಿಸಲಾಗುತ್ತಿತ್ತು. ಈ ವೇಳೆ ದಾಳಿ ಮಾಡಿದ ಪೊಲೀಸರು ಬೆಳಗಾವಿ ಜಿಲ್ಲೆಯ ರಾಮದುರ್ಗ ತಾಲೂಕಿನ ಹಲಗತ್ತಿ ಗ್ರಾಮದ ಚೆಕ್‌ಪೋಸ್ಟ್‌ನಲ್ಲಿ ವಶಕ್ಕೆ1 ಕೋಟಿ 10 ಲಕ್ಷ ಹಣವನ್ನ ವಶಕ್ಕೆ ಪಡೆದಿದ್ದಾರೆ. 

ಬೆಳಗಾವಿ: ಹಿಂದೂ ಬುದ್ಧಿಮಾಂದ್ಯೆ ಯುವತಿ ಮೇಲೆ ಅನ್ಯಕೋಮಿನ ವ್ಯಕ್ತಿಯಿಂದ ಅತ್ಯಾಚಾರಕ್ಕೆ ಯತ್ನ

ನಿಪ್ಪಾಣಿ ಗ್ರಾಮ ಲೆಕ್ಕಾಧಿಕಾರಿ ವಿಠ್ಠಲ ಶಿವಪ್ಪ ಢವಳೇಶ್ವರ ಎಂಬುವವರ ಕಾರಲ್ಲಿ ಹಣ ಸಾಗಾಟ ಮಾಡಲಾಗುತ್ತಿತ್ತು. ಈ ಹಣವನ್ನು ಅಕ್ರಮವಾಗಿ ಬೆಳಗಾವಿಯಿಂದ ಬಾಗಲಕೋಟೆಗೆ ಸಾಗಿಸುತ್ತಿತ್ತು ಎಂಬ ಮಾಹಿತಿ ಲಭ್ಯವಾಗಿದೆ.  

ಖಚಿತ ಮಾಹಿತಿ ಮೇರೆಗೆ ರಾಮದುರ್ಗ ಪೊಲೀಸರು ದಾಳಿ ನಡೆಸಿ ನಗದು ವಶಕ್ಕೆ ಪಡೆದಿದ್ದಾರೆ. ಹಣ ವಶಕ್ಕೆ ಪಡೆದು ಆದಾಯ ತೆರಿಗೆ ಅಧಿಕಾರಿಗಳಿಗೆ ಪ್ರಕರಣ ವರ್ಗಾವಣೆ ಮಾಡಿದ್ದಾರೆ. ರಾಮದುರ್ಗ ಡಿವೈಎಸ್‌ಪಿ ಎಂ. ಪಾಂಡುರಂಗಯ್ಯ ನೇತೃತ್ವದಲ್ಲಿ ದಾಳಿ ನಡೆಸಲಾಗಿದೆ. 

PREV
Read more Articles on
click me!

Recommended Stories

ಪ್ರಿ ವೆಡ್ಡಿಂಗ್ ಫೋಟೋ ಶೂಟ್ ಮುಗಿಸಿ ಬೈಕ್‌ನಲ್ಲಿ ತೆರಳುತ್ತಿದ್ದ ಜೋಡಿಗೆ ಲಾರಿ ಡಿಕ್ಕಿ, ಸ್ಥಳದಲ್ಲೇ ಸಾವು
ಕಾಂಗ್ರೆಸ್ ಸರ್ಕಾರ ಶೇ.60ರಷ್ಟು ಭ್ರಷ್ಟಾಚಾರದಲ್ಲಿ ಮುಳುಗಿದೆ: ಮಾಜಿ ಸಚಿವ ಬಿ.ಸಿ.ಪಾಟೀಲ್ ಆರೋಪ