
ಬೆಂಗಳೂರು (ಜು.24): ನಗರದಲ್ಲಿ ಶನಿವಾರ 1,154 ಕೊರೋನಾ ಪ್ರಕರಣ ಪತ್ತೆಯಾಗಿದ್ದು, ಪಾಸಿಟಿವಿಟಿ ದರ ಶೇ.6.57ಕ್ಕೆ ಏರಿಕೆಯಾಗಿದೆ. 979 ಮಂದಿ ಗುಣಮುಖರಾಗಿದ್ದಾರೆ. ಸೋಂಕಿನಿಂದ ಮೃತಪಟ್ಟ ವರದಿಯಾಗಿಲ್ಲ. ನಗರದಲ್ಲಿ ಸದ್ಯ 7530 ಸಕ್ರಿಯ ಸೋಂಕು ಪ್ರಕರಣಗಳಿದ್ದು, ಈ ಪೈಕಿ 39 ಮಂದಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. 9 ಮಂದಿ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಉಳಿದವರು ಮನೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. 22,075 ಮಂದಿ ಕೋವಿಡ್ ವಿರುದ್ಧ ಲಸಿಕೆ ಪಡೆದುಕೊಂಡಿದ್ದಾರೆ.
764 ಮಂದಿ ಮೊದಲ ಡೋಸ್, 5499 ಮಂದಿ ಎರಡನೇ ಡೋಸ್ ಮತ್ತು 15,812 ಮಂದಿ ಮೂರನೇ ಡೋಸ್ ಲಸಿಕೆ ಪಡೆದಿದ್ದಾರೆ. ನಗರದಲ್ಲಿ 17,267 ಮಂದಿಗೆ ಕೊರೋನಾ ಸೋಂಕು ಪರೀಕ್ಷೆ ನಡೆಸಲಾಗಿದ್ದು, ಈ ಪೈಕಿ 14,022 ಆರ್‌ಟಿಪಿಸಿಆರ್ ಹಾಗೂ 3,245 ಮಂದಿಗೆ ರಾರಯಪಿಡ್ ಆ್ಯಂಟಿಜನ್ ಪರೀಕ್ಷೆ ನಡೆಸಲಾಗಿದೆ. ಶನಿವಾರ ನಗರದಲ್ಲಿ ಹೊಸದಾಗಿ ಕಂಟೈನ್ಮೆಂಟ್ ಪ್ರದೇಶ ಸೃಷ್ಟಿಯಾಗಿಲ್ಲ. ನಗರದಲ್ಲಿ ಒಟ್ಟು 22 ಸಕ್ರಿಯ ಕಂಟೈನ್ಮೆಂಟ್ ಪ್ರದೇಶಗಳಿವೆ ಎಂದು ಬಿಬಿಎಂಪಿ ಮಾಹಿತಿ ನೀಡಿದೆ.
Corona Crisis: ಐದು ತಿಂಗಳ ಬಳಿಕ ಕರ್ನಾಟಕದ ಎಲ್ಲ ಜಿಲ್ಲೆಗಳಲ್ಲೂ ಕೋವಿಡ್!
3ನೇ ಡೋಸ್ ಪಡೆದಿದ್ದು ಬರೀ 15% ಜನ: ರಾಜ್ಯದಲ್ಲಿ ಕೊರೋನಾ ಲಸಿಕೆಯ ಮುನ್ನೆಚ್ಚರಿಕಾ (ಮೂರನೇ) ಡೋಸ್‌ಗೆ ಅರ್ಹತೆ ಪಡೆದವರ ಪೈಕಿ ಶೇ.15ರಷ್ಟು ಮಂದಿ ಮಾತ್ರವೇ ಲಸಿಕೆ ಪಡೆದಿದ್ದು, ಬರೋಬ್ಬರಿ 1.3 ಕೋಟಿ ಮಂದಿ (ಶೇ.85 ರಷ್ಟು) ದೂರ ಉಳಿದಿದ್ದಾರೆ! ಉಚಿತವಾಗಿ ಮೂರನೇ ಡೋಸ್ ನೀಡಿದರೂ ಶೇ.30ರಷ್ಟು ಆರೋಗ್ಯ ಕಾರ್ಯಕರ್ತರು, ಶೇ.40ರಷ್ಟು ಮುಂಚೂಣಿ ಕಾರ್ಯಕರ್ತರು ಲಸಿಕೆ ಪಡೆಯಲು ಹಿಂದೇಟು ಹಾಕುತ್ತಿದ್ದಾರೆ. ಸದ್ಯ ರಾಜ್ಯದಲ್ಲಿ ಹೊಸ ಪ್ರಕರಣಗಳು ಏರಿಕೆಯಾಗುತ್ತಿದ್ದು, ಒಮಿಕ್ರೋನ್ ರೂಪಾಂತರಿಯ ಉಪತಳಿಗಳು ಪತ್ತೆಯಾಗಿವೆ. ಈ ನಡುವೆ ಮುನ್ನೆಚ್ಚರಿಕಾ ಡೋಸ್ ಅಭಿಯಾನ ಮಂಕಾಗಿರುವುದು ಆತಂಕ ಮೂಡಿಸಿದೆ.
