
ಮೂಲ್ಕಿ: ಪಣಂಬೂರು ಎಸಿಪಿ ತಂಡ ಹಾಗೂ ಮೂಲ್ಕಿ ಠಾಣೆಯ ತಂಡದಿಂದ ನಡೆದ ಕಾರ್ಯಾಚರಣೆಯಲ್ಲಿ ಠಾಣಾ ವ್ಯಾಪ್ತಿಯ ಮೂಲ್ಕಿ ರೈಲ್ವೇ ಸ್ಟೇಷನ್ ರಸ್ತೆಯಲ್ಲಿ ಮಂಗಳವಾರ ಹೈಡ್ರೊವಿಡ ಗಾಂಜಾ ಮಾದಕ ದ್ರವ್ಯ ಮಾರಾಟ ಮಾಡಲು ಸಾಗಾಟ ಮಾಡುತ್ತಿದ್ದ ಆರೋಪಿಯನ್ನು ವಶಕ್ಕೆ ಪಡೆಯಲಾಗಿದೆ.
ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನ ಹುಲಿದೇವರಬನ ನಿವಾಸಿ ದಿ.ಮೊಹಮ್ಮದ್ ಗೌಸ್ ಪುತ್ರಿ ,ಕುಂದಾಪುರ ಕಾಲೇಜಿನ ಅಂತಿಮ ವರ್ಷದ ಬಿಸಿಎ ವಿದ್ಯಾರ್ಥಿನಿ ಸುಹಾನಾ (21) ಅವರನ್ನು ವಶಕ್ಕೆ ಪಡೆಯಲಾಯಿತು. ಅವರ ಬಳಿ ಇದ್ದ ಸುಮಾರು 35, 00, 000 ರು. ಮೌಲ್ಯದ ಸುಮಾರು 1 ಕೆಜಿ 42 ಗ್ರಾಮ್ ಹೈಡ್ರೊವಿಡ ಗಾಂಜಾ ಎಂಬ ಮಾದಕ ವಸ್ತುವನ್ನು ಹಾಗೂ ಕೃತ್ಯಕ್ಕೆ ಬಳಸಿದ ಮೊಬೈಲ್ ಪೋನ್ ಮತ್ತು ಇತರ ಸೊತ್ತು ವಶಪಡಿಸಿಕೊಳ್ಳಲಾಯಿತು.
ಮಾದಕ ವಸ್ತುವನ್ನು ಆರೋಪಿತೆಯು ಚೆನ್ನೈ ನಿಂದ ತರಿಸಿಕೊಂಡು ಮಂಗಳೂರಿನಲ್ಲಿ ಅಕ್ರಮವಾಗಿ ಪೂರೈಕೆ ಮಾಡಿ ಹಣ ಗಳಿಸುವ ಉದ್ದೇಶದಿಂದ ತಂದಿರುವುದಾಗಿ ತಿಳಿದು ಬಂದಿರುತ್ತದೆ.
ಕೆಜಿಎಫ್: ಅಕ್ರಮವಾಗಿ ಗಾಂಜಾ ಮಾರುತ್ತಿದ್ದ ಇಬ್ಬರನ್ನು ಬಂಧಿಸಿ ಸುಮಾರು ಎರಡೂವರೆ ಕೆಜಿ ಗಾಂಜಾವನ್ನು ವಶಪಡಿಸಿಕೊಂಡ ಘಟನೆ ನಡೆದಿದೆ. ಬಂಧಿತರನ್ನು ಬೆಂಗಳೂರು ನಗರದ ವಾಸಿಗಳಾದ ಸುರೇಶ್ ಕುಮಾರ್, ಎನ್. ಬಿನ್. ನಂಜುಂಡಸ್ವಾಮಿ ಎಂದು ಗುರುತಿಸಲಾಗಿದೆ. ಅವರಿಂದ ೧,೨೫,೦೦೦ ರು. ಮೌಲ್ಯದ ಗಾಂಜಾ ವಶಕ್ಕೆ ಪಡೆಯಲಾಗಿದೆ. ರಾಬರ್ಟ್ಸನ್‌ಪೇಟೆ ವ್ಯಾಪ್ತಿಯ ಸ್ವಾಮಿನಾಥಪುರಂ ರಸ್ತೆಯಿಂದ ವಿನಾಯಕ ಕಾಲೇಜು ಕಡೆಗೆ ಹೋಗುವ ರಸ್ತೆಯ ಪಕ್ಕದಲ್ಲಿ ಗಾಂಜಾ ಮಾರಾಟದ ಖಚಿತ ಮಾಹಿತಿ ಮೇರೆಗೆ ರಾಬರ್ಟ್ಸನ್‌ಪೇಟೆ ಠಾಣೆ ಸಬ್ ಇನ್‌ಸ್ಪೆಕ್ಟರ್ ಮಹೇಶ್ ಮಾಳಿ ಮತ್ತು ಸಿಬ್ಬಂದಿ ದಾಳಿ ನಡೆಸಿದ್ದರು.
ಬೆಳಗಾವಿ: ನಗರದಲ್ಲಿ ಗಾಂಜಾ ಮಾರಾಟ ಮಾಡುತ್ತಿದ್ದ ಓರ್ವ ಆರೋಪಿಯನ್ನು ಬಂಧಿಸಿರುವ ಕಾಕತಿ ಠಾಣೆ ಪೊಲೀಸರು,₹ 3 ಲಕ್ಷ ಮೌಲ್ಯದ ಗಾಂಜಾ ಜಪ್ತಿ ಮಾಡಿದ್ದಾರೆ. ಮಹಾರಾಷ್ಟ್ರ ಮೂಲದ ಸೈಯದನಿಸಾರ್ ಇಸಾಕ್ (40) ಬಂಧಿತ ಆರೋಪಿ. ಕಾಕತಿ ಠಾಣೆ ವ್ಯಾಪ್ತಿಯ ರಾಷ್ಟ್ರೀಯ ಹೆದ್ದಾರಿ ಮಾರ್ಗದ ಸಾರ್ವಜನಿಕ ಸ್ಥಳದಲ್ಲಿ ಗಾಂಜಾ ಮಾರಾಟ ಮಾಡುತ್ತಿದ್ದ ವೇಳೆ ದಾಳಿ ನಡೆಸಿದ ಪೊಲೀಸರು, ಆರೋಪಿಯಿಂದ ₹ 3.5 ಲಕ್ಷ ಮೌಲ್ಯದ 6 ಕೆಜಿ 145 ಗ್ರಾಂ ಗಾಂಜಾ, ಒಂದು ಮೊಬೈಲ್ ಜಪ್ತಿ ಮಾಡಿದ್ದಾರೆ.
ಇದನ್ನೂ ಓದಿ: Bengaluru: ಅನೈತಿಕ ಸಂಬಂಧ ಮುಚ್ಚಿಕೊಳ್ಳಲು ಸುಳ್ಳು ವಂಚನೆಯ ಕಥೆ ಕಟ್ಟಿದ ಕಿಲಾಡಿ ಪತಿ
ಇದನ್ನೂ ಓದಿ: ಬೆಂಗಳೂರಲ್ಲಿ ಖಾಕಿ ಭರ್ಜರಿ ಶಿಕಾರಿ: ಮನೆಗಳ್ಳರು, ಡ್ರಗ್ ಪೆಡ್ಲರ್ಸ್ ಸೇರಿ 10 ಮಂದಿಯ ಬಂಧನ