ಎಸ್ಸಿ, ಎಸ್ಟಿಉಪಯೋಜನೆ ಶೇ.100ರಷ್ಟು ಜಾರಿಗೊಳಿಸಿ: ADC

By Kannadaprabha News  |  First Published Feb 11, 2023, 5:32 AM IST

ಪರಿಶಿಷ್ಟಜಾತಿ ಹಾಗೂ ಪರಿಶಿಷ್ಟಪಂಗಡ ಉಪಯೋಜನೆಯಡಿ ಸೌಲಭ್ಯಗಳನ್ನು ಸಮಪರ್ಕವಾಗಿ ಪ್ರತಿಶತ ನೂರರಷ್ಟುಅನುಷ್ಟಾನÜಗೊಳಿಸಿ ಫೆಬ್ರವರಿ ಮಾಸಾಂತ್ಯಕ್ಕೆ ವರದಿ ಸಲ್ಲಿಸಬೇಕು ಎಂದು ಅಪರ ಜಿಲ್ಲಾಧಿಕಾರಿ ಶಿವಾನಂದ ಬಿ. ಕರಾಳೆ ಅಧಿಕಾರಿಗಳಿಗೆ ಸೂಚನೆ ನೀಡಿದರು.


  ತುಮಕೂರು   :  ಪರಿಶಿಷ್ಟಜಾತಿ ಹಾಗೂ ಪರಿಶಿಷ್ಟಪಂಗಡ ಉಪಯೋಜನೆಯಡಿ ಸೌಲಭ್ಯಗಳನ್ನು ಸಮಪರ್ಕವಾಗಿ ಪ್ರತಿಶತ ನೂರರಷ್ಟುಅನುಷ್ಟಾನಗೊಳಿಸಿ ಫೆಬ್ರವರಿ ಮಾಸಾಂತ್ಯಕ್ಕೆ ವರದಿ ಸಲ್ಲಿಸಬೇಕು ಎಂದು ಅಪರ ಜಿಲ್ಲಾಧಿಕಾರಿ ಶಿವಾನಂದ ಬಿ. ಕರಾಳೆ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಜಿಲ್ಲಾಧಿಕಾರಿಗಳ ಕಚೇರಿಯ ಸಭಾಂಗಣದಲ್ಲಿ ನಡೆದ ಹಾಗೂ ಪರಿಶಿಷ್ಟ ಪಂಗಡದ ಉಪಯೋಜನೆ ಕಾಯ್ದೆ-2013 ಮತ್ತು 2017ರ ಅನುಷ್ಠಾನ ಅಧಿನಿಯಮಗಳಡಿ ಜನವರಿ-2023ರ ಮಾಹೆಯ ಅಂತ್ಯದವರೆಗೆ ವಿವಿಧ ಇಲಾಖೆಗಳು ಅನುಷ್ಟಾನಗೊಳಿಸಿರುವ ಕಾರ್ಯಕ್ರಮಗಳ ಕುರಿತ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.

Tap to resize

Latest Videos

ಪರಿಶಿಷ್ಟ ಜಾತಿ ಉಪಯೋಜನೆ ಹಾಗೂ ಗಿರಿಜನ ಉಪ ಯೋಜನೆಗಳಲ್ಲಿ ವಿವಿಧ ಇಲಾಖೆಗಳ ಪ್ರಗತಿ ವಿವರದ ಮಾಹಿತಿ ಪಡೆದ ಅವರು ಪ.ಜಾತಿ ಮತ್ತು ಪ.ಪಂಗಡಗಳ ಜನರ ಸಮಗ್ರ ಅಭಿವೃದ್ಧಿಗಾಗಿ ಸರ್ಕಾರ ಅನೇಕ ಯೋಜನೆಗಳನ್ನು ಹಾಗೂ ಕಾರ್ಯಕ್ರಮಗಳನ್ನು ಜಾರಿಗೆ ತಂದಿದೆ. ಬಾಕಿ ಇರುವ ಫಲಾನುಭವಿಗಳನ್ನು ಶೀಘ್ರ ಆಯ್ಕೆ ಮಾಡಿ, ಸೌಲಭ್ಯಗಳನ್ನು ಫಲಾನುಭವಿಗಳಿಗೆ ತಲುಪಿಸುವುದರೊಂದಿಗೆ ಮಂಜೂರಾಗಿರುವ ಅನುದಾನ ಶೇ. 100 ರಷ್ಟುಬಳಕೆ ಆಗಬೇಕು. ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ, ಆರೋಗ್ಯ ಇಲಾಖೆ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಅಭಿವೃದ್ಧಿ ಇಲಾಖೆ ಸೇರಿದಂತೆ ಮತ್ತಿತರ ಇಲಾಖೆಗಳ ಯೋಜನೆಗಳಲ್ಲಿ ಪ.ಜಾತಿ ಹಾಗೂ ಪ.ಪಂಗಡದ ಅರ್ಹರಿರುವ ಪ್ರತಿಯೊಬ್ಬರಿಗೂ ಯೋಜನೆಗಳ ಸೌಲಭ್ಯವನ್ನು ತಲುಪಿಸುವ ಕಾರ್ಯ ಮಾಡಬೇಕು.

