ಮಾಸ್ಕ್‌ ಧರಿಸದವರಿಂದ 1 ಕೋಟಿ ದಂಡ ವಸೂಲಿ

Kannadaprabha News   | Asianet News
Published : Jul 12, 2020, 08:42 AM IST
ಮಾಸ್ಕ್‌ ಧರಿಸದವರಿಂದ 1 ಕೋಟಿ ದಂಡ ವಸೂಲಿ

ಸಾರಾಂಶ

ಕಳೆದೊಂದು ತಿಂಗಳಲ್ಲಿ ನಗರದ ಸಾರ್ವಜನಿಕ ಸ್ಥಳದಲ್ಲಿ ಮಾಸ್ಕ್‌ ಧರಿಸದೇ ಮತ್ತು ಸಾಮಾಜಿಕ ಅಂತರ ಕಾಯ್ದುಕೊಳ್ಳದ 50 ಸಾವಿರ ಮಂದಿಗೆ ಬಿಬಿಎಂಪಿ ಮಾರ್ಷಲ್‌ಗಳು 1.01 ಕೋಟಿ ರು. ದಂಡ ವಿಧಿಸಿದ್ದಾರೆ.

ಬೆಂಗಳೂರು(ಜು.12): ಕಳೆದೊಂದು ತಿಂಗಳಲ್ಲಿ ನಗರದ ಸಾರ್ವಜನಿಕ ಸ್ಥಳದಲ್ಲಿ ಮಾಸ್ಕ್‌ ಧರಿಸದೇ ಮತ್ತು ಸಾಮಾಜಿಕ ಅಂತರ ಕಾಯ್ದುಕೊಳ್ಳದ 50 ಸಾವಿರ ಮಂದಿಗೆ ಬಿಬಿಎಂಪಿ ಮಾರ್ಷಲ್‌ಗಳು 1.01 ಕೋಟಿ ರು. ದಂಡ ವಿಧಿಸಿದ್ದಾರೆ.

ಜೂ.9ರಿಂದ ಜು.10ರ ವರೆಗೆ ಮಾರುಕಟ್ಟೆ, ಬಸ್‌ ನಿಲ್ದಾಣ, ರಸ್ತೆ, ಪಾರ್ಕ್ ಸೇರಿದಂತೆ ಇನ್ನಿತರ ಸಾರ್ವಜನಿಕ ಪ್ರದೇಶದಲ್ಲಿ ಮಾಸ್ಕ್‌ ಧರಿಸದೇ, ಸಾಮಾಜಿಕ ಅಂತರ ಕಾಯ್ದುಕೊಳ್ಳದೇ ಬೇಜವಾಬ್ದಾರಿಯಿಂದ ನಡೆದುಕೊಂಡ 50,706 ಮಂದಿಯಿಂದ ತಲಾ 200 ರು.ನಂತೆ .1.01 ಕೋಟಿ ದಂಡ ವಸೂಲಿ ಮಾಡಲಾಗಿದೆ.

ಅರ್ಧಕ್ಕರ್ಧ ಬೆಂಗ್ಳೂರು ಸೀಲ್‌ಡೌನ್‌ ಸಾಧ್ಯತೆ..!

ಸಾಮಾಜಿಕ ಅಂತರ ನಿಯಮ ಉಲ್ಲಂಘಿಸಿದ ಮತ್ತು ಕಸ ವಿಂಗಡಣೆ ಮಾಡದ 149 ಅಂಗಡಿ ಮುಂಗಟ್ಟುಗಳಿಗೆ ತಾತ್ಕಾಲಿಕವಾಗಿ ಬೀಗ ಹಾಕಲಾಗಿದೆ ಎಂದು ಬಿಬಿಎಂಪಿ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಇಂದಿನಿಂದ ರ‍್ಯಾಂಡಮ್ ಟೆಸ್ಟ್

ಬಿಬಿಎಂಪಿ ವ್ಯಾಪ್ತಿಯ ಪ್ರಾಥಮಿಕ ಆರೋಗ್ಯ ಕೇಂದ್ರಗಳ ಮೂಲಕ ಭಾನುವಾರದಿಂದ ನಗರದಲ್ಲಿ ರಾರ‍ಯಂಡಮ್‌ ಟೆಸ್ಟ್‌ ಪ್ರಾರಂಭಿಸಲು ಬಿಬಿಎಂಪಿ ಸಿದ್ಧತೆ ಮಾಡಿಕೊಂಡಿದೆ. ಪಾಲಿಕೆಗೆ ಒಟ್ಟು 50 ಸಾವಿರ ರಾರ‍ಯಪಿಡ್‌ ಕಿಟ್‌ಗಳನ್ನು ಸರ್ಕಾರ ಮಂಜೂರು ಮಾಡಿದೆ. ಇವುಗಳ ಮೂಲಕ ನಗರದಲ್ಲಿ ರಾರ‍ಯಂಡಮ್‌ ಟೆಸ್ಟ್‌ ಪ್ರಾರಂಭಿಸಲಾಗುವುದು ಎಂದು ಬಿಬಿಎಂಪಿ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

PREV
click me!

Recommended Stories

ಭದ್ರಾವತಿ: ಜೈ ಭೀಮ್ ನಗರದಲ್ಲಿ ಪ್ರೇಮಿಗಳ ವಿಚಾರಕ್ಕೆ ರಕ್ತಪಾತ: ಇಬ್ಬರು ದುರ್ಮರಣ!
'ನಿಮ್ಮ ಸುರಕ್ಷತೆ ನನಗೂ ಮುಖ್ಯ..' ಮಹಿಳಾ ಪ್ರಯಾಣಿಕರ ಮನ ಗೆದ್ದ ಆಟೋ ಚಾಲಕ, ಸಂದೇಶ ವೈರಲ್ ಮಾಡಿದ ಬೆಂಗಳೂರು ಪೊಲೀಸರು!