ಲೋಕಸಭಾ ಚುನಾವಣೆ ನೋಡಲು ಬೆಳಗಾವಿಗೆ ಬಂದ 5 ದೇಶದ 10 ಜನ

By Kannadaprabha NewsFirst Published May 7, 2024, 12:03 PM IST
Highlights

ಕಾಂಬೋಡಿಯಾ, ನೇಪಾಳ, ಮೊಲೊವಾ, ಸಿಷೆಲ್ಸ್ ಹಾಗೂ ಟ್ಯುನಿಷಿಯಾ ದೇಶಗಳ ಚುನಾವಣಾ ಆಯೋಗಗಳ 10 ಸದಸ್ಯರ ತಂಡವನ್ನು ಬರಮಾಡಿಕೊಂಡು, ಜಿಲ್ಲೆಯಲ್ಲಿ ಕೈಗೊಳ್ಳಲಾಗಿರುವ ಚುನಾವಣಾ ಸಿದ್ಧತೆಗಳ ಕುರಿತು ಮಾಹಿತಿ ನೀಡಿದ ಜಿಲ್ಲಾ ಚುನಾವಣಾಧಿಕಾರಿ ನಿತೇಶ್ ಪಾಟೀಲ 

ಬೆಳಗಾವಿ(ಮೇ.07):  ವಿಶ್ವದ ಬಹುದೊಡ್ಡ ಪ್ರಜಾಪ್ರಭುತ್ವ ರಾಷ್ಟ್ರವಾಗಿರುವ ಭಾರತದಲ್ಲಿ ನಡೆಯುತ್ತಿರುವ ಲೋಕಸಭಾ ಚುನಾವಣೆಯ ಸಿದ್ಧತೆ ಹಾಗೂ ವಿವಿಧ ಹಂತದ ಚುನಾವಣಾ ಪ್ರಕ್ರಿಯೆಗಳನ್ನು ವೀಕ್ಷಿಸಲು ಆಗಮಿಸಿರುವ ಐದು ರಾಷ್ಟ್ರಗಳ ಚುನಾವಣಾ ಆಯೋಗಗಳ ಪ್ರತಿನಿಧಿಗಳ ಅಂತಾರಾಷ್ಟ್ರೀಯ ತಂಡವು ಬೆಳಗಾವಿ ಜಿಲ್ಲೆಗೆ ಸೋಮವಾರ ಭೇಟಿ ನೀಡಿತು.

ಜಿಲ್ಲೆಗೆ ಆಗಮಿಸಿದ ಕಾಂಬೋಡಿಯಾ, ನೇಪಾಳ, ಮೊಲೊವಾ, ಸಿಷೆಲ್ಸ್ ಹಾಗೂ ಟ್ಯುನಿಷಿಯಾ ದೇಶಗಳ ಚುನಾವಣಾ ಆಯೋಗಗಳ 10 ಸದಸ್ಯರ ತಂಡವನ್ನು ಜಿಲ್ಲಾ ಚುನಾವಣಾಧಿಕಾರಿ ನಿತೇಶ್ ಪಾಟೀಲ ಬರಮಾಡಿಕೊಂಡು, ಜಿಲ್ಲೆಯಲ್ಲಿ ಕೈಗೊಳ್ಳಲಾಗಿರುವ ಚುನಾವಣಾ ಸಿದ್ಧತೆಗಳ ಕುರಿತು ಮಾಹಿತಿ ನೀಡಿದರು.

ಶಿವಮೊಗ್ಗ ಲೋಕಸಭಾ ಚುನಾವಣೆ: ಪತ್ನಿ ಗೆಲುವಿಗಾಗಿ ಶಿವರಾಜ್ ಕುಮಾರ್ ಟೆಂಪಲ್ ರನ್..!

ಮಸ್ಟರಿಂಗ್ ಕೇಂದ್ರಕ್ಕೆ ಭೇಟಿ: 

ಇದಾದ ಬಳಿಕ ಬೆಳಗಾವಿ ಗ್ರಾಮೀಣ ವಿಧಾನಸಭಾ ಕ್ಷೇತ್ರಗಳ ಮಸ್ಟರಿಂಗ್ ಕೇಂದ್ರಕ್ಕೆ ಭೇಟಿ ನೀಡಿದ ನಿಯೋಗದ ಸದಸ್ಯರು, ಮಸ್ಟರಿಂಗ್ ಕುರಿತು ಮಾಹಿತಿ ಪಡೆದುಕೊಂಡರು.

click me!