Covid Crisis: ಸಿಲಿಕಾನ್ ಸಿಟಿಯಲ್ಲಿ 1000ದ ಆಸುಪಾಸಿಗೆ ತಗ್ಗಿದ ಕೋವಿಡ್‌ ಕೇಸ್‌!

By Kannadaprabha News  |  First Published Feb 13, 2022, 2:00 AM IST

ನಗರದಲ್ಲಿ ಕೊರೋನಾ ಸೋಂಕು ಪ್ರಕರಣಗಳು ಒಂದು ಸಾವಿರ ಆಸುಪಾಸಿಗೆ ಇಳಿಕೆಯಾಗಿದ್ದು, ಸಕ್ರಿಯ ಸೋಂಕಿತರ ಸಂಖ್ಯೆ 15 ಸಾವಿರಕ್ಕೆ ತಗ್ಗಿವೆ.  ನಗರದಲ್ಲಿ ಶನಿವಾರ 1293 ಮಂದಿಗೆ ಸೋಂಕು ತಗುಲಿದ್ದು, 10 ಜನರು ಸಾವಿಗೀಡಾಗಿದ್ದಾರೆ.


ಬೆಂಗಳೂರು (ಫೆ.13): ನಗರದಲ್ಲಿ ಕೊರೋನಾ ಸೋಂಕು ಪ್ರಕರಣಗಳು (Coronavirus cases) ಒಂದು ಸಾವಿರ ಆಸುಪಾಸಿಗೆ ಇಳಿಕೆಯಾಗಿದ್ದು, ಸಕ್ರಿಯ ಸೋಂಕಿತರ ಸಂಖ್ಯೆ 15 ಸಾವಿರಕ್ಕೆ ತಗ್ಗಿವೆ. ನಗರದಲ್ಲಿ ಶನಿವಾರ 1293 ಮಂದಿಗೆ ಸೋಂಕು ತಗುಲಿದ್ದು, 10 ಜನರು ಸಾವಿಗೀಡಾಗಿದ್ದಾರೆ. 3,833 ಮಂದಿ ಗುಣಮುಖರಾಗಿದ್ದಾರೆ. ಸದ್ಯ 15,679 ಸೋಂಕಿತರು ಆಸ್ಪತ್ರೆ/ಮನೆಯಲ್ಲಿ ಚಿಕಿತ್ಸೆ, ಆರೈಕೆಯಲ್ಲಿದ್ದಾರೆ. 52 ಸಾವಿರ ಪರೀಕ್ಷೆ ನಡೆದಿದ್ದು, ಶೇ.2.5 ರಷ್ಟುಪಾಸಿಟಿವಿಟಿ ದರ ದಾಖಲಾಗಿದೆ. 

ಶುಕ್ರವಾರಕ್ಕೆ ಹೋಲಿಸಿದರೆ ಸೋಂಕು ಪರೀಕ್ಷೆಗಳು ಎರಡು ಸಾವಿರ ಇಳಿಕೆಯಾಗಿದ್ದು, ಹೊಸ ಪ್ರಕರಣಗಳ ಸಂಖ್ಯೆ 432 ಕುಸಿದಿವೆ. ಹೊಸ ಪ್ರಕರಣಗಳು ನಿರಂತರ ಇಳಿಕೆಯಿಂದ ಸಕ್ರಿಯ ಸೋಂಕು ಪ್ರಕರಣಗಳು 15 ಸಾವಿರಕ್ಕಿಂತ ತಗ್ಗಿವೆ. ಸಕ್ರಿಯ ಸೋಂಕಿತರ ಪೈಕಿ 755 ಮಂದಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಈ ಪೈಕಿ 204 ಸೋಂಕಿತರ ಆರೋಗ್ಯ ಸ್ಥಿತಿ ಗಂಭೀರವಾಗಿದ್ದು, ತುರ್ತು ನಿಗಾ ಘಟಕದಲ್ಲಿದ್ದಾರೆ. ಉಳಿದ 14 ಸಾವಿರಕ್ಕೂ ಅಧಿಕ ಸೋಂಕಿತರು ಮನೆ ಆರೈಕೆಯಲ್ಲಿದ್ದಾರೆ.

