ಚಿತ್ರದುರ್ಗ: ವದ್ದಿಕೆರೆ ಸಿದ್ದಪ್ಪನ ಹುಂಡಿಯಲ್ಲಿತ್ತು ಒಂದೂಕಾಲು ಕೋಟಿ ರೂಪಾಯಿ..!

By Kannadaprabha News  |  First Published Sep 28, 2023, 1:08 PM IST

ಜಿಲ್ಲಾಧಿಕಾರಿಗಳ ನಿರ್ದೇಶನದಂತೆ ಸಿದ್ದೇಶ್ವರ ಸ್ವಾಮಿ ದೇವಸ್ಥಾನದ ಆಡಳಿತ ಅಧಿಕಾರಿಗಳು ಹಾಗೂ ಉಪವಿಭಾಗಾಧಿಕಾರಿ ಎಂ ಕಾರ್ತಿಕ್ ಹಾಗೂ ತಹಸೀಲ್ದಾರ್ ರಾಜೇಶ್‌ಕುಮಾರ್ ಮಾರ್ಗದರ್ಶನದಲ್ಲಿ ದೇವಸ್ಥಾನದಲ್ಲಿನ ಕಾಣಿಕೆ ಹುಂಡಿಗಳ ಹಣವನ್ನು ಎಣಿಕೆ ಮಾಡಲಾಯಿತು. 1,24,67,800 ರು ಗಳು ಕಾಣಿಕೆ ಹುಂಡಿಯಲ್ಲಿ ಸಂಗ್ರಹವಾಗಿದೆ. 


ಹಿರಿಯೂರು(ಸೆ.28): ತಾಲೂಕಿನ ಸುಪ್ರಸಿದ್ದ ವದ್ದಿಕೆರೆ ಗ್ರಾಮದ ಶ್ರೀ ಕಾಲಭೈರವೇಶ್ವರ, ಸಿದ್ದೇಶ್ವರ ಸ್ವಾಮಿ ದೇವಸ್ಥಾನದ ಹುಂಡಿಯಲ್ಲಿ ಕೋಟಿ ರುಪಾಯಿಗೂ ಹೆಚ್ಚು ಹಣ ಸಂಗ್ರಹವಾಗಿದೆ. ಇತಿಹಾಸದಲ್ಲಿ ಇದೇ ಮೊದಲ ಬಾರಿಗೆ ದಾಖಲೆ ಹುಂಡಿ ಮೊತ್ತ ಇದಾಗಿದೆ.

ಜಿಲ್ಲಾಧಿಕಾರಿಗಳ ನಿರ್ದೇಶನದಂತೆ ಸಿದ್ದೇಶ್ವರ ಸ್ವಾಮಿ ದೇವಸ್ಥಾನದ ಆಡಳಿತ ಅಧಿಕಾರಿಗಳು ಹಾಗೂ ಉಪವಿಭಾಗಾಧಿಕಾರಿ ಎಂ ಕಾರ್ತಿಕ್ ಹಾಗೂ ತಹಸೀಲ್ದಾರ್ ರಾಜೇಶ್‌ಕುಮಾರ್ ಮಾರ್ಗದರ್ಶನದಲ್ಲಿ ದೇವಸ್ಥಾನದಲ್ಲಿನ ಕಾಣಿಕೆ ಹುಂಡಿಗಳ ಹಣವನ್ನು ಎಣಿಕೆ ಮಾಡಲಾಯಿತು. 1,24,67,800 ರು ಗಳು ಕಾಣಿಕೆ ಹುಂಡಿಯಲ್ಲಿ ಸಂಗ್ರಹವಾಗಿದೆ. ಇದರಲ್ಲಿ ವಿದೇಶಿ ಕರೆನ್ಸಿಗಳು ಸೇರಿದಂತೆ ಭಕ್ತರು ಹರಕೆ ರೂಪದಲ್ಲಿ ಸಲ್ಲಿಸಿದ ಬಂಗಾರ ಮತ್ತು ಬೆಳ್ಳಿ ಆಭರಣಗಳು ಸಹ ಕಾಣಿಕೆ ರೂಪದಲ್ಲಿ ಸ್ವಾಮಿಗೆ ಅರ್ಪಿತವಾಗಿವೆ.

Tap to resize

Latest Videos

undefined

ಚಿತ್ರದುರ್ಗದಲ್ಲಿ ಅಮಾನವೀಯ ಘಟನೆ: ಅಂತರ್ ಜಾತಿ ವಿವಾಹವಾಗಿದ್ದಕ್ಕೆ ವಾಕ್-ಶ್ರವಣ ದೋಷದ ದಂಪತಿಗೆ ಬಹಿಷ್ಕಾರ

ಕಾಣಿಕೆಹುಂಡಿಯಲ್ಲಿ ಸಂಗ್ರಹವಾದ ಹಣವನ್ನು ದೇವಸ್ಥಾನದ ಹೆಸರಿನಲ್ಲಿ ತೆರೆದಿರುವ ಉಳಿತಾಯ ಖಾತೆಗಳಿಗೆ ಸಮನಾಗಿ ಜಮಾ ಮಾಡಲಾಗಿದೆ. ದೇವಸ್ಥಾನದ ವ್ಯವಸ್ಥಾಪನ ಸಮಿತಿಯ ಸದಸ್ಯರುಗಳು ಹಾಗೂ ತಾಲೂಕಿನ ಕಂದಾಯ ಇಲಾಖೆಯ ಅಧಿಕಾರಿಗಳು ಸಿಬ್ಬಂದಿ ವರ್ಗದವರು, ಗ್ರಾಮಸ್ಥರುಗಳು ಹಾಜರಿದ್ದರು. 

click me!