ಒಟ್ಟು 10 ಗ್ರಾಮಗಳ ವ್ಯಾಪ್ತಿಯ ಪ್ರದೇಶವನ್ನು ಗ್ರೇಟರ್ ಬೆಂಗಳೂರು ಸಮಗ್ರ ಉಪನಗರ ಯೋಜನೆ ಎಂದು ಅನುಷ್ಠಾನಗೊಳಿಸಲು ಈ ಸಚಿವ ಸಂಪುಟ ಸಭೆಯಲ್ಲಿ ಒಪ್ಪಿಗೆ ಸಿಗುವ ಸಾಧ್ಯತೆಯಿದೆ.
ಬೆಂಗಳೂರು(ಜ.30): ಬಿಡದಿಯ 10 ಗ್ರಾಮಗಳನ್ನು ಗ್ರೇಟರ್ ಬೆಂಗಳೂರು ಸಮಗ್ರ ಉಪನಗರವನ್ನಾಗಿ ಅನುಷ್ಠಾನ ಗೊಳಿಸಲು ಪ್ರಸ್ತಾವನೆ ಮಂಡನೆಯಾಗಲಿದೆ.
ಗ್ರೇಟರ್ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದಿಂದ ರಾಮನಗರ ಜಿಲ್ಲೆ, ರಾಮನಗರ ತಾಲೂಕು, ಬಿಡದಿ ಹೋಬಳಿಯ ಬೈರಮಂಗಲ ಬನ್ನಿಗೆರೆ, ಹೊಸೂರು, ಕೆ.ಜಿ.ಗೊಲ್ಲರಪಾಳ್ಯ, ಕಂಚುಗಾರನಹಳ್ಳಿ, ಅರಳಾಳುಸಂದ್ರ, ಕೆಂಪಯ್ಯನಪಾಳ್ಯ, ಕಂಚುಗಾರನಹಳ್ಳಿಕಾವಲು, ಮಂಡಲಹಳ್ಳಿ ಹಾಗೂ ಹಾರೋಹಳ್ಳಿ ಹೋಬಳಿಯ ವಡೇರಹಳ್ಳಿ ಭಾಗಶಃ ಗ್ರಾಮ ಸೇರಿ ಒಟ್ಟು 10 ಗ್ರಾಮಗಳ ವ್ಯಾಪ್ತಿಯ ಪ್ರದೇಶವನ್ನು ಗ್ರೇಟರ್ ಬೆಂಗಳೂರು ಸಮಗ್ರ ಉಪನಗರ ಯೋಜನೆ ಎಂದು ಅನುಷ್ಠಾನಗೊಳಿಸಲು ಈ ಸಚಿವ ಸಂಪುಟ ಸಭೆಯಲ್ಲಿ ಒಪ್ಪಿಗೆ ಸಿಗುವ ಸಾಧ್ಯತೆಯಿದೆ.
ತುಮಕೂರಿನಲ್ಲಿ ವಿಮಾನ ನಿಲ್ದಾಣ ಮಾಡಿದರೆ ಅನುಕೂಲ: ಗೃಹ ಸಚಿವ ಪರಮೇಶ್ವರ
ಕೆಸಿ, ಎಚ್‌ಎನ್ ವ್ಯಾಲಿ ಬಳಸಿ ಕೆರೆ ತುಂಬಿಸಿ
ಬೆಂಗಳೂರು: ಕೆಸಿ ವ್ಯಾಲಿ, ಎಚ್‌ಎನ್ ವ್ಯಾಲಿ ಯೋಜನೆಗಳಡಿ ಹೊಸಕೋಟೆ, ಆನೇಕಲ್ ತಾಲೂಕು ಸೇರಿ ಸಣ್ಣ ನೀರಾವರಿ ಇಲಾಖೆಕೆರೆಗಳನ್ನು ತುಂಬಿಸಲು ಅಗತ್ಯವಿರುವ ಪ್ರಮಾಣದ ಸಂಸ್ಕರಿಸಿದ ತ್ಯಾಜ್ಯ ನೀರನ್ನು ಒದಗಿಸಲು ಬೆಂಗಳೂರು ಜಲಮಂಡಳಿ ಕ್ರಮ ಕೈಗೊಳ್ಳ ಬೇಕು ಎಂದು ಮುಖ್ಯಮಂತ್ರಿ ಸಿದ್ದರಾ ಮಯ್ಯ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ.