Latest Videos

ಶನಿವಾರ 46 ವರ್ಷ ವಯಸ್ಕ, 60 ವರ್ಷ ಮೇಲ್ಪಟ್ಟ9 ವಯೋವೃದ್ಧ ಸೋಂಕಿತರು ಸಾವು ವರದಿಯಾಗಿದೆ. ಈವರೆಗೆ ಸೋಂಕಿಗೆ ಒಳಗಾದವರ ಸಂಖ್ಯೆ 17.8 ಲಕ್ಷಕ್ಕೆ, ಗುಣಮುಖರ ಸಂಖ್ಯೆ 17.3 ಲಕ್ಷಕ್ಕೆ, ಸಾವಿನ ಸಂಖ್ಯೆ 16,763ಕ್ಕೆ ಏರಿಕೆಯಾಗಿದೆ. ಬಿಬಿಎಂಪಿ ಅಧಿಕಾರಿಗಳು ನಗರದಲ್ಲಿ ಐದಕ್ಕಿಂತ ಕಡಿಮೆ ಕೊರೋನಾ ಪ್ರಕರಣವಿರುವ 13 ಸಕ್ರಿಯ ಕಂಟೈನ್ಮೆಂಟ್‌ ವಲಯ, ಐದಕ್ಕೂ ಹೆಚ್ಚು ಕೊರೋನಾ ಪ್ರಕರಣವಿರುವ 20 ಕ್ಲಸ್ಟರ್‌ ವಲಯಗಳನ್ನು ಗುರುತಿಸಿದ್ದಾರೆ.

Covid Crisis: ಸಿಲಿಕಾನ್ ಸಿಟಿಯಲ್ಲಿ ಕೊರೋನಾ ಮತ್ತಷ್ಟು ಇಳಿಕೆ

ಸಂಭಾವ್ಯ ಕೊರೋನಾದ ಹೊಸ ಅಲೆ ಎದುರಿಸಲು ಸಿದ್ಧರಾಗಬೇಕು: ಕೊರೋನಾ ಮೂರನೇ ಅಲೆಯನ್ನು(Corona 3rd Wave) ಸಮರ್ಥವಾಗಿ ಎದುರಿಸಿದ್ದು, ಭವಿಷ್ಯದಲ್ಲಿ ಸಂಭಾವ್ಯ ಅಲೆಗಳನ್ನು ಎದುರಿಸಲು ಸಿದ್ಧರಾಗಬೇಕು ಎಂದು ಪಾಲಿಕೆ ಮುಖ್ಯ ಆಯುಕ್ತ ಗೌರವ್‌ ಗುಪ್ತಾ(Gaurav Gupta) ಅವರು ಹೇಳಿದರು.

ಬುಧವಾರ ಕೋವಿಡ್‌-19(Covid-19) ತಜ್ಞರ ಸಮಿತಿಯೊಂದಿಗೆ ವರ್ಚುವಲ್‌ ಸಭೆಯಲ್ಲಿ ಮಾತನಾಡಿದ ಅವರು, ಪಾಲಿಕೆ ವ್ಯಾಪ್ತಿಯಲ್ಲಿ ಸೋಂಕಿತರ ಸಂಖ್ಯೆ ಇಳಿಕೆಯಾಗಿದ್ದು, ಎಲ್ಲರ ಶ್ರಮದಿಂದ ಯಶಸ್ವಿಯಾಗಿ ಕೊರೋನಾ ಮೂರನೇ ಅಲೆಯನ್ನು ನಿಭಾಯಿಸಿದ್ದೇವೆ. ಮುಂದೇನಾದರೂ ಹೊಸ ಅಲೆಗಳು ಬಂದಲ್ಲಿ ಅವುಗಳನ್ನು ಸಹ ಎದುರಿಸಲು ಸದಾ ಸಿದ್ಧರಾಗಿರಬೇಕು ಎಂದರು.

