ಕಿಸಾನ್‌ ಸಮ್ಮಾನ್‌ ಯೋಜನೆ :ರೈತರಿಗೆ 1000 ಕೋಟಿ ರು. ಬಿಡುಗಡೆ

Suvarna News   | Asianet News
Published : Aug 17, 2020, 12:54 PM IST
ಕಿಸಾನ್‌ ಸಮ್ಮಾನ್‌ ಯೋಜನೆ :ರೈತರಿಗೆ 1000 ಕೋಟಿ ರು. ಬಿಡುಗಡೆ

ಸಾರಾಂಶ

ರೈತರಿಗ ಭರ್ಜರಿ ಕೊಡುಗೆ ನೀಡಲಾಗುತ್ತಿದೆ. ಕಿಸಾನ್ ಸಮ್ಮಾನ್ ಯೋಜನೆ ಅಡಿಯಲ್ಲಿ ಸಾವಿರಾರು ಕೋಟಿ ರು. ಬಿಡುಗಡೆ ಮಾಡಲಾಗಿದೆ.

ಬೆಂಗಳೂರು (ಆ.17) : ಪ್ರಧಾನ ಮಂತ್ರಿ ಕಿಸಾನ್‌ ಸಮ್ಮಾನ್‌ ಯೋಜನೆಯಡಿ ಒಂದು ಸಾವಿರ ಕೋಟಿ ರು.ಗಳನ್ನು 50 ಲಕ್ಷ ರೈತರಿಗೆ ಬಿಡುಗಡೆ ಮಾಡಲಾಗಿದೆ. ಶನಿವಾರದಿಂದ ರೈತರ ಖಾತೆಗೆ ನೇರವಾಗಿ ಹಣ ಜಮೆಯಾಗುತ್ತಿದೆ ಎಂದು ಕೃಷಿ ಸಚಿವ ಬಿ.ಸಿ.ಪಾಟೀಲ್ ಸ್ಪಷ್ಟಪಡಿಸಿದ್ದಾರೆ.

ಫೇಸ್‌ಬುಕ್‌ ಲೈವ್‌ನಲ್ಲಿ ರಾಜ್ಯದ ರೈತ ಸಮುದಾಯವನ್ನು ಉದ್ದೇಶಿಸಿ ಮಾತನಾಡಿದ ಸಚಿವರು, ‘ರೈತರು ತಮ್ಮ ಖಾತೆಯನ್ನು ಪರಿಶೀಲಿಸಬೇಕು. 2019-20ನೇ ಸಾಲಿನ ಬೆಳೆ ವಿಮೆಯನ್ನು ಮಂಗಳವಾರದಿಂದ ರೈತರ ಖಾತೆಗೆ ನೇರವಾಗಿ ಜಮೆ ಮಾಡಲಾಗುತ್ತಿದೆ. ವಿಮೆಗಾಗಿ ರೈತರು ಯಾವುದೇ ಕಾರಣಕ್ಕೂ ಆತಂಕಕ್ಕೊಳಗಾಗುವುದಾಗಲೀ ಚಿಂತಿಸುವ ಅವಶ್ಯಕತೆಯಿಲ್ಲ. ಸರ್ಕಾರ ಮತ್ತು ಇಲಾಖೆ ಎಂದಿಗೂ ರೈತರೊಂದಿಗೆ ಸದಾ ಬೆನ್ನೆಲುಬಾಗಿ ನಿಲ್ಲಲಿದೆ’ ಎಂದು ಹೇಳಿದರು.

ರೈತರಿಗೆ ಸಂತಸದ ಸುದ್ದಿ ನೀಡಿದ ಕೃಷಿ ಸಚಿವ ಬಿ.ಸಿ. ಪಾಟೀಲ್.

