ಬೆಳಗಾವಿ: ಜಾತ್ರೆಯಲ್ಲಿ ಪ್ರಸಾದ ಸೇವಿಸಿ 128 ಜನ ಅಸ್ವಸ್ಥ

By Kannadaprabha News  |  First Published May 23, 2024, 6:20 AM IST

ಬೆಳಗಾವಿ ಜಿಲ್ಲೆಯ ಸವದತ್ತಿ ತಾಲೂಕಿನ ಹೂಲಿಕಟ್ಟಿ ಗ್ರಾಮದಲ್ಲಿ ನಡೆದ ಬೀರೇಶ್ವರ ಮತ್ತು ಕರಿಯಮ್ಮನ ಜಾತ್ರೆಯಲ್ಲಿ ಜನರು ಅನ್ನ ಪ್ರಸಾದ ಮತ್ತು ಮನೆಯಲ್ಲಿ ಮಾವಿನ ಹಣ್ಣಿನ ಶಿಖರಣಿ ಸೇವಿಸಿದ್ದರು. ಆದರೆ ಪ್ರಸಾದ ಸೇವಿಸಿದವರಲ್ಲಿ ಏಕಾಏಕಿ ವಾಂತಿ-ಭೇದಿ ಆರಂಭವಾಗಿದೆ. ಕೂಡಲೇ ಅಸ್ವಸ್ಥಗೊಂಡವರನ್ನು ಸ್ಥಳೀಯ ಆಸ್ಪತ್ರೆ, ಸವದತ್ತಿ ಸಾರ್ವಜನಿಕ ಆಸ್ಪತ್ರೆ ಹಾಗೂ ಬೆಳಗಾವಿ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ.


ಬೆಳಗಾವಿ(ಮೇ.23): ಜಾತ್ರೆಯಲ್ಲಿ ಪ್ರಸಾದ ಸೇವಿಸಿ 128 ಜನರು ಅಸ್ವಸ್ಥರಾಗಿದ್ದು, ಐವರ ಸ್ಥಿತಿ ಗಂಭೀರವಾದ ಘಟನೆ ಬೆಳಗಾವಿ ಜಿಲ್ಲೆಯ ಸವದತ್ತಿ ತಾಲೂಕಿನ ಹೂಲಿಕಟ್ಟಿ ಗ್ರಾಮದಲ್ಲಿ ಬುಧವಾರ ನಡೆದಿದೆ.

ಗ್ರಾಮದಲ್ಲಿ ನಡೆದ ಬೀರೇಶ್ವರ ಮತ್ತು ಕರಿಯಮ್ಮನ ಜಾತ್ರೆಯಲ್ಲಿ ಜನರು ಅನ್ನ ಪ್ರಸಾದ ಮತ್ತು ಮನೆಯಲ್ಲಿ ಮಾವಿನ ಹಣ್ಣಿನ ಶಿಖರಣಿ ಸೇವಿಸಿದ್ದರು. ಆದರೆ ಪ್ರಸಾದ ಸೇವಿಸಿದವರಲ್ಲಿ ಏಕಾಏಕಿ ವಾಂತಿ-ಭೇದಿ ಆರಂಭವಾಗಿದೆ. ಕೂಡಲೇ ಅಸ್ವಸ್ಥಗೊಂಡವರನ್ನು ಸ್ಥಳೀಯ ಆಸ್ಪತ್ರೆ, ಸವದತ್ತಿ ಸಾರ್ವಜನಿಕ ಆಸ್ಪತ್ರೆ ಹಾಗೂ ಬೆಳಗಾವಿ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ.

Latest Videos

undefined

ಬೆಳಗಾವಿಯಲ್ಲೊಂದು ಅಮಾನವೀಯ ಘಟನೆ..ಕೈಕೊಟ್ಟ ಬೆಳೆ, ಜೀವನಕ್ಕೆ ಸಾಲದ ಮೊರೆ ಹೋದ ರೈತ ಆತ್ಮಹತ್ಯೆ

ಹೂಲಿಕಟ್ಟಿ ಗ್ರಾಮದ ಸಿದ್ದೇಶ್ವರ ದೇವಸ್ಥಾನದಲ್ಲಿ ಪ್ರಾಥಮಿಕ ಕೇಂದ್ರ ಆರಂಭಿಸಲಾಗಿದ್ದು, ಅಸ್ವಸ್ಥಗೊಂಡವರಿಗೆ ಚಿಕಿತ್ಸೆ ನೀಡಲಾಗುತ್ತಿದೆ. ಧಾರವಾಡ ಜಿಲ್ಲಾಸ್ಪತ್ರೆ ಮತ್ತು ಕಿಮ್ಸ್‌ಗೆ 17 ಜನರನ್ನು ದಾಖಲಿಸಲಾಗಿದ್ದು, ಅದರಲ್ಲಿ ಐವರು ವಯೋವೃದ್ಧರ ಸ್ಥಿತಿ ಗಂಭೀರವಾಗಿದೆ.

ಸದ್ಯರೋಗಿಗಳ ಮೇಲೆ ಪ್ರತಿ ಗಂಟೆಗೂ ನಿಗಾ ಇಡಲಾಗಿದೆ. ಅಲ್ಲದೇ, ಗ್ರಾಮಕ್ಕೆ ಪೂರೈಕೆಯಾಗುವ ಕುಡಿಯುವ ನೀರಿನ ಮಾದರಿಯನ್ನು ಪ್ರಯೋಗಾಲಯಕ್ಕೆ ಕಳುಹಿಸಲಾಗಿದೆ. ತೀವ್ರ ಅಸ್ವಸ್ಥಗೊಂಡ ಐವರನ್ನು ಧಾರವಾಡ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ. ಸದ್ಯ ಆರೋಗ್ಯ ಇಲಾಖೆ ಅಧಿಕಾರಿಗಳು ಗ್ರಾಮದಲ್ಲಿಯೇ ಬೀಡು ಬಿಟ್ಟಿದ್ದಾರೆ. ಇನ್ನು ಅಹಿತಕರ ಘಟನೆ ನಡೆಯದಂತೆ ತಾಲೂಕಾಧಿಕಾರಿಗಳು ಗ್ರಾಮದಲ್ಲಿ ಕ್ಯಾಂಪ್ ತೆರೆದು ಪ್ರತಿಯೊಬ್ಬರ ಆರೋಗ್ಯ ತಪಾಸಣೆ ಮಾಡುತ್ತಿದ್ದಾರೆ. ಹೂಲಿಕಟ್ಟಿ ಗ್ರಾಮಕ್ಕೆ ಶಾಸಕ ವಿಶ್ವಾಸ ವೈದ್ಯ ಭೇಟಿ ನೀಡಿ, ಗ್ರಾಮಸ್ಥರೊಂದಿಗೆ ಚರ್ಚೆ ನಡೆಸಿ, ಪರಿಸ್ಥಿತಿ ನಿಯಂತ್ರಣಕ್ಕೆ ಬರುವವರೆಗೆ ಕರಿಯಮ್ಮನ ಜಾತ್ರೆ ಮಾಡದಂತೆ ಗ್ರಾಮಸ್ಥರಿಗೆ ಮನವಿ ಮಾಡಿದರು.

click me!