ರಾಮನಗರ ಹೆಸರು ಬದಲಾವಣೆಯಿಂದ ಅಭಿವೃದ್ಧಿಯಾಗಲಿದೆ: ಶಾಸಕ ಇಕ್ಬಾಲ್ ಹುಸೇನ್
ಗೃಹ ಕಚೇರಿ ಕೃಷ್ಣಾದಲ್ಲಿ ಬುಧವಾರ ಸಣ್ಣ ನೀರಾವರಿ ಇಲಾಖೆಯ ಪ್ರಗತಿ ಪರೀಶಿಲನಾ ಸಭೆ ನಡೆಸಿ ಮಾತನಾಡಿ, ಇದಕ್ಕಾಗಿ ಅಗತ್ಯವಿ ರುವ ಹೆಚ್ಚುವರಿ ತ್ಯಾಜ್ಯ ನೀರು ಶುದ್ದೀಕರಣ ಘಟಕ (ಎಸ್‌ಟಿಪಿ) ನಿರ್ಮಾಣಕ್ಕೆ ಜಲಮಂಡಳಿ ಕ್ರಮ ಕೈಗೊಳ್ಳ ಬೇಕು. ಇದಕ್ಕೆ ಅಗತ್ಯವಿರುವ ಅನುದಾನ ಬಿಡುಗಡೆ ಮಾಡುತ್ತೇವೆ ಎಂದು ಭರವಸೆ ನೀಡಿದರು. ಕೆ.ಸಿ ವ್ಯಾಲಿ 1 ನೇ ಹಂತದಲ್ಲಿಕ 1342 ಕೋಟಿ ವೆಚ್ಚದಲ್ಲಿ 145 ಕೆರೆಗಳನ್ನು ತುಂಬಿಸುವ ಯೋಜನೆ ಪೂರ್ಣಗೊಳಿಸಲಾಗಿದೆ. ಜಲ ಮಂಡಳಿ ನಿತ್ಯ 440 ದಶಲಕ್ಷ ಲೀಟರ್ (ಎಂಎಲ್‌ಡಿ) ಸಂಸ್ಕರಿಸಿದ ನೀರನ್ನು ಒದಗಿಸಬೇಕಾಗಿದ್ದು, ಪ್ರಸ್ತುತ 265 ಎಂಎಲ್‌ಡಿ ಒದಗಿಸುತ್ತಿದೆ.
ಕೆಸಿ ವ್ಯಾಲಿ 2ನೇ ಹಂತದಲ್ಲಿ ₹446 ಕೋಟಿ ವೆಚ್ಚದಲ್ಲಿ 272 ಕೆರೆಗಳನ್ನು ತುಂಬಿಸುವ ಕಾಮ ಗಾರಿ ಪ್ರಗತಿಯಲ್ಲಿದ್ದು, ಇದುವರೆಗೆ 32 ಕೆರೆ ಗಳನ್ನು ತುಂಬಿಸಲಾಗಿದೆ. ಪ್ರಸ್ತುತ ಒಟ್ಟು 1300 ಎಂಎಲ್ ಡಿ ನೀರು ಸಂಸ್ಕರಿಸುತ್ತಿದ್ದು, ಹೊಸದಾಗಿ 583 ಎಂಎಲ್‌ಡಿ ನೀರು ಸಂಸ್ಕರಿಸಲು ಪೂರಕ ವಾಗಿ ಹೊಸ ಎಸ್‌ಟಿಪಿ ನಿರ್ಮಿಸಲು ಒಪ್ಪಿಗೆ ನೀಡಿ ಎಂದು ಹಣಕಾಸು ಇಲಾಖೆ ಅಧಿಕಾರಿಗಳಿಗೆ ಸೂಚಿಸಿದರು.