ಬಿಬಿಎಂಪಿ(BBMP) ವ್ಯಾಪ್ತಿಯಲ್ಲಿ ಕ್ರಿಯಾಶೀಲ ಸಂಚಾರಿ ಟ್ರಯಾಜ್‌ ಮತ್ತು ಟೆಲಿ ಟ್ರಯಾಜ್‌ ಘಟಕ, ವೈದ್ಯರು ಮತ್ತು ಸಿಬ್ಬಂದಿ ನೆರವಿನಿಂದ ದಿನಕ್ಕೆ 3 ಸಾವಿರಕ್ಕೂ ಹೆಚ್ಚು ಕೋವಿಡ್‌ ಸೋಂಕಿತರಿಗೆ ಮನೆಯಲ್ಲಿ ಟ್ರಯಾಜ್‌ ಮಾಡಲಾಗುತ್ತಿದೆ. ಮೂರನೇ ಅಲೆಯ ಬಗ್ಗೆ ಜನರಲ್ಲಿನ ಭಯ ಹೋಗಲಾಡಿಸುವ ಕಾರ್ಯ ಮಾಡಿದ್ದೇವೆ. ಶೀಘ್ರದಲ್ಲಿಯೇ ಮುನ್ನೆಚ್ಚರಿಕೆ ಡೋಸ್‌ ಲಸಿಕಾಕರಣವು(VAccination) ನಿರ್ದೇಶಿತ ಗುರಿ ತಲುಪಲಿದೆ ಎಂದು ಹೇಳಿದರು. ಜನವರಿಯಲ್ಲಿ ತಿಂಗಳಲ್ಲಿ ಕೋವಿಡ್‌ ದಾಖಲಾತಿಗಳಲ್ಲಿ ಕೇವಲ ಶೇಕಡ 1.8 ಸಕ್ರಿಯ ಪ್ರಕರಣಗಳಿದ್ದವು. 

Covid Crisis: ಬೆಂಗ್ಳೂರಲ್ಲಿ ವಾರದಲ್ಲಿ 2 ಲಕ್ಷ ಮಂದಿ ಗುಣಮುಖ: 92,000 ಕ್ಕಿಳಿದ ಸಕ್ರಿಯ ಕೇಸ್‌

ಅದರಲ್ಲಿ ಹೆಚ್ಚಿನವರು 60 ವರ್ಷ ಮೇಲ್ಪಟ್ಟವರು. ನಗರದಲ್ಲಿ ಕೋವಿಡ್‌ ಸೋಂಕು ದೃಢಪಟ್ಟು, ಐಸಿಯುನಲ್ಲಿ ದಾಖಲಾಗುವ ಎಲ್ಲ ಪ್ರಕರಣಗಳನ್ನು ಮೇಲ್ವಿಚಾರಣೆ ಮಾಡಲು ಸೂಚಿಸಲಾಗಿದೆ. ಈ ಸಂಬಂಧ ಗಂಭೀರ ಪ್ರಕರಣಗಳ ಪೈಕಿ ಆಸ್ಪತ್ತೆಗೆ ದಾಖಲಾಗಿರುವವರ ಮಾದರಿಗಳನ್ನು ಜಿನೋಮಿಕ್‌ ಸಿಕ್ವೆನ್ಸಿಂಗ್‌ಗೆ ಕಳುಹಿಸಲಾಗುತ್ತದೆ. ಪ್ರಸ್ತುತ ಅಂತಹ ಎಲ್ಲ ಮಾದರಿಗಳನ್ನು ಮೇಲ್ವಿಚಾರಣೆ ಮಾಡಲಾಗುತ್ತಿದೆ ಎಂದು ತಿಳಿಸಿದರು. ಸಭೆಯಲ್ಲಿ ವಿಶೇಷ ಆಯುಕ್ತ ಡಾ. ತ್ರಿಲೋಕ್‌ ಚಂದ್ರ, ಮುಖ್ಯ ಆರೋಗ್ಯಾಧಿಕಾರಿ ಡಾ. ಬಾಲಸುಂದರ್‌, ಕೋವಿಡ್‌ ತಜ್ಞರ ಸಮಿತಿ ಸದಸ್ಯರು ಹಾಗೂ ಇನ್ನಿತರು ಉಪಸ್ಥಿತರಿದ್ದರು.

click me!