ವೇಶ್ಯಾವಾಟಿಕೆ ಅಡ್ಡೆ ಮೇಲೆ ದಾಳಿ : 10 ಮಹಿಳೆಯರ ರಕ್ಷಣೆ

By Kannadaprabha News  |  First Published Dec 16, 2019, 10:19 AM IST

ವೇಶ್ಯಾವಾಟಿಕೆ ಅಡ್ಡೆ ಮೇಲೆ ಸಿಸಿಬಿ ಪೊಲೀಸರು ದಾಳಿ ಮಾಡಿ 10 ಮಂದಿ ಮಹಿಳೆಯರನ್ನು ರಕ್ಷಣೆ ಮಾಡಿದ್ದಾರೆ. 


ಬೆಂಗಳೂರು [ಡಿ.16]: ಬೆಂಗಳೂರಿನ ವೇಶ್ಯಾವಾಟಿಕೆ ಅಡ್ಡೆ ಮೇಲೆ ಸಿಸಿಬಿ ಪೊಲೀಸರು ದಾಳಿ ಮಾಡಿದ್ದಾರೆ.

ಬೆಂಗಳೂರಿನ ಜ್ಞಾನಭಾರತಿ ಠಾಣಾ ವ್ಯಾಪ್ತಿಯಲ್ಲಿ ಅಡ್ಡೆ ಮೇಲೆ ದಾಳಿ ಮಾಡಿದ ಸಿಸಿಬಿ ಪೊಲೀಸರು ಇಬ್ಬರು ಮಹಿಳೆಯರು ಸೇರಿ ನಾಲ್ವರನ್ನು ಬಂಧಿಸಿದ್ದಾರೆ. 

Tap to resize

Latest Videos

ಅಲ್ಲದೇ ವೇಶ್ಯಾವಾಟಿಕೆಯಲ್ಲಿ ತೊಟಗಿದ್ದ 10 ಮಹಿಳೆಯರನ್ನು ಪೊಲೀಸರು ರಕ್ಷಿಸಿ ಕರೆ ತಂದಿದ್ದಾರೆ.

ಸ್ವಂತ ಅಪಾರ್ಟ್‌ಮೆಂಟ್, ಖಾತೆಯಲ್ಲಿ ಲಕ್ಷ ಲಕ್ಷ ಹಣ : ವಿದ್ಯಾರ್ಥಿಗೆ ಇದೆಲ್ಲಾ ಬಂದಿದ್ದೆಲ್ಲಿಂದ...

ಮನೆಯಲ್ಲಿಯೇ ವೇಶ್ಯಾವಾಟಿಕೆ ದಂಧೆ ನಡೆಸುತ್ತಿದ್ದು, ಖಚಿತ ಮಾಹಿತಿ ಆಧರಿಸಿ ಪೊಲೀಸರು ದಾಳಿ ನಡೆಸಿದ್ದಾರೆ. 

ಸದ್ಯ ಈ ಸಂಬಂಧ  ಜ್ಞಾನ ಭಾರತಿ ಠಾಣೆಯಲ್ಲಿ ಪ್ರಕರಣ ದಾಖಲಿಸಿ ತನಿಖೆ ನಡೆಸಲಾಗಿದೆ. 

click me!