ಹುಬ್ಬಳ್ಳಿ: ಎರಡು ಗೂಡ್ಸ್ ವಾಹನಗಳ ಮಧ್ಯೆ ಅಪಘಾತ: 12 ಜನರಿಗೆ ಗಾಯ

Published : Jun 16, 2022, 09:53 PM IST
ಹುಬ್ಬಳ್ಳಿ: ಎರಡು ಗೂಡ್ಸ್ ವಾಹನಗಳ ಮಧ್ಯೆ ಅಪಘಾತ: 12 ಜನರಿಗೆ ಗಾಯ

ಸಾರಾಂಶ

*  ಧಾರವಾಡ ಜಿಲ್ಲೆಯ ಕಲಘಟಗಿ ತಾಲೂಕಿನ ಶೀಗಿಗಟ್ಟಿ ಬಳಿ ನಡೆದ ಘಟನೆ *  ಗಾಯಾಳುಗಳಿಗೆ ಹುಬ್ಬಳ್ಳಿ ಕಿಮ್ಸ್‌ ಅಸ್ಪತ್ರೆಯಲ್ಲಿ ಚಿಕಿತ್ಸೆ *  ಕಲಘಟಗಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದ ಘಟನೆ   

ಹುಬ್ಬಳ್ಳಿ(ಜೂ.16): ಟಾಟಾ ಏಸ್ ಹಾಗೂ 407 ಗೂಡ್ಸ್ ವಾಹನದ ನಡುವೆ ಡಿಕ್ಕಿ ಸಂಭವಿಸಿದ ಪರಿಣಾಮ 12 ಜನರಿಗೆ ಗಾಯಗಳಾಗಿರುವ ಘಟನೆ ಕಲಘಟಗಿ ತಾಲೂಕಿನ ಶೀಗಿಗಟ್ಟಿ ಬಳಿ ಇಂದು(ಗುರುವಾರ) ನಡೆದಿದೆ.

ಟಾಟಾ ಏಸ್ ವಾಹನದಲ್ಲಿ ಅಂತ್ಯ ಸಂಸ್ಕಾರಕ್ಕೆ ತೆರಳುತ್ತಿದ್ದ 12 ಜನರು ಅಪಘಾತದಲ್ಲಿ ಗಾಯಗೊಂಡು ಕಿಮ್ಸ್ ಆಸ್ಪತ್ರೆಗೆ ದಾಖಲಾಗಿದ್ದಾರೆ. ಗಾಯಾಳುಗಳು ಕಲಘಟಗಿ ತಾಲೂಕಿನ ದೇವಿಕೊಪ್ಪ ಗ್ರಾಮದವರು ಎಂದು ತಿಳಿದು ಬಂದಿದ್ದು, ಅಂತ್ಯ ಸಂಸ್ಕಾರಕ್ಕೆ ತೆರಳುತ್ತಿದ್ದ ವೇಳೆ ಘಟನೆ ಸಂಭವಿಸಿದೆ.

Dharwad News: ಅಪಘಾತಕ್ಕೀಡಾದ ದಂಪತಿಯನ್ನು ಸ್ವಂತ ವಾಹನದಲ್ಲಿ ಆಸ್ಪತ್ರೆಗೆ ದಾಖಲಿಸಿ ಮಾನವೀಯತೆ ಮೆರೆದ ತಹಶೀಲ್ದಾರ್

ಇನ್ನೂ ಗಾಯಾಳುಗಳನ್ನು ಹುಬ್ಬಳ್ಳಿ ಕಿಮ್ಸ್ ಆಸ್ಪತ್ರೆಗೆ ದಾಖಲು ಮಾಡಲಾಗಿದ್ದು, ಚಿಕಿತ್ಸೆ ನೀಡಲಾಗುತ್ತಿದೆ. ಅದೃಷ್ಟವಶಾತ್ ಯಾವುದೆ ಪ್ರಾಣಾಪಾಯ ಸಂಭವಿಸಿಲ್ಲ. ಕಲಘಟಗಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
 

PREV
Read more Articles on
click me!

Recommended Stories

ವೈದ್ಯರ ವರದಿ ಬಳಿಕ ಜೈಲಿನಲ್ಲಿ ನಟ ದರ್ಶನ್‌ಗೆ ಫಿಸಿಯೋಥೆರಪಿ ಚಿಕಿತ್ಸೆ ಸ್ಥಗಿತ
ಚಿಕ್ಕಮಗಳೂರು ಕಾಂಗ್ರೆಸ್ ಕಾರ್ಯಕರ್ತ ಗಣೇಶ್ ಗೌಡ ಹಂತಕರನ್ನು ಸುಮ್ಮನೆ ಬಿಡಲ್ಲ: ಸಿಎಂ ಡಿಸಿಎಂ