ಕೋವಿಡ್‌ನಿಂದ ಮೃತಪಟ್ಟ ಬಿಪಿಎಲ್ ಕುಟುಂಬಕ್ಕೆ 1 ಲಕ್ಷ ಪರಿಹಾರ

By Kannadaprabha News  |  First Published Aug 5, 2021, 10:17 AM IST
  • ಬಡತನ ರೇಖೆಗಿಂತ ಕಡಿಮೆ ಮಟ್ಟದಲ್ಲಿರುವ ಕುಟುಂಬದ ದುಡಿಯುವ ಸದಸ್ಯರು ಕೋವಿಡ್ - 19ರ ಸೋಂಕಿಗೆ ಬಲಿಯಾದರೆ ಪರಿಹಾರ
  • ಮೃತಪಟ್ಟವರ ಕುಟುಂಬಕ್ಕೆ 1 ಲಕ್ಷ ರೂ. ಪರಿಹಾರಧನವನ್ನು ನೀಡಲು ಸರ್ಕಾರ ಆದೇಶ

ಮೈಸೂರು (ಆ.05):  ಬಡತನ ರೇಖೆಗಿಂತ ಕಡಿಮೆ ಮಟ್ಟದಲ್ಲಿರುವ ಕುಟುಂಬದ ದುಡಿಯುವ ಸದಸ್ಯರು ಕೋವಿಡ್ - 19ರ ಸೋಂಕಿಗೆ ಒಳಗಾಗಿ ಮೃತಪಟ್ಟಿದ್ದಲ್ಲಿ 1 ಲಕ್ಷ ರೂ. ಪರಿಹಾರಧನವನ್ನು ನೀಡಲು ಸರ್ಕಾರ ಆದೇಶಿಸಿದ್ದು, ಅರ್ಜಿ ಸಲ್ಲಿಸಬಹುದಾಗಿದೆ ಎಂದು ಜಿಲ್ಲಾಧಿಕಾರಿ ಡಾ. ಬಗಾದಿ ಗೌತಮ್‌ ತಿಳಿಸಿದ್ದಾರೆ.

ಆಯಾ ತಾಲೂಕು ಕಚೇರಿಗಳಲ್ಲಿ ಅರ್ಜಿ ಪಡೆದು ನಿಗದಿತ ನಮೂನೆಗಳಲ್ಲಿ ಭರ್ತಿ ಮಾಡಿ, ಕೋವಿಡ…-19 ವೈರಾಣು ಸೋಂಕಿನಿಂದ ಮೃತಪಟ್ಟಿರುವುದಕ್ಕೆ ಸಂಬಂಧಿಸಿದಂತೆ ಪ್ರಯೋಗಾಲಯದಿಂದ ಅಧಿಕೃತವಾಗಿ ಗುರುತಿಸಿದ ಕೋವಿಡ್‌ ಪಾಸಿಟಿವ್‌ ವರದಿ, ಕೋವಿಡ್‌ ದೃಢಪಟ್ಟರೋಗಿಯ ಸಂಖ್ಯೆ ಹಾಗೂ ವೈದ್ಯರಿಂದ ದೃಢೀಕರಣ ಮಾಡಿಸಿ ಅರ್ಜಿಯನ್ನು ಸಲ್ಲಿಸಬೇಕು ಅಥವಾ ರೋಗಲಕ್ಷಣಗಳ ಆಧಾರದ ಮೇಲೆ ಚಿಕಿತ್ಸೆ ಪಡೆದವರು (ಕೋವಿಡ್-19 ನೆಗಟಿವ್‌ ಇದ್ದವರು) ಕ್ಲಿನಿಕಲ್‌ ರೇಡಿಯಾಲಜಿ ಮತ್ತು ಇತರೆ ಸಂಬಂಧಿಸಿದ ಪ್ರಯೋಗಾಲಯ ವರದಿ ಸಲ್ಲಿಸಬೇಕು.

Tap to resize

Latest Videos

ಕರ್ನಾಟಕದ ಕೊರೋನಾ ಅಂಕಿ-ಸಂಖ್ಯೆಯ ಲೆಕ್ಕ ಇಲ್ಲಿದೆ

ಅರ್ಜಿಯ ಜೊತೆಗೆ ಮೃತಪಟ್ಟವರ ಆರ್ಧಾ ಕಾರ್ಡ್‌ ಪ್ರತಿ, ಮರಣ ಪ್ರಮಾಣ ಪತ್ರದ ಪ್ರತಿ, ಅರ್ಜಿದಾರರ ಪಡಿತರ ಚೀಟಿ ಪ್ರತಿ, ಅರ್ಜಿದಾರರ ಆರ್ಧಾ ಕಾರ್ಡ್‌ ಪ್ರತಿ, ಬ್ಯಾಂಕ್‌ ಪಾಸ್‌ ಪುಸ್ತಕದ ಪ್ರತಿ, ಅರ್ಜಿ ನಮೂನೆ-1ರಲ್ಲಿ ಮಾಹಿತಿ, ನಮೂನೆ-2ರಲ್ಲಿ ಸ್ವಯಂ ಘೋಷಣಾ ಪತ್ರ, ನಮೂನೆ 3ರಲ್ಲಿ ಕುಟುಂಬ ಸದಸ್ಯರ ನಿರಾಕ್ಷೇಪಣಾ ಪತ್ರಗಳನ್ನು ಸಲ್ಲಿಸಬೇಕು.

ಈ ಮೇಲಿನ ದಾಖಲೆಗಳನ್ನು ಜಿಲ್ಲಾ ಆರೋಗ್ಯ ಅಧಿಕಾರಿ ಅಥವಾ ತಾಲೂಕು ಆರೋಗ್ಯ ಅಧಿಕಾರಿಗಳಿಂದ ದೃಢೀಕರಿಸಿ ಸಲ್ಲಿಸಬೇಕು. ಹೆಚ್ಚಿನ ವಿವರಗಳಿಗೆ ತಾಲ್ಲೂಕು ಕಚೇರಿಯನ್ನು ಸಂಪರ್ಕಿಸುವಂತೆ ಜಿಲ್ಲಾಧಿಕಾರಿ ತಿಳಿಸಿದ್ದಾರೆ.

ಸೂಚನೆ: ಕೊರೋನಾ ಮಹಾಮಾರಿ ಎಲ್ಲೆಡೆ ಹರಡುತ್ತಿದೆ. ಹೀಗಿರುವಾಗ ಎಲ್ಲರೂ ತಪ್ಪದೇ ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ ಹಾಗೂ ಲಸಿಕೆ ಪಡೆಯಿರಿ ಎಂಬುವುದು ಏಷ್ಯಾನೆಟ್‌ ನ್ಯೂಸ್‌ ಕಳಕಳಿಯ ವಿನಂತಿ. ಒಗ್ಗಟ್ಟಿನಿಂದ ನಾವು ಈ ಕೊರೋನಾ ಸರಪಳಿ ಮುರಿಯೋಣ #ANCares #IndiaFightsCorona 

click me!