* ಸಾಂಪ್ರದಾಯಿಕ ಮೀನುಗಾರಿಕೆ ನಡೆಸುತ್ತಿದ್ದ ಹತ್ತಕ್ಕೂ ಹೆಚ್ಚು ಮೀನುಗಾರರ ರಕ್ಷಣೆ
* ಉತ್ತರಕನ್ನಡ ಜಿಲ್ಲೆಯ ಭಟ್ಕಳ ಬಂದರು ಅಳಿವೆ ಪ್ರದೇಶದಲ್ಲಿ ರಕ್ಷಣೆ
* ಪಾತಿದೋಣಿ ಮೂಲಕ ಮೀನುಗಾರಿಕೆಗೆ ತೆರಳಿದ್ದ ಮೀನುಗಾರರು
* ಅಲೆಯ ರಭಸಕ್ಕೆ ವಾಪಾಸ್ ಬರಲಾಗದೆ ತೊಂದರೆ ಅನುಭವಿಸ್ತಿದ್ರು
ಕಾರವಾರ(ಜು. 18) ಮಳೆ ವಾತಾರರಣ ಮುಂದುವರಿದಿದ್ದು ಮೀನುಗಾರರಿಗೆ ಎಚ್ಚರಿಕೆ ನೀಡಲಾಗಿದೆ. ಸಾಂಪ್ರದಾಯಿಕ ಮೀನುಗಾರಿಕೆ ನಡೆಸುತ್ತಿದ್ದ ಹತ್ತಕ್ಕೂ ಹೆಚ್ಚು ಮೀನುಗಾರರ ರಕ್ಷಣೆ ಮಾಡಲಾಗಿದೆ.
ಉತ್ತರಕನ್ನಡ ಜಿಲ್ಲೆಯ ಭಟ್ಕಳ ಬಂದರು ಅಳಿವೆ ಪ್ರದೇಶದಲ್ಲಿ ಮೀನುಗಾರರ ರಕ್ಷಣೆ ಮಾಡಲಾಗಿದೆ ಪಾತಿದೋಣಿ ಮೂಲಕ ಮೀನುಗಾರಿಕೆಗೆ ತೆರಳಿದ್ದರು. ಅಲೆಯ ರಭಸಕ್ಕೆ ವಾಪಾಸ್ ಬರಲಾಗದೆ ತೊಂದರೆ ಅನುಭವಿಸುತ್ತಿದ್ದರು.
ಮಲೆನಾಡಿನಲ್ಲಿ ಇನ್ನೂ ನಾಲ್ಕು ದಿನ ಮಳೆ
ಹಲವು ಪಾತಿ ದೋಣಿಗಳು ಅಲೆಯ ಹೊಡೆತಕ್ಕೆ ಪಲ್ಟಿಯಾಗಿದ್ದವು. ಆದರೆ, ಗಿಲ್ನೆಟ್ ದೋಣಿ ಮೂಲಕ ಅಪಾಯಕ್ಕೆ ಸಿಲುಕಿದ ಮೀನುಗಾರರ ರಕ್ಷಣೆ ಮಾಡಲಾಗಿದೆ. ಮುಂಡಳ್ಳಿ, ಬೆಳ್ನಿ, ಬಂದರು ಮೂಲದ ಮೀನುಗಾರರ ರಕ್ಷಣೆ ಮಾಡಲಾಗಿದೆ.