ಅಕ್ಕಿ ಧೋಖಾ: ಪಡಿತರ ಅಂಗಡಿ ಬಂದ್‌

By Kannadaprabha News  |  First Published Feb 22, 2024, 12:00 AM IST

ಪಡಿತರದಾರರಿಗೆ ಸರ್ಕಾರ ನಿಗದಿ ಮಾಡಿದ್ದಕ್ಕಿಂತ ಕಡಿಮೆ ಅಕ್ಕಿ ವಿತರಿಸಿದ 10 ನ್ಯಾಯಬೆಲೆ ಅಂಗಡಿಗಳ ವಿರುದ್ಧ ಕ್ರಮ ಕೈಗೊಂಡು ಅಮಾನತು ಮಾಡಲಾಗಿದೆ. ರಾಜ್ಯದ ಯಾವುದೇ ಕಡೆಗಳಲ್ಲಿ ಇಂತಹ ಪ್ರಕರಣಗಳು ದಾಖಲಾದರೆ, ನ್ಯಾಯಬೆಲೆ ಅಂಗಡಿಗಳ ವಿರುದ್ಧ ಕಾನೂನು ರೀತಿಯಲ್ಲಿ ಕ್ರಮ ಕೈಗೊಳ್ಳುತ್ತೇವೆ ಎಂದ ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಕೆ.ಎಚ್‌.ಮುನಿಯಪ್ಪ 


ವಿಧಾನ ಪರಿಷತ್ತು(ಫೆ.22): ಸರ್ಕಾರ ನಿಗದಿಪಡಿಸಿದ ಪ್ರಮಾಣಕ್ಕಿಂತ ಕಡಿಮೆ ಪ್ರಮಾಣದ ಆಹಾರ ಧಾನ್ಯ ವಿತರಿಸುತ್ತಿದ್ದ ರಾಯಚೂರು ಜಿಲ್ಲೆಯ 10 ನ್ಯಾಯಬೆಲೆ ಅಂಗಡಿಗಳ ಪರವಾನಗಿ ಅಮಾನತುಗೊಳಿಸಲಾಗಿದೆ. ಇಂತಹ ಪ್ರಕರಣಗಳು ಕಂಡುಬಂದಲ್ಲಿ ಕಾನೂನು ರೀತ್ಯ ಕಠಿಣ ಕ್ರಮ ಕೈಗೊಳ್ಳುವುದಾಗಿ ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಕೆ.ಎಚ್‌.ಮುನಿಯಪ್ಪ ಹೇಳಿದರು.

ಸದಸ್ಯ ಶರಣಗೌಡ ಬಯ್ಯಾಪುರ ಅವರ ಪ್ರಶ್ನೆಗೆ ಸಚಿವರು ಉತ್ತರಿಸಿದರು. ಪಡಿತರದಾರರಿಗೆ ಸರ್ಕಾರ ನಿಗದಿ ಮಾಡಿದ್ದಕ್ಕಿಂತ ಕಡಿಮೆ ಅಕ್ಕಿ ವಿತರಿಸಿದ 10 ನ್ಯಾಯಬೆಲೆ ಅಂಗಡಿಗಳ ವಿರುದ್ಧ ಕ್ರಮ ಕೈಗೊಂಡು ಅಮಾನತು ಮಾಡಲಾಗಿದೆ. ರಾಜ್ಯದ ಯಾವುದೇ ಕಡೆಗಳಲ್ಲಿ ಇಂತಹ ಪ್ರಕರಣಗಳು ದಾಖಲಾದರೆ, ನ್ಯಾಯಬೆಲೆ ಅಂಗಡಿಗಳ ವಿರುದ್ಧ ಕಾನೂನು ರೀತಿಯಲ್ಲಿ ಕ್ರಮ ಕೈಗೊಳ್ಳುತ್ತೇವೆ ಎಂದರು.

Latest Videos

undefined

ದೇವದುರ್ಗ: ಕುಲ್ಲಕ ಕಾರಣಕ್ಕೆ ಜಗಳ, ಮನನೊಂದ ಮಹಿಳೆ ಆತ್ಮಹತ್ಯೆ

ಲಿಂಗಸಗೂರು ಪಟ್ಟಣದ ಗೋದಾಮಿನಲ್ಲಿ 50 ಕೆ.ಜಿ. ಚೀಲದಲ್ಲಿ 3ರಿಂದ 5 ಕೆ.ಜಿ. ಅಕ್ಕಿ ಕಡಿತಗೊಳಿಸಲಾಗಿದ್ದು ವ್ಯವಸ್ಥಾಪಕರು ಹಾಗೂ ಆಹಾರ ನಿರೀಕ್ಷಕರು 4 ಚೀಲ ಕಡಿತಗೊಳಿಸಿದ್ದಾರೆ ಎನ್ನುವ ಕುರಿತು ಬಂದಿರುವ ದೂರಿನಲ್ಲಿ ಸೂಕ್ತ ದಾಖಲೆಗಳು ಇಲ್ಲ. ಅಲ್ಲದೇ ಸಗಟು ಮಳಿಗೆಯಲ್ಲಿನ ದಾಸ್ತಾನಿನಲ್ಲಿ ಯಾವುದೇ ವ್ಯತ್ಯಾಸವಾಗಿಲ್ಲ. ಹಾಗೆಯೇ ಎಲ್ಲ ನ್ಯಾಯಬೆಲೆ ಅಂಗಡಿಗಳಿಗೆ ಯಾವುದೇ ರೀತಿಯ ಅಕ್ಕಿಯನ್ನು ಕಡಿತಗೊಳಿಸಿಲ್ಲ ಎಂದು ತಿಳಿಸಿದರು.

click me!