ನಗರ ಸ್ಥಳೀಯ ಸಂಸ್ಥೆಗಳು, ಜಿಲ್ಲಾ ಪಂಚಾಯಿತಿ ಹಾಗೂ ತಾಲೂಕು ಪಂಚಾಯಿತಿ ವ್ಯಾಪ್ತಿಯಲ್ಲಿ ವಿವಿಧ ಯೋಜನೆಗಳಡಿ ಮಂಜೂರಾಗಿರುವ ಅನುದಾನಕ್ಕೆ ಸಂಬಂಧಿಸಿದಂತೆ ಆಯಾ ಸ್ಥಾಯಿ ಸಮಿತಿ ಮತ್ತು ಸಾಮಾನ್ಯ ಸಭೆಗಳಲ್ಲಿ ಕ್ರಿಯಾಯೋಜನೆಗಳಿಗೆ ಮಂಜೂರಾತಿ ಪಡೆದು, ನಿಗದಿತ ಅವಧಿಯೊಳಗೆ ಯೋಜನೆಗಳ ಅನುಷ್ಟಾನÜ ಮಾಡಿ ಫಲಾನುಭವಿಗಳಿಗೆ ಸೌಲಭ್ಯಗಳನ್ನು ಕಲ್ಪಿಸಬೇಕು. ವಿವಿಧ ಅಭಿವೃದ್ಧಿ ನಿಗಮಗಳಿಂದ ವಿತರಿಸಲಾಗುವ ಜಮೀನು, ಕೊಳವೆ ಬಾವಿ ಸೌಲಭ್ಯ, ಮೂಲ ಸೌಕರ್ಯ, ಉದ್ಯಮಶೀಲತಾ ತರಬೇತಿ, ಸ್ವಯಂ ಉದ್ಯೋಗ ಕಾರ್ಯಕ್ರಮಗಳು, ವಿವಿಧ ಪರಿಕರಗಳ ವಿತರಣೆ ಸೇರಿದಂತೆ ವಿವಿಧ ಸೌಲಭ್ಯಗಳನ್ನು ತ್ವರಿತವಾಗಿ ಕಲ್ಪಿಸುವಂತೆ ತಿಳಿಸಿದರು.