‘ರಾಜ್ಯದಲ್ಲಿ ಯೂರಿಯಾ ಗೊಬ್ಬರಕ್ಕೆ ಯಾವುದೇ ಕೊರತೆಯಿಲ್ಲ. ಕಳೆದ ಸಾಲಿಗಿಂತ ಈ ವರ್ಷ ಶೇ.25ರಷ್ಟುಹೆಚ್ಚಿನದಾಗಿ ಬಿತ್ತನೆಯಾಗಿದೆ. ಈ ವರ್ಷ 65 ಸಾವಿರ ಮೆಟ್ರಿಕ್‌ ಟನ್‌ ಯೂರಿಯಾ ಹೆಚ್ಚಿನದಾಗಿ ಪೂರೈಕೆಯಾಗುತ್ತಿದ್ದು, ಈ ವಾರ 37 ಸಾವಿರ ಟನ್‌ ಯೂರಿಯಾ ಸರಬರಾಜು ಆಗಲಿದೆ. ಯೂರಿಯಾವನ್ನು ರೈತರು ಭೂಮಿಗೆ ಎಷ್ಟುಅಗತ್ಯವೋ ಅಷ್ಟುಪ್ರಮಾಣದಲ್ಲಿ ಮಾತ್ರ ಬಳಸಬೇಕು. ಯಾವುದೇ ರಾಸಾಯನಿಕ ಔಷಧಿಯಾಗಲೀ ರಸಗೊಬ್ಬರವನ್ನಾಗಲೀ ಅಗತ್ಯಕ್ಕಿಂತ ಹೆಚ್ಚು ಬಳಸಬಾರದು. ಅಗತ್ಯಕ್ಕಿಂತ ಹೆಚ್ಚಿನ ಪ್ರಮಾಣದಲ್ಲಿ ಯೂರಿಯಾ ಬಳಸಿದಲ್ಲಿ ಭೂಮಿಯ ಫಲವತ್ತತೆ ಕ್ಷೀಣಿಸುವ ಸಾಧ್ಯತೆಯೂ ಇದೆ. ಹೀಗಾಗಿ ರೋಗಕ್ಕೆ ಎಷ್ಟುಮದ್ದಿನ ಅಗತ್ಯತೆ ಇದೆಯೋ ಅಷ್ಟನ್ನು ಮಾತ್ರ ಬಳಸಅಬೇಕು’ ಎಂದು ಸಚಿವರು ರೈತರಿಗೆ ಕಿವಿ ಮಾತು ಹೇಳಿದರು.

ಕಿಸಾನ್ ಸಮ್ಮಾನ್ ಯೋಜನೆ: 1 ಸಾವಿರ ಕೋಟಿ ರೂ ರಿಲೀಸ್, ಚೆಕ್ ಮಾಡಿಕೊಳ್ಳುವಂತೆ ರೈತರಿಗೆ ಮನವಿ...

‘ಇಲಾಖೆಯ ವೃಂದ ಮತ್ತು ನೇಮಕಾತಿ ಪ್ರಕ್ರಿಯೆಗೆ ನಿಯಮಗಳ ಕರಡು ಪ್ರಕ್ರಿಯೆ ಅಂತಿಮ ಹಂತದಲ್ಲಿದ್ದು, ಆದಷ್ಟುಬೇಗ ನೇಮಕಾತಿ ಮಾಡಿಕೊಳ್ಳಲಾಗುವುದು’ ಎಂದು ಅವರು ಇದೇ ಸಂದರ್ಭದಲ್ಲಿ ತಿಳಿಸಿದರು.

PREV
click me!

Recommended Stories

ದ್ವೇಷ ಭಾಷಣ ಪ್ರಕರಣ; ಆರ್‌ಎಸ್‌ಎಸ್ ಮುಖಂಡ ಕಲ್ಲಡ್ಕ ಪ್ರಭಾಕರ ಭಟ್‌ಗೆ ನಿರೀಕ್ಷಣಾ ಜಾಮೀನು!
Uttara Kannada: ಆಸ್ಪತ್ರೆಗೆ ಹೋಗಿದ್ದ ಗರ್ಭಿಣಿ ಹುಟ್ಟುಹಬ್ಬದಂದೇ ಸಾವು; ಹೊಟ್ಟೆಯಲ್ಲೇ ಅಸುನೀಗದ ಮಗು!