ಸದ್ಯ ರಾಜ್ಯದಲ್ಲಿ 18 ವರ್ಷ ಮೇಲ್ಪಟ್ಟ1.6 ಕೋಟಿ ಜನರು ಮೂರನೇ ಡೋಸ್‌ಗೆ ಅರ್ಹರಿದ್ದಾರೆ. ಆದರೆ, ಈವರೆಗೂ 26 ಲಕ್ಷ ಮಂದಿ (ಶೇ.15ರಷ್ಟು) ಮಾತ್ರವೇ ಮೂರನೇ ಡೋಸ್ ಪಡೆದಿದ್ದಾರೆ. 1.34 ಕೋಟಿ ಮಂದಿ ಎರಡನೇ ಡೋಸ್ ಪಡೆದು ಒಂಬತ್ತು ತಿಂಗಳು ಪೂರ್ಣಗೊಂಡಿದ್ದರೂ ಮೂರನೇ ಡೋಸ್ ಪಡೆದಿಲ್ಲ. ಅಲ್ಲದೇ, 6.5 ಲಕ್ಷ ಆರೋಗ್ಯ ಕಾರ್ಯಕರ್ತರ ಪೈಕಿ 4.71 ಲಕ್ಷ ಮಂದಿ, 7.1 ಲಕ್ಷ ಮುಂಚೂಣಿ ಕಾರ್ಯಕರ್ತರ ಪೈಕಿ 4.4 ಲಕ್ಷ ಮಂದಿ ಮಾತ್ರ ಮೂರನೇ ಡೋಸ್ ಪಡೆದಿದ್ದು, ಈ ಎರಡೂ ವಲಯದಲ್ಲಿ ಐದು ಲಕ್ಷ ಮಂದಿ ಇಂದಿಗೂ ಮೂರನೇ ಡೋಸ್‌ನಿಂದ ದೂರ ಉಳಿದಿದ್ದಾರೆ.
Corona Vaccine: 4 ಕೋಟಿ ಜನರು ಒಂದು ಡೋಸು ಪಡೆದಿಲ್ಲ: ಕೇಂದ್ರ
ಸಂದೇಶಕ್ಕೆ ನಿರ್ಲಕ್ಷ್ಯ: ಮುನ್ನೆಚ್ಚರಿಕಾ ಡೋಸ್ ಪಡೆಯುವಂತೆ ಈ ಮೊದಲು ನೋಂದಣಿ ಮಾಡಿದ ಮೊಬೈಲ್ ನಂಬರ್‌ಗೆ ಒಂದು ತಿಂಗಳಿಂದ ರಾಜ್ಯದ ಒಂದು ಕೋಟಿಗೂ ಅಧಿಕ ಮಂದಿಗೆ ಸಂದೇಶ ಬಂದಿದ್ದು, ಈ ಪೈಕಿ ಬಹುತೇಕರು ನಿರ್ಲಕ್ಷ್ಯ ವಹಿಸಿದ್ದಾರೆ ಎಂದು ಆರೋಗ್ಯ ಇಲಾಖೆ ಮೂಲಗಳು ತಿಳಿಸಿವೆ.