ಫೆಬ್ರವರಿ ಮಾಸಾಂತ್ಯಕ್ಕೆ ಸಭೆ: ಎಡಿಸಿ

ಸಂಬಂಧಿಸಿದ ಎಲ್ಲಾ ಇಲಾಖೆಗಳೂ ವಿಳಂಬ ಮಾಡದೇ ಜಾಗ್ರತೆವಹಿಸಿ, ಕಾರ್ಯಕ್ರಮ ಜಾರಿ ಮಾಡಿ ಜನರಿಗೆ ಸವಲತ್ತುಗಳನ್ನು ಕಲ್ಪಿಸಬೇಕು. ಈ ಸಂಬಂಧ ಫೆಬ್ರವರಿ 2023ರ ಮಾಸಾಂತ್ಯಕ್ಕೆ ಶೇಕಡವಾರು 50 ಕ್ಕಿಂತ ಕಡಿಮೆ ಪ್ರಗತಿ ಸಾಧಿಸುವ ಇಲಾಖೆಗಳ ಪ್ರಗತಿ ಪರಿಶೀಲನಾ ಸಭೆಯನ್ನು ಕರೆಯಲಾಗುವುದು, ಎಲ್ಲಾ ಇಲಾಖೆಗಳ ಯೋಜನಾ ಕಾರ್ಯಕ್ರಮಗಳ ಸೌಲಭ್ಯಗಳು ಸಮಾಜದ ಕಟ್ಟಕಡೆಯ ವ್ಯಕ್ತಿಗೂ ತಲುಪಿಸಬೇಕು. ಯಾವುದೇ ರೀತಿಯ ಸಮಸ್ಯೆಗಳು ಉದ್ಭವಿಸಿದಾಗ ಅವುಗಳನ್ನು ಜಿಲ್ಲಾಡಳಿತದ ಗಮನಕ್ಕೆ ತಂದು ಶೀಘ್ರದಲ್ಲಿಯೇ ಬಗೆಹರಿಸಿ ಕಾರ್ಯಕ್ರಮಗಳನ್ನು ಅನುಷ್ಟಾನಗೊಳಿಸಬೇಕು. ಮಂಜೂರಾಗಿರುವ ಮೀಸಲು ಅನುದಾನವನ್ನು ಸಮರ್ಪಕವಾಗಿ ಬಳಸದೇ ವಾಪಸ್‌ ಹೋದಲ್ಲಿ, ಸಂಬಂಧಪಟ್ಟಇಲಾಖೆಗಳ ಅಧಿಕಾರಿಗಳನ್ನೇ ಹೊಣೆಗಾರರನ್ನಾಗಿ ಮಾಡಲಾಗುವುದು ಎಂದು ಅಪರ ಜಿಲ್ಲಾಧಿಕಾರಿಯವರು ಕಟ್ಟುನಿಟ್ಟಿನ ನಿರ್ದೇಶನ ನೀಡಿದರು.

ಹುದ್ದೆ ತಪ್ಪಿಸಲಾಗದು

 ಬೆಂಗಳೂರು  : ಕರ್ನಾಟಕ ಲೋಕಸೇವಾ ಆಯೋಗದ (ಕೆಪಿಎಸ್‌ಸಿ) ನೇಮಕಾತಿ ಪ್ರಕ್ರಿಯೆ ವೇಳೆ ಆನ್‌ಲೈನ್‌ ಮೂಲಕ ಅರ್ಜಿ ಭರ್ತಿ ಮಾಡಿದಾಗ ಉಂಟಾಗಿದ್ದ ಲೋಪದಿಂದ ಸರ್ಕಾರಿ ಉದ್ಯೋಗ ಕಳೆದುಕೊಳ್ಳಲಿದ್ದ ಅಭ್ಯರ್ಥಿ ನೆರವಿಗೆ ಹೈಕೋರ್ಟ್‌ ಬಂದಿದೆ.

ಎನ್‌. ಹೇಮಂತ್‌ ಕುಮಾರ್‌ ಎಂಬ ಅಭ್ಯರ್ಥಿ ಕಿರಿಯ ಸಹಾಯಕ/ದ್ವಿತೀಯ ದರ್ಜೆ ಸಹಾಯಕ ಹುದ್ದೆಗೆ ಅರ್ಜಿ ತುಂಬುವಾಗ ಪರಿಶಿಷ್ಟ ಜಾತಿ ಬದಲಿಗೆ ಪರಿಶಿಷ್ಟ ಪಂಗಡ ಎಂದು ಉಲ್ಲೇಖಿಸಿದ್ದರಿಂದ ಹುದ್ದೆ ಕೈ ತಪ್ಪುವ ಭೀತಿಯಲ್ಲಿದ್ದರು. ಆದರೆ, ಇದೀಗ ಹೈಕೋರ್ಟ್‌, ಅರ್ಜಿದಾರನ ಜಾತಿ ಪ್ರವರ್ಗವನ್ನು ಪರಿಶಿಷ್ಟ ಪಂಗಡದ ಜಾತಿಗೆ ಬದಲಾಗಿ ಪರಿಶಿಷ್ಟ ಜಾತಿಯಾಗಿ ತಿದ್ದುಪಡಿ ಮಾಡಿ ಹುದ್ದೆಯ ಆಯ್ಕೆಗೆ ಹೇಮಂತ್‌ ಕುಮಾರ್‌ ಅವರನ್ನು ಪರಿಗಣಿಸುವಂತೆ ಕೆಪಿಎಸ್‌ಸಿಗೆ ಆದೇಶಿಸಿದೆ.

click me!