ಬೆಂಗಳೂರಲ್ಲಿ ಗೂಡ್ಸ್ ವಾಹನಗಳ ಜಪ್ತಿ ! RTO ಎಚ್ಚರಿಕೆ

Published : Jul 05, 2019, 07:40 AM IST
ಬೆಂಗಳೂರಲ್ಲಿ  ಗೂಡ್ಸ್ ವಾಹನಗಳ ಜಪ್ತಿ ! RTO ಎಚ್ಚರಿಕೆ

ಸಾರಾಂಶ

ಬೆಂಗಳೂರಲ್ಲಿ 125ಕ್ಕೂ ಹೆಚ್ಚು ಗೂಡ್ಸ್ ವಾಹನಗಳನ್ನು ಜಪ್ತಿ ಮಾಡಲಾಗಿದ್ದು, ಎಚ್ಚರಿಕೆ ನೀಡಲಾಗಿದೆ. 

ಬೆಂಗಳೂರು [ಜು.04] :  ನಗರದಲ್ಲಿ ಅಕ್ರಮವಾಗಿ ಜನರನ್ನು ಸಾಗಿಸುತ್ತಿದ್ದ 125 ಗೂಡ್ಸ್ ವಾಹನಗಳನ್ನು ಸಾರಿಗೆ ಇಲಾಖೆ ಅಧಿಕಾರಿಗಳು ಜಪ್ತಿ ಮಾಡಿದ್ದಾರೆ. ಹೈಕೋರ್ಟ್ ನಿರ್ದೇಶನದ ಮೇರೆಗೆ ನಗರದಾದ್ಯಂತ ವಿಶೇಷ ಕಾರ್ಯಾರಣೆ ಕೈಗೊಂಡಿದ್ದ ಸಾರಿಗೆ ಇಲಾಖೆ ಅಧಿಕಾರಿಗಳು, ಸುಮಾರು 16 ಸಾವಿರ ವಾಹನಗಳನ್ನು ತಪಾಸಣೆಗೆ ಒಳಪಡಿಸಿದ್ದಾರೆ. 

ಈ ಪೈಕಿ ನಿಯಮ ಉಲ್ಲಂಘಿಸಿದ 558 ವಾಹನಗಳ ವಿರುದ್ಧ ಪ್ರಕರಣ ದಾಖಲಿಸಿ, 12 ಲಕ್ಷ ದಂಡ ವಸೂಲಿ ಮಾಡಿದ್ದಾರೆ. ಅಲ್ಲದೆ, 158  ವಾಹನಗಳ ರಹದಾರಿ ಹಾಗೂ 113 ವಾಹನಗಳ ನೋಂದಣಿ ಪತ್ರ ಅಮಾನತ್ತು ಗೊಳಿಸಿದ್ದಾರೆ. ಇದೇ ರೀತಿ ಆಟೋರಿಕ್ಷಾ, ಮ್ಯಾಕ್ಸಿಕ್ಯಾಬ್, ಮಾರುತಿ ವ್ಯಾನ್ ಸೇರಿದಂತೆ ಇತರೆ ವಾಹನಗಳಲ್ಲಿ ಸಾಮರ್ಥ್ಯಕ್ಕಿಂತ ಹೆಚ್ಚು ಶಾಲಾ ಮಕ್ಕಳನ್ನು ಸಾಗಿಸುವ ವಾಹನಗಳ ವಿರುದ್ಧವೂ ಕಾರ್ಯಾಚರಣೆ ಕೈಗೊಂಡಿದ್ದು, ನಿಯಮ ಉಲ್ಲಂಘಿಸಿ ಸಂಚರಿಸುತ್ತಿದ್ದ 668 ವಾಹನಗಳ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ. 

60 ಕ್ಕೂ ಹೆಚ್ಚು ವಾಹನಗಳನ್ನು ಜಪ್ತಿ ಮಾಡಿ, 11 ಲಕ್ಷ ರು. ವಸೂಲಿ ಮಾಡಿದ್ದಾರೆ. ಪದೇ ಪದೇ ನಿಯಮ ಉಲ್ಲಂಘಿಸಿದರೆ ಆರ್‌ಸಿ ರದ್ದುಗೊಳಿಸಲು ಚಿಂತಿಸಲಾಗಿದೆ ಎಂದು ಜಂಟಿ ಸಾರಿಗೆ ಆಯುಕ್ತ ಜೆ.ಜ್ಞಾನೇಂದ್ರ ಕುಮಾರ್ ತಿಳಿಸಿದರು. 

PREV
click me!

Recommended Stories

ವಿದ್ಯಾರ್ಥಿನಿಯರ ಮೈಮುಟ್ಟಿ ಅಸಭ್ಯ ವರ್ತನೆ; ಪ್ರೌಢಶಾಲೆಗೆ ನುಗ್ಗಿ ಪ್ರಾಂಶುಪಾಲನಿಗೆ ಧರ್ಮದೇಟು ಕೊಟ್ಟ ಗ್ರಾಮಸ್ಥರು!
ಮೈಸೂರು ಏಕತಾ ಮಹಲ್‌ ವಿವಾದ, ಕೋರ್ಟ್ ಮೆಟ್ಟಲೇರಿದ ರಾಜಮಾತೆ ಪ್ರಮೋದಾದೇವಿ!