ರಾಜ್ಯದ ಹಲವೆಡೆ ಸಾಂಕ್ರಾಮಿಕ ರೋಗಗಳು ಹರಡುತ್ತಿದ್ದು, ಈ ಬಗ್ಗೆ ಜನ ಎಚ್ಚರಿಕೆ ವಹಿಸಬೇಕಾದ ಅವಶ್ಯಕತೆ ಇದೆ. ಶಿವಮೊಗ್ಗದ ಆನಂದಪುರದಲ್ಲಿ 8 ಡೆಂಘೀ ಪ್ರಕರಣಗಳು ಪತ್ತೆಯಾಗಿದೆ. ಈ ಹಿನ್ನೆಲೆಯಲ್ಲಿ ಫಾಗಿಂಗ್ ನಡೆಸಲಾಗಿದೆ.
ಶಿವಮೊಗ್ಗ(ಜು.23): ಆನಂದಪುರ ಸಮುದಾಯ ಆರೋಗ್ಯ ಕೇಂದ್ರದಲ್ಲಿ 10ಕ್ಕೂ ಅಧಿಕ ಡೆಂಘೀ ಜ್ವರ ಪ್ರಕರಣಗಳು ಪತ್ತೆಯಾಗಿದೆ. ಸಿದ್ದೇಶ್ವರ ಕಾಲೋನಿಯಲ್ಲಿ ಸುಮಾರು 8 ಪ್ರಕರಣಗಳು ಹಾಗೂ ಆನಂದಪುರ ಬಸವನ ಬೀದಿ ಮತ್ತು ರಂಗನಾಥ ಬೀದಿಯಲ್ಲಿ ತಲಾ ಒಂದೊಂದು ಪ್ರಕರಣಗಳು ಪತ್ತೆಯಾಗಿವೆ.
ಮುನ್ನೆಚ್ಚರಿಕೆ ಕ್ರಮವಾಗಿ ಸ್ಥಳೀಯ ಗ್ರಾಮಾಡಳಿತ ಮತ್ತು ಸ್ಥಳೀಯ ಸಮುದಾಯ ಆರೋಗ್ಯ ಕೇಂದ್ರ ಆರೋಗ್ಯದಿಂದ ಸೊಳ್ಳೆ ನಿಯಂತ್ರಣಕೆ ಸಿದ್ದೇಶ್ವರ ಕಾಲೋನಿಯಲ್ಲಿ ಫಾಗಿಂಗ್ ಮಾಡಲಾಯಿತು.
undefined
ಶಿವಮೊಗ್ಗದಲ್ಲಿ 59 ಡೆಂಘೀ, 14 ಚಿಕೂನ್ ಗುನ್ಯಾ ಪ್ರಕರಣ ಪತ್ತೆ
ಸಾರ್ವಜನಿಕರು ತಮ್ಮ ಮನೆ ಸುತ್ತಮುತ್ತ ಸ್ವಚ್ಛತೆ ಹಾಗೂ ತೆಂಗಿನ ಚಿಪ್ಪು ಬಾಟಲಿ, ಟೈರ್‌ಗಳಲ್ಲಿ ನೀರು ನಿಲ್ಲದ ಹಾಗೆ ನೋಡಿಕೊಳ್ಳಲು ತಿಳಿಸಲಾಗಿದೆ. ಈ ವೇಳೆಯಲ್ಲಿ ಆರೋಗ್ಯ ಇಲಾಖೆಯ ಅಂಕೋಲಾ, ಈಶ್ವರಯ್ಯ, ಸುರೇಶ್, ಗ್ರಾಮ ಪಂಚಾಯಿತಿ ಸಿಬ್ಬಂದಿ ಹಾಜರಿದ್ದರು.